ದಕ್ಷಿಣ ಕನ್ನಡ | ಮೀಟರ್ ರೀಡರ್ ಎಡವಟ್ಟು; ಮನೆಗೆ 7.71 ಲಕ್ಷ ರೂ. ವಿದ್ಯುತ್‌ ಬಿಲ್‌ ನೀಡಿದ ಸಿಬ್ಬಂದಿ!

Date:

ಕೆಇಆರ್‌ಸಿ ಆದೇಶದಂತೆ ಈ ತಿಂಗಳು ವಿದ್ಯುತ್ ದರ ಏರಿಕೆಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಮನೆಯೊಂದಕ್ಕೆ ಬರೋಬ್ಬರಿ 7.71 ಲಕ್ಷ ರೂ. ವಿದ್ಯುತ್ ಬಿಲ್ ನೀಡಲಾಗಿತ್ತು. ಮೀಟರ್‌ ರೀಡರ್‌ನಿಂದ ಎಡವಟ್ಟಾಗಿ ಆ ಮೊತ್ತದ ಬಿಲ್‌ ನೀಡಿದ್ದು, ತಪ್ಪು ಗಮನಕ್ಕೆ ಬರುತ್ತಿದ್ದಂತೆಯೇ ಮೆಸ್ಕಾಂ ಅಧಿಕಾರಿಗಳು ತಪ್ಪನ್ನು ಸರಿಪಡಿಸಿ, ಪರಿಷ್ಕೃತ ಬಿಲ್ಲು ನೀಡಿದ್ದಾರೆ.

“ವಿದ್ಯುತ್ ಬಿಲ್ ರಸೀದಿಯಲ್ಲಿ 99,338 ಯೂನಿಟ್ ಖರ್ಚಾಗಿದ್ದು, 7,71,072 ರೂಪಾಯಿ ಬಿಲ್ ನಮೂದಿಸಲಾಗಿದೆ. ತಮಗೆ ಈ ಮೊದಲು 3,000 ದಷ್ಟು ಮಾಸಿಕ ವಿದ್ಯುತ್ ಬಿಲ್ ಬರುತ್ತಿತ್ತು. ನಾವು ಪ್ರತಿ ತಿಂಗಳು ಬಿಲ್ಲನ್ನ ಕಟ್ಟುತ್ತೇವೆ. ಈ‌ ತಿಂಗಳು ಬಂದ ಬಿಲ್ಲನ್ನ ನೋಡಿ ಮನೆ ಮಂದಿಯೆಲ್ಲ ತಬ್ಬಿಬ್ಬಾದೆವು” ಎಂದು ಮನೆ ಮಾಲೀಕ ಸದಾಶಿವ ಆಚಾರ್ಯ ಹೇಳಿದ್ದಾರೆ. ‌

“ಬಿಲ್ ರೀಡಿಂಗ್ ಮಾಡಿದ ವ್ಯಕ್ತಿಯಲ್ಲಿ ವಿಚಾರಿಸಿದಾಗ ಅದೆಲ್ಲ ನನಗೆ ಗೊತ್ತಿಲ್ಲ. ಮೆಸ್ಕಾಂ ಕಚೇರಿಗೆ ಹೋಗಿ ವಿಚಾರಿಸಿ ಎಂದು ಉಡಾಫೆಯ ಉತ್ತರ ನೀಡಿ ತೆರಳಿದ್ದರು” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಸೇವೆ ಒದಗಿಸಲು ವಿಮಾ ಕಂಪನಿ ವಿಫಲ; ಪರಿಹಾರ ನೀಡುವಂತೆ ಆದೇಶ

“ಏಜೆನ್ಸಿಗಳ ಮುಖಾಂತರ ಬಿಲ್ ಕಲೆಕ್ಷನ್ ಮಾಡಲಾಗುತ್ತದೆ. ಬಿಲ್ ರೀಡರ್ ಎಡವಟ್ಟಿನಿಂದ ತಪ್ಪಾಗಿ ವಿದ್ಯುತ್ ಬಿಲ್ ಮುದ್ರಣ ಆಗಿದೆ. ಬಿಲ್ಲಲ್ಲಿ ಲೋಪ ಕಂಡು ಬಂದರೆ ಅದನ್ನು ಗ್ರಾಹಕರಿಗೆ ಕೊಡುವಂತಿಲ್ಲ. ಆದರೂ ಆತ ಕೊಟ್ಟಿದ್ದಾರೆ. ನಮಗೆ ಮಾಹಿತಿ ಲಭಿಸಿದ ಕೂಡಲೇ ನಾವು ಪರಿಷ್ಕೃತ ಬಿಲ್ಲನ್ನು ಸದಾಶಿವ ಅವರ ಮನೆಗೆ ತಲಪುಸಿದ್ದೇವೆ” ಎಂದು ಮೆಸ್ಕಾಂನ ಉಳ್ಳಾಲ ಉಪ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್‌ ದಯಾನಂದ ತಿಳಿಸಿದ್ದಾರೆ.

WhatsApp Image 2025 07 12 at 17.38.34 e1752322718567
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...