ಮಂಗಳೂರು-ಉಡುಪಿ ನಡುವೆ ಶೀಘ್ರವೇ ಮೆಟ್ರೋ ರೈಲು?

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ‘ನಮ್ಮ ಮೆಟ್ರೋ’ ಮಂಗಳೂರು-ಉಡುಪಿಗೂ ಬರುವ ಸಾಧ್ಯತೆ ಇದೆ. ಮಂಗಳೂರು ಮತ್ತು ಉಡುಪಿ ನಡುವೆ ಮೆಟ್ರೋ ಆರಂಭಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಅದಕ್ಕಾಗಿ ವಿಸ್ತೃತ ಯೋಜನಾ ವರದಿ ಸಿದ್ದಪಡಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.

ಕರಾವಳಿ ನಗರಗಳಾಗಿರುವ ಮಂಗಳೂರು ಮತ್ತು ಉಡುಪಿ ನಡುವೆ ಮೆಟ್ರೋ ಕಾರಿಡಾರ್ ಹಂತ-1ನ್ನು ನಿರ್ಮಾಣ ಮಾಡಲು ಸರ್ಕಾರ ಮುಂದಾಗಿದೆ. ಉಭಯ ನಗರಗಳ ನಡುವೆ 60 ಕಿ.ಮೀ ಉದ್ದದ ಮೆಟ್ರೋ ಮಾರ್ಗ ಆರಂಭಿಸಲು ಚಿಂತನೆಗಳು ನಡೆದಿವೆ ಎಂದು ತಿಳಿದುಬಂದಿದೆ.

ಯೋಜನೆ ಸಂಬಂಧ ಯೋಜನಾ ಟಿಪ್ಪಣಿ ಮತ್ತು ವಿಸ್ತೃತ ಯೋಜನಾ ವರದಿ ರೂಪಿಸಲು ಬೆಂಗಳೂರು ಮೆಟ್ರೋ ರೈಲು ನಿಗಮಕ್ಕೆ (ಬಿಎಂಆರ್‌ಸಿಎಲ್) ರಾಜ್ಯ ಸರ್ಕಾರ ಸೂಚಿಸಿದೆ. ಅಲ್ಲದೆ, ಯೋಜನೆಯ ಬಗ್ಗೆ ದಕ್ಷಿಣ ಕನ್ನಡ (ಮಂಗಳೂರು) ಮತ್ತು ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಪತ್ರವನ್ನೂ ಬರೆದಿದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇತ್ತೀಚೆಗೆ, ಮಂಗಳೂರು-ಉಡುಪಿ ನಡುವೆ ಮೆಟ್ರೋ ರೈಲು ಯೋಜನೆ ರೂಪಿಸಬೇಕೆಂದು ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್ ಮತ್ತು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್‌ಗೆ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಮೋಹನ್ ದಾಸ್ ಹೆಗ್ಡೆ ಪತ್ರ ಬರೆದಿದ್ದರು.

ಮಂಗಳೂರು-ಉಡುಪಿ-ಮಣಿಪಾಲ ನಡುವೆ ಪ್ರಮುಖ ನಗರಗಳು, ಪಟ್ಟಣಗಳು ಹಾಗೂ ಕೈಗಾರಿಕಾ ವಲಯಗಳು ಇರುವುದರಿಂದ ಈ ಮಾರ್ಗದಲ್ಲಿ ಮೆಟ್ರೋ ರೈಲು ಯೋಜನೆ ರೂಪಿಸಬೇಕು. ಇದು ಆರ್ಥಿಕ ಅಭಿವೃದ್ಧಿಗೂ ಸಹಕಾರಿಯಾಗಲಿದೆ ಎಂದು ಮೋಹನ್ ದಾಸ್ ವಿವರಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...