ಮೈಕ್ರೋಫೈನಾನ್ಸ್‌ ಕಿರುಕುಳ | ಒಂದೇ ದಿನ ನಾಲ್ವರು ರೈತರು ಆತ್ಮ*ಹತ್ಯೆ

Date:

ಮೈಕ್ರೋಫೈನಾನ್ಸ್‌ ಕಿರುಕುಳ ಮತ್ತು ಬ್ಯಾಂಕ್‌ಗಳ ಸಾಲಬಾಧೆಯಿಂದ ರಾಜ್ಯದಲ್ಲಿ ಒಂದೇ ದಿನ ನಾಲ್ವರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 2, ಹಾಸನ ಮತ್ತು ದಾವಣಗೆರೆಯಲ್ಲಿ ತಲಾ 1 ಪ್ರಕರಣಗಳು ವರದಿಯಾಗಿವೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಬೀಜಿಗನಹಳ್ಳಿ ನಿವಾಸಿ ಗಿರೀಶ್‌ ಅವರು ಮೈಕ್ರೋಫೈನಾನ್ಸ್‌ನಿಂದ ಸಾಲ ಪಡೆದು, ಕೃಷಿ ಕೆಲಸಗಳಿಗಾಗಿ ಟ್ರ್ಯಾಕ್ಟರ್ ಖರೀದಿದ್ದರು. ಆದರೆ, ಸರಿಯಾದ ಸಮಯಕ್ಕೆ ಸಾಲ ಮರುಪಾವತಿ ಮಾಡಲಾಗದ ಕಾರಣಕ್ಕೆ, ಸಾಲ ನೀಡಿದ್ದವರು, ಅವರ ಟ್ರ್ಯಾಕ್ಟರ್‌ಅನ್ನು ಕಿತ್ತುಕೊಂಡಿದ್ದಾರೆ. ಇದರಿಂದ ಮನನೊಂದ ಗಿರೀಶ್‌ ಆತ್ಮಹತ್ಯೆಗೆ ಶರಣಾಗಿದ್ದಾರೆ. ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತೊಂದು ಪ್ರಕರಣದಲ್ಲಿ, ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನ ನರಸಿಂಹಯ್ಯ ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳೆ ಬಿತ್ತನೆಗಾಗಿ ಅವರು ಸಾಲ ಮಾಡಿದ್ದರು. ಆದರೆ, ಬೆಳೆ ನಷ್ಟವಾಗಿ, ಸಾಲ ತೀರಿಸಲಾಗದೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕಂತೆನಹಳ್ಳಿ ನಿವಾಸಿ ರವಿ ಎಂಬವರು ತಮ್ಮ ಜಮೀನಿನಲ್ಲಿ ಶುಂಠಿ ಕೃಷಿ ಮಾಡಲು ಮೈಕ್ರೋಫೈನಾನ್ಸ್‌ ಬಳಿ 9 ಲಕ್ಷ ರೂ. ಸಾಲ ಮಾಡಿದ್ದರು. ಆದರೆ, ಉತ್ತಮ ಇಳುವರಿಯೂ ಬಾರದೆ, ಸರಿಯಾದ ಬೆಲೆಯೂ ಸಿಗದೆ, ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ದೀತೂರು ಗ್ರಾಮದ ಎಲ್.ಕೆ ಸುರೇಶ್ ಅವರು ಬ್ಯಾಂಕ್‌ನಲ್ಲಿ 21 ಲಕ್ಷ ರೂ. ಸಾಲ ಪಡೆದಿದ್ದರು. ಆದರೆ, ಬೆಳೆ ನಷ್ಟದಿಂದಾಗಿ ಸಾಲ ಮರುಪಾವತಿ ಮಾಡಲು ಸಾಧ್ಯವಾಗಿರಲಿಲ್ಲ. ಮರುಪಾವತಿ ಮಾಡುವಂತೆ ಬ್ಯಾಂಕ್‌ನಿಂದ ಪದೇ-ಪದೇ ನೋಟಿಸ್‌ಗಳನ್ನು ನೀಡಲಾಗಿತ್ತು. ಹೀಗಾಗಿ, ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಅವರ ಪತ್ನಿ ಕಲ್ಪನಾ ಅವರು ನೀಡಿದ ದೂರಿನ ಆಧಾರದ ಮೇಲೆ ಹರಿಹರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆತ್ಮಹತ್ಯೆ ಪರಿಹಾರವಲ್ಲ 7

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...