ಮಂಗಳೂರು ಘಟನೆ | ಇನ್ಸ್‌ಪೆಕ್ಟರ್‌ ಅಮಾನತು ಮಾಡಿ, ಉನ್ನತ ತನಿಖೆ ನಡೆಸಿ: ಗೃಹ ಸಚಿವರಿಗೆ ಉಸ್ತುವಾರಿ ಸಚಿವರಿಂದಲೇ ಪತ್ರ

Date:

ಮಂಗಳೂರಿನ ಕುಡುಪು ಎಂಬಲ್ಲಿ ವಲಸೆ ಕಾರ್ಮಿಕನೋರ್ವನನ್ನು ಸುಮಾರು 30ಕ್ಕೂ ಅಧಿಕ ಮಂದಿಯ ಗುಂಪೊಂದು ಕೈಗೆ ಸಿಕ್ಕಿದ್ದನ್ನೆಲ್ಲ ಬಳಸಿಕೊಂಡು ಹತ್ಯೆ ಮಾಡಿತ್ತು. ಈ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸಿದ ಆರೋಪದಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರನ್ನು ಸೇವೆಯಿಂದ ಅಮಾನತು ಮಾಡಿ, ಉನ್ನತಮಟ್ಟದ ತನಿಖೆ ನಡೆಸುವಂತೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಗೃಹ ಸಚಿವರಿಗೆ ಪತ್ರ ಬರೆದಿದ್ದಾರೆ.

ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪುರುಷೋತ್ತಮ್ ಚಿತ್ರಾಪುರ ಅವರು ಉಸ್ತುವಾರಿ ಸಚಿವರಿಗೆ ಮನವಿ ಪತ್ರ ಸಲ್ಲಿಸಿ, ಪ್ರಕರಣವನ್ನು ಮುಚ್ಚಿ ಹಾಕಲು ವ್ಯವಸ್ಥಿತ ಷಡ್ಯಂತ್ರ ನಡೆಸಲಾಗಿದೆ. ಮಾಹಿತಿ ಇದ್ದರೂ ಕೂಡ ಮಂಗಳೂರು ಗ್ರಾಮಾಂತರ ಪೊಲೀಸ್ ನಿರೀಕ್ಷಕರಾದ ಶಿವಪ್ರಸಾದ್ ಸರಿಯಾಗಿ ಕರ್ತವ್ಯ ನಿರ್ವಹಿಸಿಲ್ಲ.‌ ಹಾಗಾಗಿ, ಅಮಾನತು ಮಾಡಿ, ಉನ್ನತ ಮಟ್ಟದ ತನಿಖೆ ನಡೆಸಲು ಕೋರಿದ್ದರು.

ಈ ಹಿನ್ನೆಲೆಯಲ್ಲಿ ಗೃಹ ಸಚಿವ ಪರಮೇಶ್ವರ್ ಅವರಿಗೆ ಪತ್ರ ಬರೆದಿರುವ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಇನ್ಸ್‌ಪೆಕ್ಟರ್‌ ಅಮಾನತು ಮಾಡಿ, ಉನ್ನತ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1000330817

“ದಿನಾಂಕ : 27.04.2025 ರಂದು ಸಂಜೆ ಮಂಗಳೂರು ನಗರ ಹೊರ ವಲಯದ ಕುಡುಪು ಎಂಬಲ್ಲಿ ಉತ್ತರ ಭಾರತದ ವ್ಯಕ್ತಿಯೊಬ್ಬರ ಮೈ ಮೇಲಿನ ಬಟ್ಟೆಗಳನ್ನು ಬಿಚ್ಚಿ. ಅವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಸ್ಥಿತಿಯಲ್ಲಿ ಮೃತ ಶರೀರವು ಮಂಗಳೂರು ಗ್ರಾಮಾಂತರ ಪೊಲೀಸರಿಗೆ ಪತ್ತೆಯಾಗಿದ್ದು, ಮೇಲ್ನೋಟಕ್ಕೆ ಮೃತ ದೇಹದ ಮೇಲೆ ಯಾರೋ ಹಲ್ಲೆ ನಡೆಸಿ ಗಂಭೀರ ಗಾಯಗಳು ಉಂಟಾಗಿರುವುದು ಕಂಡು ಬಂದರೂ ಸಹ ಪೊಲೀಸ್ ನಿರೀಕ್ಷಕರು ಕೂಡಲೇ ಕೊಲೆ ಪ್ರಕರಣವನ್ನು ದಾಖಲಿಸಿಕೊಳ್ಳದೇ ಪ್ರಕರಣವನ್ನು ಮುಚ್ಚಿಹಾಕುವ ಉದ್ದೇಶ ಕೊಲೆ ಪ್ರಕರಣವನ್ನು ಯುಡಿಆರ್ ಪ್ರಕರಣವೆಂದು ದಾಖಲಿಸಿಕೊಂಡಿರುವ ಬಗ್ಗೆ ಪ್ರಸ್ತಾಪಿಸಿ, ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸಿದ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಶಿವಕುಮಾರ್ ರವರನ್ನು ಶೀಘ್ರ ಅಮಾನತ್ತು ಮಾಡಿ, ಉನ್ನತ ಮಟ್ಟದ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸಿ ಪ್ರಕರಣದ ನೈಜ ಆರೋಪಿಗಳನ್ನು ಪತ್ತೆ ಹಚ್ಚಲು ಸೂಕ್ತ ಕ್ರಮಕೈಗೊಳ್ಳುವಂತೆ ಕೋರಿರುತ್ತಾರೆ. ಸದರಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಪತ್ರದಲ್ಲಿ ಪ್ರಸ್ತಾಪಿಸಿರುವ ಅಂಶಗಳ ಬಗ್ಗೆ ಮುಂದಿನ ಅಗತ್ಯ ಕ್ರಮ ಕೈಗೊಳ್ಳಿ” ಎಂದು ದಿನೇಶ್ ಗುಂಡೂರಾವ್ ಗೃಹ ಸಚಿವರಿಗೆ ಬರೆದರುವ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...