ಸಬ್ ರಿಜಿಸ್ಟ್ರಾರ್ ಕಚೇರಿಗೆ ದಿಢೀರ್ ಭೇಟಿ ನೀಡಿದ ಸಚಿವ ಕೃಷ್ಣಭೈರೇಗೌಡ

Date:

  • ಕಾವೇರಿ 2 ತಂತ್ರಾಂಶದ ನೈಜ ಸಮಸ್ಯೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ
  • ಒಂದು ಗಂಟೆಗೂ ಅಧಿಕ ಕಾಲ ಜನರ ಸಮಸ್ಯೆಗಳನ್ನು ಆಲಿಸಿದ ಸಚಿವರು

ಬೆಂಗಳೂರಿನ ಕಾಚರಕನಹಳ್ಳಿ ಸಬ್ ರಿಜಿಸ್ಟ್ರಾರ್ ಕಚೇರಿಗೆ ಮಂಗಳವಾರ ದಿಢೀರ್ ಭೇಟಿ ನೀಡಿರುವ ಸಚಿವ ಕೃಷ್ಣಭೈರೇಗೌಡ ಅವರು, ಸಬ್ ರಿಜಿಸ್ಟ್ರಾರ್ ಕಚೇರಿಗಳು ಎಷ್ಟರ ಮಟ್ಟಿಗೆ ದಕ್ಷತೆಯಿಂದ ಜನಸ್ನೇಹಿ ಸೇವೆ ನೀಡುತ್ತಿದೆ ಎಂದು ಪರಿಶೀಲನೆ ನಡೆಸಿದರು. ಅಲ್ಲದೆ, ಒಂದು ಗಂಟೆಗೂ ಅಧಿಕ ಕಾಲ ಜನರ ಸಮಸ್ಯೆಗಳನ್ನು ಆಲಿಸಿದರು.

ರಾಜ್ಯಾದ್ಯಂತ ಪ್ರತಿನಿತ್ಯ 10,000ಕ್ಕೂ ಅಧಿಕ ನೋಂದಣಿಗಳು ನಡೆಯುತ್ತಿವೆ. ಸುಲಭ ಮತ್ತು ಸರಳ ನೋಂದಣಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಾವೇರಿ-2 ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದೆ. ಆದರೂ, ತಂತ್ರಾಂಶದಲ್ಲಿ ಕೆಲವು ತಾಂತ್ರಿಕ ಸಮಸ್ಯೆಗಳಿರುವ ಕುರಿತು ದೂರುಗಳು ಬರುತ್ತಿವೆ. ಇದರಿಂದ ಜನರಿಗೂ ಬೇರೆ ಬೇರೆ ರೀತಿಯ ಸಮಸ್ಯೆಗಳಾಗುತ್ತಿದೆ.

ಹೀಗಾಗಿ ಮಂಗಳವಾರ ಕಾಚರಕನಹಳ್ಳಿ ಸಬ್ ರಿಜಿಸ್ಟ್ರಾರ್ ಕಚೇರಿಗೆ ದಿಢೀರ್ ಭೇಟಿ ನೀಡದ ಸಚಿವರು, ಅಲ್ಲಿನ ಕಚೇರಿ ಸಿಬ್ಬಂದಿಗಳು ಎಷ್ಟರ ಮಟ್ಟಿಗೆ ಜನಸ್ನೇಹಿ ಸೇವೆ ನೀಡುತ್ತಿದ್ದಾರೆ. ಕಾವೇರಿ 2 ತಂತ್ರಾಂಶದ ನೈಜ ಸಮಸ್ಯೆಗಳೇನು ಎಂದು ಅಧಿಕಾರಿಗಳಿಂದ ಮಾಹಿತಿ ಕೇಳಿ ಪಡೆದರು. ಅಲ್ಲದೆ, ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಜನರಿಗೆ ಹೇಗೆ ಉತ್ತಮ ಸೇವೆ ನೀಡಬಹುದು ಎಂಬ ಕುರಿತು ಜನಸಾಮಾನ್ಯರಿಂದಲೇ ಅವರ ಸಮಸ್ಯೆಯನ್ನು ಸಲಹೆಯನ್ನು ಆಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬರ ಘೋಷಣೆಯಲ್ಲ, ಪೀಡಿತರಿಗೆ ಪರಿಹಾರ ಮುಟ್ಟಿಸುವುದು ಮುಖ್ಯ

ಭ್ರಷ್ಟ ರಹಿತ ಜನಸೇವೆಗೆ ಕರೆ

ಸಬ್ ರಿಜಿಸ್ಟ್ರಾರ್ ಕಚೇರಿ ಪರಿಶೀಲನೆ ನಂತರ ಅಧಿಕಾರಿ/ ಸಿಬ್ಬಂದಿಗಳಿಗೆ ಕಿವಿಮಾತು ಹೇಳಿದ ಸಚಿವ ಕೃಷ್ಣಭೈರೇಗೌಡ ಅವರು, “ಕಂದಾಯ ಇಲಾಖೆಯಲ್ಲಿ ಆಡಳಿತ ಸುಧಾರಣೆ ಹಾಗೂ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಜನರ ಸುಲಿಗೆ ಮತ್ತು ವಿಳಂಬ ಧೋರಣೆಗೆ ತಡೆ ಒಡ್ಡಲಾಗುವುದು ಎಂದು ಜನಸಾಮಾನ್ಯರಿಗೆ ಈಗಾಗಲೇ ಭರವಸೆ ನೀಡಲಾಗಿದೆ. ಭರವಸೆಯಂತೆ ಅಧಿಕಾರಿಗಳು, ಸಿಬ್ಬಂದಿಗಳು ಜನರಿಗೆ ಸರಳ ಸುಲಭ ಸೇವೆ ನೀಡಬೇಕು. ಸುಲಿಗೆ ವಿಳಂಬ ಧೋರಣೆಗೆ ಅವಕಾಶ ನೀಡದೆ, ಭ್ರಷ್ಟಾಚಾರ ಮುಕ್ತ ಸೇವೆ ನೀಡಬೇಕು” ಎಂದು ಸೂಚಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...