ಹಾವೇರಿ | ಸಚಿವ ಶಿವಾನಂದ ಪಾಟೀಲ್‌ರಿಂದ ಜನಸ್ಪಂದನ: ಕರ್ತವ್ಯ ಲೋಪವೆಸಗಿದ ಅಧಿಕಾರಿಗಳ ತಲೆದಂಡ

Date:

ಹಾವೇರಿ ಜಿಲ್ಲೆ ಉಸ್ತುವಾರಿ ಹಾಗೂ ಸಕ್ಕರೆ ಸಚಿವರೂ ಆಗಿರುವ ಶಿವಾನಂದ ಪಾಟೀಲ್ ಅವರು ಶಿಗ್ಗಾಂವಿಯ ಸಂತೆ ಮೈದಾನದಲ್ಲಿ ಶಿಗ್ಗಾಂವಿ- ಸವಣೂರು ತಾಲೂಕಿನ ಜನಸ್ಪಂದನ ಸಭೆ ನಡೆಸಿದರು.

ಈ ಸಭೆಯಲ್ಲಿ ಎರಡು ನೂರಕ್ಕೂ ಅಧಿಕ ಜನರು ತಮ್ಮ ಸಮಸ್ಯೆಗಳನ್ನು ಸಚಿವರು, ಅಧಿಕಾರಿಗಳ ಮುಂದೆ ಹೇಳಿಕೊಂಡರು. ಮಹಿಳೆಯೊಬ್ಬಳು ನಮ್ಮೂರಲ್ಲಿ ಬಸ್ ನಿಲ್ಲಿಸದಿದ್ದರೆ ಕಲ್ಲು ಹೊಡೆಯುತ್ತೇವೆ ಎಂದು ಇದೇ ವೇಳೆ ಎಚ್ಚರಿಕೆ ನೀಡಿದ ಘಟನೆಯೂ ನಡೆಯಿತು.

ಜನರ ಸಮಸ್ಯೆಗಳಿಗೆ ಸ್ಪಂದಿಸದೆ ಕರ್ತವ್ಯಲೋಪ ಆರೋಪದ ಮೇಲೆ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲು ಸಚಿವ ಶಿವಾನಂದ ಪಾಟೀಲ್ ನಿರ್ದೇಶನ ನೀಡಿದ್ದಾರೆ. ಸಾರ್ವಜನಿಕರಿಂದ ಅತಿ ಹೆಚ್ಚು ದೂರುಗಳ ಬಂದ ಹಿನ್ನೆಲೆಯಲ್ಲಿ ಬಂಕಾಪುರ ಪುರಸಭೆ ಮುಖ್ಯಾಧಿಕಾರಿ ಮೇಲಿನ ಆರೋಪಗಳ ಬಗ್ಗೆ ವರದಿ ಕೊಡಿ ಎಂದು ಸೂಚನೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದ ಅವರು ತಾಲೂಕು ಅಬಕಾರಿ ಇನ್ಸ್‌ಪೆಕ್ಟರ್ ಪ್ರಕಾಶ್ ಮಾಕಣ್ಣವರ್, ಗುಡ್ಡದ ಚನ್ನಾಪುರ ಗ್ರಾಪಂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಇಮ್ತಿಯಾಜ್ ಅಹ್ಮದ್ ಅವರನ್ನು ಅಮಾನತು ಮಾಡಲು ಆದೇಶಿಸಿದರು. ಬಂಕಾಪುರ ಪುರಸಭೆ ಮುಖ್ಯಾಧಿಕಾರಿ ಶಿವಪ್ಪ ಅವರ ಮೇಲಿನ ಆರೋಪಗಳ ಬಗ್ಗೆ ವರದಿ ಕೊಡಿ ಎಂದು ಯೋಜನಾ ನಿರ್ದೇಶಕಿ ಮಮತಾ ಅವರಿಗೆ ಸೂಚಿಸಿದರು.

ಕೆಲ ಅಧಿಕಾರಿಗಳ ಮೇಲೆ ಹೆಚ್ಚಿನ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಅವರ ಬಗ್ಗೆ ವರದಿ ಕೊಡಿ ಎಂದು ಮೇಲಧಿಕಾರಿಗಳಿಗೆ ಸೂಚನೆ ನೀಡಿದರು. ವರದಿ ನೈಜವಾಗಿಲ್ಲ ಎಂಬುದು ಕಂಡು ಬಂದರೆ ಹಿರಿಯ ಅಧಿಕಾರಿಗಳಿಂದ ಮತ್ತೆ ವರದಿ ಪಡೆಯಲಿದ್ದು, ನೈಜ ವರದಿ ನೀಡದ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಇದನ್ನು ಗಮನದಲ್ಲಿಟ್ಟುಕೊಂಡು ವರದಿ ಕೊಡಿ ಎಂದು ಸೂಚನೆ ನೀಡಿದರು.

ಅಂಗವಿಕಲರಿಗೆ ತ್ರಿಚಕ್ರ ವಾಹನ ವಿತರಣೆ, ಕೆಎಸ್‌ಆರ್‌ಟಿಸಿ ಬಸ್ ಸೌಕರ್ಯ ಸೇರಿದಂತೆ ಹಲವು ದೂರುಗಳಿಗೆ ಸ್ಥಳದಲ್ಲೇ ಆದೇಶ ನೀಡಿದರು. ಅರ್ಹ ಅಂಗವಿಕಲರಿಗೆ ತಕ್ಷಣ ತ್ರಿಚಕ್ರ ವಾಹನ ವಿತರಿಸಿ, ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಬಸ್ ಸಂಚಾರಕ್ಕೆ ವ್ಯವಸ್ಥೆ ಮಾಡಿ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ಸೂಚಿಸಿದರು.

ಜಲಜೀವನ್ ಮಿಷನ್ ಯೋಜನೆ ಅನುಷ್ಠಾನದಲ್ಲಿ ಗುತ್ತಿಗೆದಾರರ ಲೋಪ ಕಂಡು ಬಂದರೆ ಕಪ್ಪುಪಟ್ಟಿಗೆ ಸೇರಿಸಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಹೇಳಿದರು. 350 ಕೋಟಿ ರೂ. ವೆಚ್ಚದ ಶಿಗ್ಗಾವಿ ಏತ ನೀರಾವರಿ ಯೋಜನೆ ಅನುಷ್ಠಾನಕ್ಕೆ ಬಂದಿದ್ದರೂ ಉದ್ದೇಶ ಸಫಲವಾಗಿಲ್ಲ. ಬಹುತೇಕ ಕೆರೆಗಳಿಗೆ ನೀರು ಬಂದಿಲ್ಲ ಎಂದು ರೈತ ಸಂಘದ ಮುಖಂಡರು ಸಚಿವರ ಗಮನ ಸೆಳೆದರು. ಯಾವ ಯಾವ ಕೆರೆಗಳಿಗೆ ನೀರು ಹರಿದಿಲ್ಲ ಎಂಬ ಬಗ್ಗೆ ವರದಿ ಕೊಡಿ ಎಂದು ಜಲಸಂಪನ್ಮೂಲ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಅಬಿಯಂತರ ರವಿ ಅರಸೀಕರೆ ಅವರಿಗೆ ಸೂಚಿಸಿದರು.

ಜಿಲ್ಲೆಯಲ್ಲಿರುವ ಎರಡು ಸಕ್ಕರೆ ಕಾರ್ಖಾನೆಗಳಲ್ಲಿ ಸಕ್ಕರೆ ಇಳುವರಿ ಪ್ರಮಾಣ ಕಡಿಮೆ ತೋರಿಸುತ್ತಿದ್ದು, ರೈತರು ಪೂರೈಕೆ ಮಾಡಿದ ಕಬ್ಬಿಗೆ ಕಡಿಮೆ ಎಫ್‌ಆರ್‍ಪಿ ದರ ಕೊಡುತ್ತಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಅತಿ ಹೆಚ್ಚು ಬೆಲೆ ಸಿಗುತ್ತಿದೆ. ಹಾವೇರಿ ಜಿಲ್ಲೆಯ ಕಬ್ಬು ಬೆಳೆಗಾರರಿಗೆ ಅನ್ಯಾಯವಾಗುತ್ತಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ರೈತ ಸಂಘದ ಮುಖಂಡರು ಮನವಿ ಮಾಡಿದರು. ಈ ಬಗ್ಗೆ ಪರಿಶೀಲನೆ ನಡೆಸಲು ವಿಶೇಷ ತಂಡ ರಚನೆ ಮಾಡಲಿದ್ದು, ತಂಡದ ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ತಾಲೂಕಿನ ಕಿರಾಣಿ ಅಂಗಡಿಗಳಲ್ಲಿ ಮದ್ಯ ಮಾರಾಟ ನಡೆಯುತ್ತಿದೆ. ಅಬಕಾರಿ ಅಧಿಕಾರಿಗಳು ದಾಳಿ ಮಾಡುತ್ತಿಲ್ಲ. ಇದರಿಂದ ಹಳ್ಳಿಗಳ ಸ್ವಾಸ್ಥ್ಯ ನಾಶವಾಗುತ್ತಿದೆ. ಅಬಕಾರಿ ಅಧಿಕಾರಿಗಳು ಮೌನಕ್ಕೆ ಶರಣಾಗಿದ್ಧಾರೆ ಎಂದು ಗ್ರಾಮಸ್ಥರು ದೂರಿದರು. ಅಬಕಾರಿ ಇಲಾಖೆ ಜಿಲ್ಲಾಧಿಕಾರಿಯನ್ನು ಕರೆಸಿ ಈ ಬಗ್ಗೆ ಪ್ರಶ್ನೆ ಮಾಡಿದರು. ಎಷ್ಟು ಬಾರಿ ದಾಳಿ ಮಾಡಿದ್ದೀರಿ? ಏನು ಕ್ರಮ ಕೈಗೊಂಡಿದ್ದೀರಿ ಎಂದು ಪ್ರಶ್ನಿಸಿದರು. ಕರ್ತವ್ಯಲೋಪ ಎಸಗಿದ ಅಧಿಕಾರಿಯನ್ನು ಅಮಾನತು ಮಾಡಿ ಎಂದು ಸೂಚಿಸಿದರು.

ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಬಸವರಾಜ ಶಿವಣ್ಣನವರ್, ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ, ಶಾಸಕರಾದ ಶ್ರೀನಿವಾಸ ಮಾನೆ, ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ್, ಜಿಪಂ ಸಿಇಒ ಅಕ್ಷಯ್ ಶ್ರೀಧರ್, ಎಎಸ್ಪಿ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಸಾಗವಾನಿ ಕಟ್ಟಿಗೆ ನಾಪತ್ತೆ : ಶಿಗ್ಗಾಂವಿಯ ಹೊಸ ತಹಸೀಲ್ದಾರ್ ಕಚೇರಿ ನಿರ್ಮಾಣಕ್ಕೆ ಹಳೆಯ ಕಚೇರಿಯನ್ನು ನೆಲಸಮ ಮಾಡಲಾಗಿದ್ದು, ಈ ಕಟ್ಟಡಕ್ಕೆ ಬಳಸಿದ್ದ ಸಾಗುವಾನಿ ಕಟ್ಟಿಗೆಗಳ ಏನಾದವು ಎಂಬುದೇ ಗೊತ್ತಿಲ್ಲ. ಬೆಳೆ ಬಾಳುವ ಸಾಗವಾನಿ ಕಟ್ಟಿಗೆ ಎಲ್ಲಿ ಹೋಗಿವೆ ಎಂಬುದೇ ಗೊತ್ತಿಲ್ಲ. ಈ ಸಾಗವಾನಿ ಕಟ್ಟಿಗೆ ಪತ್ತೆ ಮಾಡಿ ಹರಾಜು ಹಾಕಿ ಎಂದು ಮಹಿಳೆಯೊಬ್ಬರು ಸಚಿವ ಶಿವಾನಂದ ಪಾಟೀಲ ಅವರಿಗೆ ಮನವಿ ಮಾಡಿದರು.

“ನಮ್ಮೂರಲ್ಲಿ ಸರ್ಕಾರಿ ಬಸ್ ನಿಲ್ಲಿಸುತ್ತಿಲ್ಲ. ಒಂದು ವೇಳೆ ನಿಲ್ಲಿಸದಿದ್ದರೆ ಬಸ್ ಗೆ ಕಲ್ಲೆಸೆಯತ್ತೇವೆ” ಎಂದು ಮಹಿಳೆಯೊಬ್ಬರು ಸಚಿವ ಶಿವಾನಂದ ಪಾಟೀಲ್ ಅವರಿಗೆ ಎಚ್ಚರಿಕೆ ನೀಡಿದರು. ಇದಕ್ಕೆ ಉತ್ತರಿಸಿದ ಸಚಿವರು, “ಹಂಗೆಲ್ಲಾ ಮಾಡಬಾರದಮ್ಮ, ನಾನು‌ ಬಸ್ ನಿಲ್ಲಿಸಲು ಸೂಚಿಸ್ತೀನಿ’ ಎಂದು ಭರವಸೆ ನೀಡಿದರು.

ಇದನ್ನು ಓದಿದ್ದೀರಾ? ಧಾರವಾಡ | ಅಧಿಕಾರಿಗಳ ನಿರ್ಲಕ್ಷ್ಯ: ಕೆಟ್ಟಿರುವ ಸ್ಥಿತಿಯಲ್ಲೇ ಬಾಕಿಯಾದ ಶುದ್ಧ ಕುಡಿಯುವ ನೀರಿನ ಘಟಕ

ಶಿಗ್ಗಾಂವ್ ತಾಲೂಕು ಬಿಸನಳ್ಳಿ ಗ್ರಾಮಕ್ಕೆ ಸರಿಯಾದ ಬಸ್ ವ್ಯವಸ್ಥೆ ಇಲ್ಲ ನಮ್ಮ ಊರಿಗೆ ಬಸ್ ನಿಲ್ಲಿಸಿ, ಜನರನ್ನು ಹತ್ತಿಸಿಕೊಂಡು‌ ಹೋಗಬೇಕು. ಶಾಲಾ ವಿದ್ಯಾರ್ಥಿಗಳಿಗೆ ಬಹಳ ತೊಂದರೆ ಆಗಿದೆ. ಬಸ್ ನಮ್ಮ ಊರಿಗೆ ತರಿಸೋಕೆ ಹೇಳಿ ಎಂದು ಮಹಿಳೆ ಕಮಲವ್ವ ಬೇಸರ ವ್ಯಕ್ತಪಡಿಸಿದರು. ಇದಕ್ಕೆ ಸ್ಪಂದಿಸಿದ ಸಚಿವ ಪಾಟೀಲ್, ಸಾರಿಗೆ ಅಧಿಕಾರಿಗಳನ್ನು ಕರೆಸಿ ಬಸ್ ವ್ಯವಸ್ಥೆ ಮಾಡಿಸಿ ಎಂದು ಕೆಎಸ್‌ಆರ್‌ಟಿಸಿ ಸಿ ಹಾವೇರಿ ವಿಭಾಗೀಯ ನಿಯಂತ್ರಣಾಧಿಕಾರಿಗೆ ಸೂಚಿಸಿದರು.

ಮಗುವಿಗೆ ವೈದ್ಯರು ಚಿಕಿತ್ಸೆ ನೀಡಲು ನಿರಾಕರಿಸಿದ ಕಾರಣ ಬೇರೆ ಆಸ್ಪತ್ರೆಗೆ ಕರೆದೊಯ್ಯಬೇಕಾಯಿತು ಎಂಬ ದೂರು ಕೇಳಿ ಬೇಸರ ವ್ಯಕ್ತಪಡಿಸಿದ ಸಚಿವರು, ತಾಲೂಕು ವೈದ್ಯಾಧಿಕಾರಿಯನ್ನು ಕರೆಸಿ ವರದಿ ಕೇಳಿದರು. ತಕ್ಷಣ ಮಗುವಿನ ಚಿಕಿತ್ಸೆಗೆ ವ್ಯವಸ್ಥೆ ಮಾಡಿ ಎಂದು ಹೇಳಿದರು.

ಅಚ್ಚುಕಟ್ಟಾದ ವ್ಯವಸ್ಥೆ

ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರಕ್ಕೆ ಅಚ್ಚುಕಟ್ಟಾದ ವ್ಯವಸ್ಥೆ ಮಾಡಲಾಗಿತ್ತು. ಇಲಾಖಾವಾರು ಕೌಂಟರ್ ತೆರೆದು ಅರ್ಜೀ ಸ್ವೀಕಾರದ ವ್ಯವಸ್ಥೆ ಮಾಡಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿದ ಸಚಿವರು, ಸ್ವತಃ ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಿ ಸಂಬಂಧಪಟ್ಟ ಅಧಿಕಾರಿಗಳನ್ನು ಕರೆದು ವಿವರಣೆ ಕೇಳಿದ್ದು ವಿಶೇಷವಾಗಿತ್ತು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...