ಬೀದರ್‌ | ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅಲ್ಪಸಂಖ್ಯಾತರ ಶಾಲೆ ಅತಿಥಿ ಶಿಕ್ಷಕರ ಪ್ರತಿಭಟನೆ

Date:

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿನ ಶಾಲೆ, ಕಾಲೇಜುಗಳಲ್ಲಿ ಅತಿಥಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರು, ಉಪನ್ಯಾಸಕರ ವೇತನವನ್ನು ಹೆಚ್ಚಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ಶಾಲೆ, ಪಿಯು ಕಾಲೇಜುಗಳ ಅತಿಥಿ ಶಿಕ್ಷಕರು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.

ಬೀದರ್‌ ನಗರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಕಚೇರಿ ಎದುರು ಗುರುವಾರ ಅಲ್ಪಸಂಖ್ಯಾತರ ಶಾಲೆ ಅತಿಥಿ ಶಿಕ್ಷಕರು ಕೆಲ ಕಾಲ ಪ್ರತಿಭಟನೆ ನಡೆಸಿ, ಬಳಿಕ ಜಿಲ್ಲಾ ಅಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

ʼಅನೇಕ ವರ್ಷಗಳಿಂದ ಅತ್ಯಂತ ಕಡಿಮೆ ವೇತನಕ್ಕೆ (₹10,500, ₹12,500) ಕಾರ್ಯನಿರ್ವಹಿಸುತ್ತಿದ್ದು, ಜೀವನ ನಿರ್ವಹಣೆಗೆ ಕಷ್ಟವೆನಿಸುತ್ತಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿಯಲ್ಲಿ ಇರುವ ವಸತಿ ಶಾಲೆಗಳಲ್ಲಿ 2023ರ ಜನವರಿಯಿಂದಲೇ ಅತಿಥಿ ಶಿಕ್ಷಕರಿಗೆ ₹16,650 ಹಾಗೂ ಅತಿಥಿ ಉಪನ್ಯಾಸಕರಿಗೆ ₹18,150 ನೀಡುತ್ತಿದ್ದು, ಅದೇ ರೀತಿಯ ಕಾರ್ಯಭಾರ ನಮಗೂ ಇದೆ. ಆದರೆ ವೇತನದಲ್ಲಿ ಮಾತ್ರ ತಾರತಮ್ಯ ಮಾಡಲಾಗುತ್ತಿದೆʼ ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼವೇತನ ಹೆಚ್ಚಳದ ಕುರಿತು ಹಲವು ಬಾರಿ ಇಲಾಖೆಯ ನಿರ್ದೇಶಕರು, ಮೇಲಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಇದರಿಂದಾಗಿ ಕುಟುಂಬ ನಿರ್ವಹಣೆಗೆ ಇಲಾಖೆ ನೀಡುತ್ತಿರುವ ಹಣ ಸಾಕಾಗುತ್ತಿಲ್ಲ. ಇಷ್ಟೆಲ್ಲ ಕಷ್ಟಗಳ ಮಧ್ಯೆಯೂ ಮಕ್ಕಳ ಭವಿಷ್ಯಕ್ಕಾಗಿ ನಿತ್ಯ ಪಾಠ ಪ್ರವಚನದ ಜೊತೆಗೆ ಹೆಚ್ಚುವರಿ ತರಗತಿಗಳನ್ನು ಮಾಡುತ್ತಿದ್ದೇವೆ. ಕನಿಷ್ಠ ಕೂಲಿ ಕಾಯ್ದೆ ಹಾಗೂ ಸಮಾನ ಕೆಲಸಕ್ಕೆ ಸಮಾನ ವೇತನ ಕಾಯ್ದೆಯಡಿ ವೇತನವನ್ನು ಪರಿಷ್ಕರಿಸಬೇಕುʼ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

‘ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧೀನದ ಮೌಲಾನಾ ಆಜಾದ್, ಮೊರಾರ್ಜಿ ದೇಸಾಯಿ, ಎಪಿಜೆ ಅಬ್ದುಲ್ ಕಲಾಂ ಶಾಲೆ ಹಾಗೂ ಪಿಯು ಕಾಲೇಜುಗಳಲ್ಲಿ 200ಕ್ಕೂ ಅಧಿಕ ಅತಿಥಿ ಶಿಕ್ಷಕರು, ಉಪನ್ಯಾಸರು ಕಾರ್ಯನಿರ್ವಹಿಸುತ್ತಿದ್ದು, ತಕ್ಷಣವೇ ವೇತನ ಪರಿಷ್ಕರಣೆ ಆದೇಶ ಹೊರಡಿಸಬೇಕು. ಅತಿಥಿ ಶಿಕ್ಷಕ, ಉಪನ್ಯಾಸಕರಿಗೆ ಮಾಸಿಕ ₹30 ಸಾವಿರ ಕನಿಷ್ಠ ವೇತನ, ಸೇವಾ ಭದ್ರತೆ, ವರ್ಷದ 12 ತಿಂಗಳೂ ವೇತನ, ನೇಮಕಾತಿಯಲ್ಲಿ ವರ್ಷಕ್ಕೆ 5ರಂತೆ ಕೃಪಾಂಕ, ವಿಮಾ ಸೌಲಭ್ಯ ಹಾಗೂ ವೇತನ ಸಹಿತ ಮಾತೃತ್ವ ರಜೆ ನೀಡಬೇಕುʼ ಎಂದು ಅತಿಥಿ ಉಪನ್ಯಾಸಕ ಮಾಣಿಕ ರೆಡ್ಡಿ ಬಸವಕಲ್ಯಾಣ ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಪಶು ಮೇಳ: ಬೆರಗುಗೊಳಿಸಿದ 90 ಕೆಜಿ ತೂಕದ ಮೇಕೆ, ₹9 ಲಕ್ಷದ ಗಿರ್‌ ತಳಿ ಎತ್ತು

ಪ್ರತಿಭಟನೆಯಲ್ಲಿ ಅತಿಥಿ ಶಿಕ್ಷಕರು, ಉಪನ್ಯಾಸಕರಾದ ರಮೇಶ, ಅನ್ವರ್‌ ಖಾನ್‌,ಆಶ್ಮಾ ಅಂಜುಮ್‌, ವಿಶ್ವಾ, ದಿವ್ಯಾ, ರೇಷ್ಮಾ, ಚಂದ್ರಶೇಖರ, ಅಂಬಿಕಾ, ಪೂಜಾ, ಸಂತೋಷ ಕುಮಾರ್‌, ಮಹೇಶ, ಸವಿತಾ, ಸಂಗೀತಾ, ದೇವಿದಾಸ, ಅರ್ಜುನ ಸೇರಿದಂತೆ ಮತ್ತಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...