ಬಸವಕಲ್ಯಾಣ ನಗರಸಭೆಯಲ್ಲಿ ಅವ್ಯವಹಾರ : ಪೌರಾಯುಕ್ತ ಅಮಾನತಿಗೆ ಆಗ್ರಹಿಸಿ ಬಿಎಸ್ಪಿ ಪ್ರತಿಭಟನೆ

Date:

ಬಸವಕಲ್ಯಾಣ ನಗರಸಭೆ ಅನುದಾನ ಹಣ ದುರ್ಬಳಕೆ ಮಾಡಿಕೊಂಡಿರುವ ಪೌರಾಯುಕ್ತ ರಾಜೀವ ಡಿ.ಬಣಕರ್‌ ಅವರನ್ನು ಅಮಾನತು ಮಾಡಬೇಕೆಂದು ಆಗ್ರಹಿಸಿ ಬಹುಜನ ಸಮಾಜ ಪಾರ್ಟಿ ತಾಲೂಕು ಘಟಕದಿಂದ ಮಂಗಳವಾರ ನಗರಸಭೆ ಕಚೇರಿ ಎದುರು ಪ್ರತಿಭಟನೆ ನಡೆಯಿತು.

ಈ ಸಂಬಂಧ ಜಿಲ್ಲಾಧಿಕಾರಿಗಳ ಹೆಸರಿಗೆ ಬರೆದ ಮನವಿ ಪತ್ರವನ್ನು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಗ್ರೇಡ್-2 ತಹಸೀಲ್ದಾರ್‌ ಡಾ.ರಮೇಶ ಅವರಿಗೆ ಸಲ್ಲಿಸಿದರು.

ಎಸ್‌ಸಿಪಿ-ಟಿಎಸ್‌ಪಿ ಹಾಗೂ ಇತರೆ ಯೋಜನೆಗಳ ಅನುದಾನ ದುರ್ಬಳಕೆ ಮಾಡಿರುವ ಪೌರಾಯುಕ್ತ ರಾಜೀವ ಬಣಕಾರ ಅವರ ಅವ್ಯವಹಾರದ ಬಗ್ಗೆ ತನಿಖೆ ಕೈಗೊಂಡು ಅಮಾನತುಗೊಳಿಸಬೇಕು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼನಗರದ ತ್ರಿಪುರಾಂತದ ಜಮೀನಿನಲ್ಲಿ ಅಕ್ರಮ ಖಾತೆ ನೋಂದಣಿ ಮಾಡಿದ್ದು ಕಂಡು ಬಂದಿದೆ. ಇಲ್ಲಿನ ಸರ್ವೆ ನಂ.266 ಜಾಗವು ಸರ್ಕಾರದ ಹೆಸರಿನಲ್ಲಿ ಇದ್ದರೂ ಇ-ಖಾತಾ ಮಾಡಿರುತ್ತಾರೆ. 15ನೇ ಹಣಕಾಸು ಯೋಜನೆಯ ಅನುದಾನದಲ್ಲಿ ಕೆಲಸ ನಿರ್ವಹಿಸದೆ ಹಣ ಪಡೆದುಕೊಂಡಿದ್ದಾರೆ. ಮುಖ್ಯ ರಸ್ತೆ ದುರಸ್ತಿ ಹೆಸರಲ್ಲಿ ಅನುದಾನ ದುರ್ಬಳಕೆ ಆಗಿದೆ. ಕೊಳವೆ ಬಾವಿ ದುರುಸ್ತಿಗೊಳಿಸದೆ ಬೋಗಸ್ ಬಿಲ್ ಪಡೆದಿರುತ್ತಾರೆ. ಅವರ ಕುಮ್ಮಕ್ಕಿನಿಂದ ಸಾರ್ವಜನಿಕ ಉದ್ಯಾನಗಳನ್ನು ಅತಿಕ್ರಮಿಸಲಾಗಿದೆʼ ಎಂದು ದೂರಿದ್ದಾರೆ.

ಎಸ್‌ಸಿಪಿ ಮತ್ತು ಟಿಎಸ್‌ಪಿ ಅನುದಾನ, ಅಂಗವಿಕಲರ ಅನುದಾನದ ದುರ್ಬಳಕೆಯೂ ಆಗಿದೆ. ಈ ಬಗ್ಗೆ ವಿಚಾರಿಸಿದ ಪಕ್ಷದ ರಾಜ್ಯ ಕಾರ್ಯದರ್ಶಿ ಜ್ಞಾನೇಶ್ವರ ಸಿಂಗಾರೆ ಅವರ ಮೇಲೆ ಇಲ್ಲಸಲ್ಲದ ಆರೋಪ ಮಾಡಿ ಬೆದರಿಸುತ್ತಿದ್ದಾರೆ. ಅನೇಕ ಓಣಿಗಳಲ್ಲಿ ರಸ್ತೆ, ಚರಂಡಿಗಳಿಲ್ಲ. ಇಂಥ ಸಮಸ್ಯೆ ಬಗೆಹರಿಸಲು ವಿನಂತಿಸಿದರೂ ಕ್ರಮ ಕೈಗೊಂಡಿಲ್ಲ. ಆದ್ದರಿಂದ ಶೀಘ್ರದಲ್ಲಿ ಪೌರಾಯುಕ್ತರನ್ನು ಅಮಾನತುಗೊಳಿಸಬೇಕುʼ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಇದನ್ನೂ ಓದಿ : ಅಪಘಾತದಲ್ಲಿ ಐಎಎಸ್‌ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು : ಸಚಿವ ಈಶ್ವರ ಖಂಡ್ರೆ ಕಂಬನಿ

ಬಿಎಸ್ಪಿ ತಾಲೂಕ ಅಧ್ಯಕ್ಷ ಶಂಕರ್ ಫುಲೆ ರಾಜ್ಯ ಕಾರ್ಯದರ್ಶಿ ಅಶೋಕ್ ಮಂಠಾಳಕರ ರಾಜ್ಯ ಕಾರ್ಯದರ್ಶಿಗಳಾದ ಜ್ಞಾನೇಶ್ವರ್ ಸಿಂಗಾರೆ, ಜಿಲ್ಲಾಧ್ಯಕ್ಷ ಕಪಿಲ್ ಗೋಡಬೋಲೆ,ಉ ಉಪಾಧ್ಯಕ್ಷ ಸಚಿನ್ ಗಿರಿ, ತಾಲೂಕು ಉಪಾಧ್ಯಕ್ಷರಾದ ರಮೇಶ್ ರಾಠೋಡ್, ಸಚಿನ್ ಕಾಂಬಳೆ ಸೇರಿದಂತೆ ಪ್ರಮುಖರಾದ ಮಕ್ಬುಲ್ ಸಾಬ್, ರವಿ ಉದಾತೆ, ಮಹಾದೇವ್ ಗಾಯಕವಾಡ, ಚಂದ್ರಶೀಲಾ ಗಾಯಕವಾಡ, ರಾಹುಲ ಖಂದಾರೆ, ಸಂತೋಷ ಲಾಧಾ, ಸಂದೀಪ ಮುಕಿಂದೆ ಮತ್ತಿತರರಿದ್ದರು.

WhatsApp Image 2025 11 25 at 5.57.06 PM
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...