ಸಭಾಧ್ಯಕ್ಷ ಯು ಟಿ ಖಾದರ್‌ ಅಭಿನಂದಿಸಿ ಹಾಕಿದ್ದ ಫ್ಲೆಕ್ಸ್ ಮೇಲೆ ವಿಕೃತಿ ಮೆರೆದ ಕಿಡಿಗೇಡಿಗಳು

Date:

ಶಾಸಕ ಯು ಟಿ ಖಾದರ್ ಅವರು ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಅಭಿಮಾನಿಗಳು ಅವರಿಗೆ ಅಭಿನಂದನೆ ಸಲ್ಲಿಸುವ ಸಲುವಾಗಿ ಹಾಕಿದ್ದ ಫ್ಲೆಕ್ಸ್‌ಗಳ ಮೇಲೆ ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ಶುಕ್ರವಾರ ರಾತ್ರಿ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ. ಕಳೆದ ಭಾನುವಾರ ಉಳ್ಳಾಲದ ಮಹಾತ್ಮಗಾಂಧಿ ರಂಗ ಮಂದಿರದಲ್ಲಿ ಶಾಸಕರಿಗೆ ನಡೆದ ನಾಗರಿಕ ಸನ್ಮಾನಕ್ಕೆ ಶುಭ ಕೋರಿ ಫ್ಲೆಕ್ಸ್‌ಗಳನ್ನು ಹಾಕಲಾಗಿತ್ತು.

ತೊಕ್ಕೊಟ್ಟು ಮೇಲ್ಸೇತುವೆಯಿಂದ ಉಳ್ಳಾಲದ ಅಬ್ಬಕ್ಕ ವೃತ್ತದವರೆಗಿನ ರಸ್ತೆಯ ವಿಭಜಕ ಮತ್ತು ಇಕ್ಕೆಲಗಳಲ್ಲಿ ಫ್ಲೆಕ್ಸ್‌ಗಳನ್ನು ಉದ್ದೇಶಪೂರ್ವಕವಾಗಿ ಹರಿದು ಹಾಕಲಾಗಿದೆ. ಫ್ಲೆಕ್ಸ್‌ಗಳನ್ನು ಸ್ಥಳೀಯ ನಗರಾಡಳಿತದಿಂದ ಅನುಮತಿ ಪಡೆಯದೆ ಅಳವಡಿಸಿರುವುದರಿಂದ ಈವರೆಗೆ ಯಾರೂ ಠಾಣೆಗೆ ದೂರು ನೀಡಿಲ್ಲವೆಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೊಲೀಸರು ಸಿಸಿಟಿವಿ ಕ್ಯಾಮೆರಾ ಪರಿಶೀಲನೆ ನಡೆಸುತ್ತಿದ್ದು ತಡರಾತ್ರಿ ದ್ವಿಚಕ್ರ ವಾಹನದಲ್ಲಿ ಬಂದಿದ್ದ ಇಬ್ಬರು ಕೃತ್ಯ ಎಸಗಿರುವುದಾಗಿ ಮಾಹಿತಿ ಲಭಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...