ಭಿನ್ನಾಭಿಪ್ರಾಯಗಳಿಂದಾಗಿ ಬಳ್ಳಾರಿ ಜಿಲ್ಲಾಡಳಿತಕ್ಕೆ ತಪ್ಪು ಮಾಹಿತಿ ರವಾನೆ: ಕಸಾಪ ಅಧ್ಯಕ್ಷ ಡಾ ಮಹೇಶ್‌ ಜೋಶಿ

Date:

ಭಿನ್ನಾಭಿಪ್ರಾಯದಿಂದಾಗಿ ಬಳ್ಳಾರಿ ಜಿಲ್ಲಾಡಳಿತಕ್ಕೆ ತಪ್ಪು ಮಾಹಿತಿ ರವಾನೆಯಾಗಿದ್ದರಿಂದ ಸಂಡೂರಿನಲ್ಲಿ ನಡೆಯಬೇಕಿದ್ದ ಸಭೆಯನ್ನು ರದ್ದು ಮಾಡಲಾಗಿದೆ. ಸಂಡೂರಿನ ಸಭೆ ರದ್ದಾಗಲು ಕಸಾಪದ ಕೇಂದ್ರ ಸಮಿತಿಯಲ್ಲಿ ಐದು ವರ್ಷ ಕೆಲಸ ಮಾಡಿರುವ ವಸುಂದರ ಭೂಪತಿ ಜಿಲ್ಲಾಡಳಿತಕ್ಕೆ ತಪ್ಪು ಮಾಹಿತಿ ನೀಡಿರುವುದೇ ಕಾರಣ. ನಮ್ಮಲ್ಲಿ ಭಿನ್ನಾಭಿಪ್ರಾಯಗಳಿರಬಹುದು. ಆದರೆ, ವೈಯಕ್ತಿಕ ದ್ವೇಷ ಇಲ್ಲ ಎಂದು ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ ಮಹೇಶ ಜೋಶಿ ಹೇಳಿದ್ದಾರೆ.

ಜಮಖಂಡಿ ನಗರದ ರಮಾನ ನಿವಾಸ ನಿರೀಕ್ಷಣಾ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಈ ಬಾರಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಲ್ಲಹಳ್ಳಿ ಗ್ರಾಮದ ಸತ್ಯಕಾಮರ ಸುಮ್ಮನೆ ಎಂಬ ಹೆಸರಿನ ಮನೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ವಾರ್ಷಿಕ ಸಾಮಾನ್ಯ ಸಭೆ ನಡೆಯಲು ಉದ್ದೇಶಿಸಲಾಗಿದೆ” ಎಂದರು.

“ಕಸಾಪದ ಘನತೆ ಗೌರವಕ್ಕೆ ಧಕ್ಕೆ ತರುವರ ವಿರುದ್ಧ ಮಾನನಷ್ಟ ಮೊಖದ್ದಮೆ ಹೂಡಲಾಗಿದೆ. ಎಸ್‌ ಟಿ ಸಿದ್ದರಾಮಯ್ಯ, ಜಯಪ್ರಕಾಶ ಗೌಡ, ನಾಗರಾಜ, ವೆಂಕಟರಮಣ, ನಿವೃತ್ತ ಅಧಿಕಾರಿ ಸಲೀಂ ಅವರ ವಿರುದ್ಧ ಮೊಖದ್ದಮೆ ದಾಖಲಿಸಿ ಕಾನೂನು ಹೋರಾಟ ನಡೆಸಲಾಗುತ್ತಿದೆ. ಯಾವುದೋ ವ್ಯಕ್ತಿಗಳ ಪ್ರಭಾವಕ್ಕೆ ಮಣಿದು ಅಧಿಕಾರ ದುರುಪಯೋಗಪಡಿಸಿಕೊಂಡು ಕಸಾಪಕ್ಕೆ ಕಪ್ಪು ಚುಕ್ಕೆ ತರುವಂಥ ಕೆಲಸ ಮಾಡಿದ್ದಾರೆ. ಕಾರ್ಯಕಾರಣಿ ಸಭೆಯ ನಿರ್ಣಯದಂತೆ ಮೊಖದ್ದಮೆ ದಾಖಲಿಸಲಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭ ಮಂಡ್ಯ ಅಧಿವೇಶನದ ಲೆಕ್ಕಪತ್ರ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಸರ್ಕಾರದ ಅನುದಾನದ ಸಹಾಯದಿಂದ ಕಾರ್ಯಕ್ರಮ ಮಾಡುತ್ತೇವೆ. ಅನುದಾನ ಆಯಾ ಪ್ರದೇಶದ ಜಿಲ್ಲಾಡಳಿತಕ್ಕೆ ಜಮಾ ಆಗುತ್ತದೆ. ಅದರಲ್ಲಿ ಪತ್ರಿಕೆಗಳ ಪ್ರಕಟಣೆ, ಪುಸ್ತಕ ಪ್ರಕಟಣೆ ಮುಂತಾದವುಗಳ ಜವಾಬ್ದಾರಿ ಇರುತ್ತದೆ” ಎಂದು ಉತ್ತರಿಸಿದರು.

ಈ ಸುದ್ದಿ ಓದಿದ್ದೀರಾ? ರಾಜ್ಯಾದ್ಯಂತ ಬೀದಿನಾಯಿ ಪ್ರಕರಣ: ಕೇವಲ ಎಂಟು ತಿಂಗಳಲ್ಲಿ 26 ಮಂದಿ ಸಾವು, 2.86 ಲಕ್ಷ ಪ್ರಕರಣ ದಾಖಲು

ಈ ವೇಳೆ ಅವರು “ಮದುವೆ ಹೋಟೆಲುಗಳಲ್ಲಿ ರೈಸ್ ಬದಲು ಅನ್ನ ಎಂಬ ಪದ ಉಪಯೋಗಿಸುವಂತೆ ಆಗಬೇಕು. ಕನ್ನಡ ಭಾಷೆಯನ್ನು ಉಳಿಸುವ ಕೆಲಸ ಮಾಡುತಿದ್ದೇವೆ. ಕನ್ನಡ ಮಾಧ್ಯಮ ಶಾಲೆಗಳು ಮುಚ್ಚುತ್ತಿವೆ. ಪಾಲಕರು ಕನ್ನಡ ಶಾಲೆಗಳಿಗೆ ತಮ್ಮ ಮಕ್ಕಳನ್ನು ಕಳುಹಿಸಲು ಮುಂದಾಗಬೇಕು” ಎಂದರು.

ಈ ಸಂದರ್ಭ ಪಾಟೀಲ ಪಾಂಡು, ವಿಜಯಪುರ ಜಿಲ್ಲಾ ಕಸಾಪ ಅಧ್ಯಕ್ಷ ಹಾಸಿಮ್ ಪೀರ ವಾಲೆಕಾರ, ಬಾಗಲಕೋಟೆ ಕಸಾಪ ಅಧ್ಯಕ್ಷ ಶಿವಾನಂದ ಸಲ್ಲಿಕೆರೆ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...