ಮೈಸೂರು | ‘ಸ್ವಸ್ಥ ನಾರಿ-ಸಶಕ್ತ ಪರಿವಾರ’ ಅಭಿಯಾನಕ್ಕೆ ಚಾಲನೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು

Date:

ಮೈಸೂರು ಜಿಲ್ಲೆ, ಹೆಗ್ಗಡದೇವನಕೋಟೆಯ ತಾಲ್ಲೂಕು ಆರೋಗ್ಯಾಧಿಕಾರಿಗಳ‌ ಕಚೇರಿ ಸಭಾಂಗಣದಲ್ಲಿ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ ತಾಲ್ಲೂಕು ಮಟ್ಟದ ‘ಸ್ವಸ್ಥ ನಾರಿ- ಸಶಕ್ತ ಪರಿವಾರ’ ಅಭಿಯಾನ ಕಾರ್ಯಕ್ರಮಕ್ಕೆ ಶಾಸಕ ಅನಿಲ್ ಚಿಕ್ಕಮಾಧು ಚಾಲನೆ ನೀಡಿದರು.

” ‘ಸ್ವಸ್ಥ ನಾರಿ- ಸಶಕ್ತ ಪರಿವಾರ’ ಅಭಿಯಾನವನ್ನೂ ರಾಜ್ಯ ಸರ್ಕಾರವು ಯೋಜನೆಯನ್ನಾಗಿ ಮಾಡಿದೆ. ಭಾರತದಾದ್ಯಂತ ಮಹಿಳೆಯರು ಮತ್ತು ಮಕ್ಕಳ ಸಮಗ್ರ ಆರೋಗ್ಯದ ಮೇಲೆ ಗಮನಹರಿಸುವ ಒಂದು ಅಭಿಯಾನವಾಗಿದ್ದು, ಇದನ್ನು 2025ರ ಸೆಪ್ಟೆಂಬರ್. 17ರಂದು ಪ್ರಾರಂಭಿಸಲಾಯಿತು. ಈ ಅಭಿಯಾನದ ಉದ್ದೇಶ, ವಿವಿಧ ಕಾಯಿಲೆಗಳನ್ನು (ಉದಾಹರಣೆಗೆ ಮಧುಮೇಹ, ಕ್ಯಾನ್ಸರ್) ಮುಂಚಿತವಾಗಿ ಪತ್ತೆಹಚ್ಚಲು ಆರೋಗ್ಯ ಶಿಬಿರಗಳನ್ನು ನಡೆಸುವುದು, ಮಹಿಳೆಯರ ಆರೋಗ್ಯ ಮತ್ತು ಪೌಷ್ಟಿಕಾಂಶದ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ತನ್ಮೂಲಕ ಬಲಿಷ್ಠ ಕುಟುಂಬಗಳು ಹಾಗೂ ಸಮಾಜವನ್ನು ನಿರ್ಮಿಸುವುದು”.

“ರೋಗಗಳನ್ನು ಮುಂಚಿತವಾಗಿ ಪತ್ತೆಹಚ್ಚಲು ವೈದ್ಯಕೀಯ ಶಿಬಿರಗಳನ್ನು ಆಯೋಜಿಸುವುದು. ಪೌಷ್ಟಿಕಾಂಶ ಮತ್ತು ಒಟ್ಟಾರೆ ಆರೋಗ್ಯದ ಬಗ್ಗೆ ಮಹಿಳೆಯರಲ್ಲಿ ಜಾಗೃತಿ ಮೂಡಿಸುವುದು. ಆರೋಗ್ಯವಂತ ಮಹಿಳೆಯರು ಸಮಾಜದ ಬಲವರ್ಧನೆಗೆ ಕೊಡುಗೆ ನೀಡುತ್ತಾರೆ ಎಂಬುದು ಈ ಅಭಿಯಾನದ ಮುಖ್ಯ ಸಿದ್ಧಾಂತವಾಗಿದೆ”.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಭಿಯಾನ ಪ್ರಾರಂಭವಾದಾಗಿನಿಂದ ದೇಶಾದ್ಯಂತ ದೊಡ್ಡ ಸಂಖ್ಯೆಯ ಆರೋಗ್ಯ ಶಿಬಿರಗಳನ್ನು ನಡೆಸಲಾಗಿದೆ. ಲಕ್ಷಾಂತರ ನಾಗರಿಕರು ಈ ಅಭಿಯಾನದ ಪ್ರಯೋಜನಗಳನ್ನು ಪಡೆಯುತ್ತಿದ್ದಾರೆ. ಕೇಂದ್ರ ಸರ್ಕಾರಿ ಸಂಸ್ಥೆಗಳು, ರಾಜ್ಯ ಸರ್ಕಾರಗಳು, ಆರೋಗ್ಯ ಕಾರ್ಯಕರ್ತರು, ಆಶಾ ಕಾರ್ಯಕರ್ತೆಯರು ಮತ್ತು ಸಮುದಾಯ ಸಂಸ್ಥೆಗಳ ಸಕ್ರಿಯ ಭಾಗವಹಿಸುವಿಕೆಯಿಂದ ಇದು ಯಶಸ್ವಿಯಾಗುತ್ತಿದೆ” ಎಂದರು.

ಆರೋಗ್ಯವಂತ ಮಹಿಳೆ, ಬಲಿಷ್ಠ ಕುಟುಂಬ ಎಂಬ ಸಂಕಲ್ಪದೊಂದಿಗೆ ಬಲಿಷ್ಠ ರಾಷ್ಟ್ರವನ್ನು ನಿರ್ಮಿಸುವುದು. ಮಹಿಳೆಯರಿಗೆ ಅಧಿಕ ರಕ್ತದ ಒತ್ತಡ ,ಮಧುಮೇಹ ಮತ್ತು ಕ್ಯಾನ್ಸರ್ ಕಾಯಿಲೆಗಳ ತಪಾಸಣೆ.ರಕ್ತ ಹೀನತೆ ,ಕ್ಷಯರೋಗ ಮತ್ತು ಸಿಕಲ್ ಸೆಲ್ ಕಾಯಿಲೆಗಳ ಪರೀಕ್ಷೆಗಳು. ಗರ್ಭಿಣಿಯರಿಗೆ ಪ್ರಸವಪೂರ್ವ ತಪಾಸಣೆ. ಮಕ್ಕಳುಗಳಿಗೆ ಲಸಿಕಾ ಸೌಲಭ್ಯ ಇತ್ಯಾದಿ ಮಾಹಿತಿ ಶಿಬಿರದಲ್ಲಿ ಒದಗಿಸುವುದಾಗಿದೆ.

  • ಬೊಜ್ಜು ತಡೆ ಗಟ್ಟಲು ,ಸಕ್ಕರೆ ಮತ್ತು ಖಾದ್ಯ ತೈಲ ಗಳ ಸೇವನೆಯನ್ನು ಕಡಿಮೆ ಮಾಡಲು ಒತ್ತು ನೀಡುವುದು. ಆರಂಭಿಕ ಬಾಲ್ಯದ ಆರೈಕೆ ಮತ್ತು ಶಿಕ್ಷಣ ಮತ್ತು ಪೋಷಣೆ ಶಿಕ್ಷಣ.
  • ಶಿಶು ಮತ್ತು ಎಳೆಯ ಮಕ್ಕಳ ಆಹಾರ ಪದ್ಧತಿಗಳು.
  • ಪೋಷಣೆ ಮತ್ತು ಮಕ್ಕಳ ಆರೈಕೆಯಲ್ಲಿ ಪುರುಷರ ಭಾಗವಹಿಸುವಿಕೆಯನ್ನು ಉತ್ತೇಜಿಸುವುದು.
  • ಸ್ಥಳೀಯ ಪೌಷ್ಟಿಕ ಆಹಾರ ಸಂಪನ್ಮೂಲಗಳಿಗೆ ಉತ್ತೇಜನ.
  • ಸಮ್ಮಿಲನ ಕ್ರಮ ಮತ್ತು ಡಿಜಿಟಲೀಕರಣ
  • ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ವಿಶೇಷ ನೊಂದಣಿ ಆಂದೋಲನ.

ಈ ಮೇಲಿನ ಎಲ್ಲ ಸೇವೆಗಳನ್ನು ಪಡೆಯಲು. ಮತ್ತು ಮಕ್ಕಳು ತಮ್ಮ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ಆಯುಷ್ಮಾನ್ ಆರೋಗ್ಯ ಮಂದಿರಗಳಿಗೆ ಬೇಟಿ ನೀಡಿ ಸರ್ಕಾರದ ಸವಲತ್ತುಗಳನ್ನು ಪಡೆದುಕೊಳ್ಳಿ ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಕೊಡಗು | ಕಾಫಿ ಬೆಳೆಗಾರರ ಸಂಕಷ್ಟ ಪರಿಹರಿಸುವಲ್ಲಿ ಎಲ್ಲರೂ ಕೈಜೋಡಿಸಿ : ಡಾ ಮಂತರ್ ಗೌಡ

ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಟಿ. ರವಿಕುಮಾರ್, ಮುಖಂಡರಾದ ಶಂಭುಲಿಂಗ ನಾಯಕ, ಕೃಷ್ಣ ನಾಯ್ಕ, ಪುರದ ಕಟ್ಟೆ ಬಸವರಾಜು, ಪಟ್ಟಣ ಪಂಚಾಯಿತಿ ಸದಸ್ಯ ಶ್ರೀನಿವಾಸ, ರಾಜು, ಸಿದ್ದರಾಮು, ವನಸಿರಿ ಉಮೇಶ್, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಸಿಬ್ಬಂದಿ ವರ್ಗದವರು, ಸಮುದಾಯ ಆರೋಗ್ಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಗರ್ಭಿಣಿಯರು ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...