ಚಾಮರಾಜನಗರ | ಸ್ವಚ್ಛತಾ ಅಭಿಯಾನಕ್ಕೆ ಶಾಸಕ ಸಿ ಪುಟ್ಟರಂಗಶೆಟ್ಟಿ ಚಾಲನೆ

Date:

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ ಸೇರಿದಂತೆ ಪಟ್ಟಣದ ಹಲವು ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಚಾಮರಾಜನಗರದ ಸಂತೇಮರಹಳ್ಳಿ ವೃತ್ತದಲ್ಲಿಂದು ಹಮ್ಮಿಕೊಳ್ಳಲಾಗಿದ್ದ ಸ್ವಚ್ಚತಾ ಅಭಿಯಾನಕ್ಕೆ ಶಾಸಕ ಸಿ ಪುಟ್ಟರಂಗಶೆಟ್ಟಿ ಹಸಿರು ನಿಶಾನೆ ತೋರಿದರು.

ನಗರಸಭೆ ಅಧ್ಯಕ್ಷ ಎಸ್ ಸುರೇಶ್, ಉಪಾಧ್ಯಕ್ಷೆ ಮಮತ, ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಬಿ ಟಿ ಕವಿತ ಸೇರಿದಂತೆ ಇನ್ನಿತರರು ದೊಡ್ಡಂಗಡಿ ಬೀದಿಯುದ್ದಕ್ಕೂ ಕಸಪೊರಕೆ ಹಿಡಿದು ರಸ್ತೆಯನ್ನು ಸ್ವಚ್ಚಗೊಳಿಸುವ ಮೂಲಕ ‘ ಚಾಮರಾಜನಗರ ಸ್ವಚ್ಚತಾ ಅಭಿಯಾನ’ ಕಾರ್ಯಕ್ರಮಕ್ಕೆ ಹುರುಪು ತಂದರು. ಪಟ್ಟಣದ ಸ್ವಚ್ಚತೆಗಾಗಿ ನಗರದ ನಾಗರಿಕರನ್ನು ಪ್ರೇರೇಪಿಸಿದರು.

ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಬಿ ಟಿ ಕವಿತ ಅವರು ರಸ್ತೆಯ ಅಂಗಡಿಗಳ ಮಾಲೀಕರೊಂದಿಗೆ ಮಾತನಾಡಿ ರಸ್ತೆಯ ಮುಂಭಾಗದಲ್ಲಿ ಎಲ್ಲೆಂದರಲ್ಲಿ ಕಸ ಸುರಿಯದೇ ನಿಗಧಿತ ಸ್ಥಳದಲ್ಲೇ ಹಾಕಬೇಕು. ಪ್ಲಾಸ್ಟಿಕ್ ಬಳಸಬಾರದು. ಅಂಗಡಿ ಮುಂದಿನ ಚರಂಡಿಯಲ್ಲಿ ಕಸ ಹಾಕದಂತೆ ಮಾಲೀಕರ ಮನವೊಲಿಸಿದರು. ಶುದ್ಧ ಗಾಳಿ, ಶುದ್ಧ ಜಲಕ್ಕಾಗಿ ಸ್ವಚ್ಚತೆಯ ಅರಿವನ್ನು ಸಾರ್ವಜನಿಕರಿಗೆ ಮೂಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ವಚ್ಚತಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಎಂಎಸ್ಐಎಲ್ ಅಧ್ಯಕ್ಷ ಹಾಗೂ ಶಾಸಕರಾದ ಸಿ ಪುಟ್ಟರಂಗಶೆಟ್ಟಿ ” ಚಾಮರಾಜನಗರ ಪಟ್ಟಣ ನಾಲ್ಕೂ ಕಡೆಯು ಅಭಿವೃದ್ಧಿ ಹೊಂದುತ್ತಿದೆ. ಮುಖ್ಯವಾಗಿ ಪಟ್ಟಣದ ಜನರಿಗೆ ಸ್ವಚ್ಚತೆಯ ಬಗ್ಗೆ ಜಾಗೃತಿ ಅಗತ್ಯವಾಗಿದೆ. ಸುಂದರ ಪಟ್ಟಣಕ್ಕಾಗಿ ಸ್ವಚ್ಚತಾ ಕಾರ್ಯ ನಿರಂತರವಾಗಿ ನಡೆಯಬೇಕು. ಪಟ್ಟಣದ ಒಳಚರಂಡಿ ವ್ಯವಸ್ಥೆಯನ್ನು ಸಮಗ್ರ ಅಭಿವೃದ್ಧಿಗಾಗಿ 144 ಕೋಟಿ ಅನುದಾನದ ಅವಶ್ಯವಿದೆ. ಸ್ವಚ್ಚತೆಗೆ ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳ ಸಹಕಾರವು ಬೇಕು ” ಎಂದರು.

ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಮಾತನಾಡಿ ” ಬಹಳ ಉತ್ಸಾಹದಿಂದ ಸ್ವಚ್ಚತಾ ಅಭಿಯಾನ ಆರಂಭಿಸಿದ್ದೇವೆ. ಸ್ವಚ್ಚತೆ ಎನ್ನುವುದು ನಗರಸಭೆಯ ಕೆಲಸ ಮಾತ್ರವಲ್ಲ. ಸ್ವಚ್ಚತಾ ಕಾರ್ಯದಲ್ಲಿ ಎಲ್ಲರ ಸಹಭಾಗಿತ್ವ ಅಗತ್ಯವಾಗಿದೆ. ಮುಂದಿನ ಒಂದು ವರ್ಷದೊಳಗೆ ಚಾಮರಾಜನಗರ ಸ್ವಚ್ಚ, ಸುಂದರ ಪಟ್ಟಣವಾಗುವ ನಿಟ್ಟಿನಲ್ಲಿ ಪಟ್ಟಣದ ಎಲ್ಲಾ 31 ವಾರ್ಡ್‍ಗಳಲ್ಲಿಯೂ ಪ್ರತಿ ವಾರ ಸ್ವಚ್ಚತಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕಾಗಿದೆ. ಚೆಲುವ ಚಾಮರಾಜನಗರಕ್ಕಾಗಿ ಎಲ್ಲರೂ ಒಗ್ಗೂಡಿ ಶ್ರಮಿಸಬೇಕಾಗಿದೆ. ಇದಕ್ಕಾಗಿ ಎಲ್ಲಾ ಸಂಘ ಸಂಸ್ಥೆಗಳ ಸಹಕಾರ, ನೆರವು ಬೇಕಾಗಿದೆ.

ಸ್ವಚ್ಚತೆ ಒಂದು ದಿನದ ಕಾರ್ಯಕ್ರಮವಾಗಬಾರದು. ನಿರಂತರವಾಗಿರಬೇಕು. ಎಲ್ಲಾ ವಾರ್ಡ್‍ಗಳಲ್ಲಿ ಜನಾಂದೋಲನ ಮಾದರಿಯಲ್ಲಿ ಸ್ವಚ್ಚತಾ ಅರಿವು ಕಾರ್ಯಕ್ರಮ ನಡೆಯಬೇಕು. ಎಲ್ಲಾ ಜನಪ್ರತಿನಿಧಿಗಳು, ನಾಗರಿಕರು ಸ್ವಚ್ಚತಾ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು. ಮನೆ ಮನೆಗಳಲ್ಲಿ, ಅಂಗಡಿಗಳ ಹಂತದಲ್ಲಿಯೇ ಹಸಿ ಕಸ, ಒಣ ಕಸ ಬೇರ್ಪಡಿಸಿ ಸ್ವಚ್ಚತಾ ವಾಹನಗಳಿಗೆ ನೀಡಬೇಕು. ಕಸವನ್ನು ಸೂಕ್ತವಾಗಿ ವಿಲೇವಾರಿ ಮಾಡಬೇಕು. ಪ್ರತಿದಿನ ಬೆಳ್ಳಂಬೆಳಿಗ್ಗೆಯೇ ಸ್ವಚ್ಚತೆ ಕಾರ್ಯದಲ್ಲಿ ತೊಡುಗುವ ಪೌರಕಾರ್ಮಿಕರಿಗೆ ಸಾರ್ವಜನಿಕರು ಸಹಕಾರ ನೀಡಬೇಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಕೊಡಗು | ‘ ಲೈನ್ ಮನೆ ‘ ಜೀತ ಇಂದಿಗೂ ಜೀವಂತ

ಚುಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮುನ್ನಾ, ನಗರಸಭೆ ಸದಸ್ಯರಾದ ಕುಮುದ, ಬಸವಣ್ಣ, ಚಂದ್ರಶೇಖರ್, ಚಿನ್ನಮ್ಮ, ಮುಂಜುನಾಥ್, ಶಿವರಾಜು, ಪೌರಾಯುಕ್ತ ಎಸ್ ವಿ ರಾಮದಾಸ್, ಪಟ್ಟಣದ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಸ್ವಚ್ಚತಾ ಅಭಿಯಾನ ಕಾರ್ಯಕ್ರಮದಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...