ಯಾದಗಿರಿ | ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನುರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹ

Date:

ಯಾದಗಿರಿಯ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ ಅವರನ್ನು ರಾಜ್ಯ ಸರ್ಕಾರದ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಬೇಕು. ಅವರಿಗೆ ಸಚಿವ ಸ್ಥಾನ ನೀಡಬೇಕು. ಇದರಿಂದ, ಕಾಂಗ್ರೆಸ್‌ಗೂ, ಕ್ಷೇತ್ರದ ಅಭಿವೃದ್ಧಿಗೂ ಒಳಿತಾಗುತ್ತದೆ ಎಂದು ಯಾದಗಿರಿ ಕಾಂಗ್ರೆಸ್‌ ಎಸ್‌ಸಿ ವಿಭಾಗ ಜಿಲ್ಲಾ ಸಂಘಟನಾ ಕಾರ್ಯದರ್ಶಿ, ಕುರಕುಂದಾ ಗ್ರಾಮ ಪಂಚಾಯತಿ ಮಾಜಿ ಉಪಾಧ್ಯಕ್ಷ ಮಲ್ಲು ಹಲಗಿ ಒತ್ತಾಯಿಸಿದ್ದಾರೆ.

ಕಾಂಗ್ರೆಸ್‌ ನಾಯಕರನ್ನು ಒತ್ತಾಯಿಸಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಮಲ್ಲು ಹಲಗಿ, “ಕಳೆದ ನಾಲ್ಕು ದಶಕಗಳಿಂದಲೂ ಚೆನ್ನಾರೆಡ್ಡಿ ಪಾಟೀಲ್ ಅವರು ಕಾಂಗ್ರೆಸ್‌ನ ನಿಷ್ಠಾವಂತರಾಗಿ, ಪ್ರಾಮಾಣಿಕವಾಗಿ ಹಗಲಿರುಳು ದುಡಿದಿದ್ದಾರೆ. ಶಾಸಕರಾಗಿ ಬಡವರ, ರೈತರ ಹಾಗೂ ವಿದ್ಯಾರ್ಥಿಗಳ ಸಂಕಷ್ಟಗಳನ್ನು ಆಲಿಸಿ, ಪರಿಹಾರ ಒದಗಿಸಿದ್ದಾರೆ. ಅಭಿವೃದ್ಧಿ ಕೆಲಸಗಳನ್ನು ಮಾಡಿ ಸರ್ವ ಜನಾಂಗದ ಏಳಿಗೆಗಾಗಿ ಶ್ರಮಿಸಿದ್ದಾರೆ” ಎಂದು ವಿವರಿಸಿದ್ದಾರೆ.

“ಲೋಕಸಭಾ ಹಾಗೂ ಈಶಾನ್ಯ ಪದವಿಧರ ಅಭ್ಯರ್ಥಿಗಳ ಗೆಲುವಿಗೆ ಪಾಟೀಲ್‌ ಶ್ರಮಿಸಿದ್ದು, ಅನುಭವಿ ರಾಜಕಾರಣಿ ಆಗಿದ್ದಾರೆ. ಅವರ ಸೇವೆ ಮತ್ತು ಅನುಭವವನ್ನು ಗುರುತಿಸಿ, ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ (ಡಿಸಿಎಂ) ಡಿಕೆ ಶಿವಕುಮಾರ್ ಅವರಲ್ಲಿ ಮನವಿ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...