ಕೃಷ್ಣರಾಜನಗರದಲ್ಲಿ ಡಾ ಬಿ ಆರ್ ಅಂಬೇಡ್ಕರ್ ಪರಿನಿರ್ವಾಣ ದಿನದಂದು ಗೌರವ ಸಲ್ಲಿಸಿದ ಶಾಸಕ ಡಿ ರವಿಶಂಕರ್

Date:

ಮೈಸೂರು ಜಿಲ್ಲೆ ಕೃಷ್ಣರಾಜನಗರ ಹಾಗೂ ಸಾಲಿಗ್ರಾಮ ತಾಲ್ಲೂಕು ದಲಿತ ಸಂಘಟನೆಗಳ ಒಕ್ಕೂಟದಿಂದ ಹಮ್ಮಿಕೊಳ್ಳಲಾಗಿದ್ದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಪರಿನಿರ್ವಾಣ ದಿನದಂದು ಶಾಸಕರಾದ ಡಿ. ರವಿಶಂಕರ್ ಗೌರವ ಸಲ್ಲಿಸಿದರು.

ಅಂಬೇಡ್ಕರ್ ಅವರು ಸಮಾನತೆಯ ಹರಿಕಾರರಾಗಿ, ಅಸಮಾನತೆ ತೊಡೆದು ಹಾಕುವಲ್ಲಿ ಸಂವಿಧಾನ ರಚಿಸಿ, ನಿಯಮಾವಳಿಗಳ ಮೂಲಕ ಎಲರಿಗೂ ಸಮಾನಾದ ಹಕ್ಕುಗಳನ್ನು ರಚಿಸಿದ್ದಾರೆ. ಶೋಷಿತ, ಧಮನಿತ, ದಲಿತರ ಏಳಿಗೆಗಾಗಿ ಒಳಮೀಸಲಾತಿ ಜಾರಿ ಕುರಿತಾಗಿ ಅಂದೇ ಬರೆದಿದ್ದಾರೆ. ಇಂತಹ ಮಹಾನಾಯಕರಿಗೆ ದೀಪ ನಮನದ ಮೂಲಕ ಗೌರವ ಸಲ್ಲಿಸಿದರು.

1000201435

ಬೆಳಗ್ಗೆ 10-30 ರ ಸುಮಾರಿಗೆ ದಲಿತ ಸಂಘಟನೆಗಳ ಮುಖಂಡರು ಹಾಗೂ ಶಾಸಕರು ಮಾಲಾರ್ಪಣೆ ಮಾಡಿದರು. ಸಂಜೆ 7 ರ ಹೊತ್ತಿಗೆ ಶಾಸಕರಾದ ಡಿ. ರವಿಶಂಕರ್ ಹಾಗೂ ತಹಶೀಲ್ದಾರ್ ಸುರೇಂದ್ರಮೂರ್ತಿ ಅವರು ದೀಪ ನಮನ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಯಿಂದ ವಿವಿ ರಸ್ತೆ ಮೂಲಕ, ಪುರಸಭೆ ವೃತ್ತ, ಸಿಎಂ ರಸ್ತೆ, ಡಬಲ್ ಟ್ಯಾಂಕ್, ಬಜಾರ್ ರಸ್ತೆ ಮೂಲಕ ಮೆರವಣಿಗೆ ಸಾಗಿತು. ಬಳಿಕ ಕೃಷ್ಣರಾಜನಗರದ ತತ್ವಜ್ಞಾನಿ ಕಲಾತಂಡದಿಂದ ನುಡಿನಮನ ಕಾರ್ಯಕ್ರಮ ಹಾಗೂ ಹನಸೋಗೆ ಕಲಾತಂಡದಿಂದ ನೃತ್ಯರೂಪಕ ನಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾದ ಶಂಕರಮೂರ್ತಿ, ದಲಿತ ಮುಖಂಡರಾದ ಹನಸೋಗೆ ನಾಗರಾಜು, ನಂಜಪ್ಪ, ಚೆಲುವರಾಜು ಹೊಸಕೋಟೆ, ಕಳ್ಳಿಮುದ್ದನಹಳ್ಳಿ ಚಂದ್ರು, ಗುರುಸ್ವಾಮಿ ಮೂಲೆಪೆಟ್ಲು, ಶಿವು ಹೆಬ್ಬಾಳು, ಮಾದೇವ (ಗುಂಡ) ಗಂಧನಹಳ್ಳಿ, ರುಕ್ಮಾಂಗದ ಡಿ. ಕೆ ಕೊಪ್ಪಲು, ಶಾಂತಿ ರಾಜು, ಗೌರಮ್ಮ ಕಗ್ಗೆರೆ ಸೇರಿದಂತೆ ಇನ್ನಿತರರು ಇದ್ದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಮಲಗಿದ್ದ ವಿದ್ಯಾರ್ಥಿಗೆ ಹಾವು ಕಡಿತ; ಆಸ್ಪತ್ರೆಗೆ ದಾಖಲು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...