ಮಡಿಕೇರಿ | ಡಾ ಬಿ ಆರ್ ಅಂಬೇಡ್ಕರ್ ಪ್ರತಿಮೆ ಸ್ಥಾಪನೆಗೆ ಭೂಮಿ ಪೂಜೆ ಸಲ್ಲಿಸಿದ ಶಾಸಕ ಡಾ ಮಂತರ್ ಗೌಡ

Date:

ಕೊಡಗು ಜಿಲ್ಲೆ, ಮಡಿಕೇರಿ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ಗುಡ್ಡೆಮನೆ ಅಪ್ಪಯ್ಯ ಗೌಡರ ಪ್ರತಿಮೆ ಬಳಿಯ ನಗರಸಭಾ ಉದ್ಯಾನವನದ ಜಾಗದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಶಾಸಕರಾದ ಡಾ. ಮಂತರ್ ಗೌಡ ಭೂಮಿ ಪೂಜೆ ನೆರವೇರಿಸಿದರು.

ದಶಕಗಳ ಹೋರಾಟದ ಬಳಿಕ ಜಿಲ್ಲಾ ಕೇಂದ್ರದಲ್ಲಿ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಾಣವಾಗುತ್ತಿದೆ. ಪ್ರತಿಮೆ ನಿರ್ಮಾಣಕ್ಕೆ ₹44 ಲಕ್ಷ ರೂಪಾಯಿ ವೆಚ್ಚವಾಗಲಿದ್ದು, ನಗರಸಭೆಯಿಂದ ₹20 ಲಕ್ಷ ರೂಪಾಯಿ ನೀಡಲಾಗುತ್ತಿದೆ. ಜೊತೆಗೆ ಶಾಸಕರ ನಿಧಿಯಿಂದ ಅನುದಾನ ಭರಿಸಲಾಗುವುದು. ದಾನಿಗಳು ಸಹ ಸ್ವಯಂ ಪ್ರೇರಣೆಯಿಂದ ಅಗತ್ಯ ಸಹಕಾರ ನೀಡುವಂತೆ ಮನವಿ ಮಾಡಿದರು.

ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಕಾಮಗಾರಿಯನ್ನು ಶೀಘ್ರವೇ ಪ್ರಾರಂಬಿಸಿ ಏಪ್ರಿಲ್ 14 ರಂದು ಉದ್ಘಾಟಿಸುವಂತಾಗಬೇಕು. ಆ ನಿಟ್ಟಿನಲ್ಲಿ ಎಂಜಿನಿಯರ್ ಗಳು ಕ್ರಮವಹಿಸುವಂತೆ ತಿಳಿಸಿದರು. ಎಲ್ಲರೂ ಸಂಘಟಿತರಾದಾಗ ಮಾತ್ರ ಅಭಿವೃದ್ಧಿ ಸಾಧ್ಯ. ಆ ದಿಸೆಯಲ್ಲಿ ಪ್ರತಿಮೆ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಗರಸಭೆ ಅಧ್ಯಕ್ಷೆ ಪಿ. ಕಲಾವತಿ ಮಾತನಾಡಿ, ಅಂಬೇಡ್ಕರ್ ಅವರ ಬರಹ ಹಾಗೂ ಭಾಷಣಗಳ ಅಧ್ಯಯನ ಮಾಡಬೇಕು. ಅಧ್ಯಯನದಿಂದ ದೂರದೃಷ್ಟಿಯನ್ನು ತಿಳಿಯುವಂತಾಗಬೇಕು ಎಂದರು. ನಗರಸಭೆ ಉಪಾಧ್ಯಕ್ಷ ಮಹೇಶ್ ಜೈನಿ ಮಾತನಾಡಿ ಡಾ. ಬಿ.ಆರ್. ಅಂಬೇಡ್ಕರ್ ಅವರು ದೇಶದ ಆಸ್ತಿಯಾಗಿದ್ದು, ಅವರು ರಾಷ್ಟ್ರಕ್ಕೆ ನೀಡಿರುವ ಸಂವಿಧಾನ, ಕಾರ್ಮಿಕರು ಮತ್ತು ಮಹಿಳೆಯರಿಗೆ ನೀಡಿರುವ ಹಕ್ಕುಗಳ ಕೊಡುಗೆ ಅಪಾರ ಎಂದರು.

ಈ ಸುದ್ದಿ ಓದಿದ್ದೀರಾ? ಇ-ಗಸ್ತು ತಂತ್ರಾಂಶದಲ್ಲಿ ಅರಣ್ಯ ಗಸ್ತು ನಿಗಾಕ್ಕೆ ಸಚಿವ ಈಶ್ವರ್ ಬಿ. ಖಂಡ್ರೆ ಸೂಚನೆ

ಕಾರ್ಯಕ್ರಮದಲ್ಲಿ ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ನಗರಸಭೆ ಸದಸ್ಯರಾದ ಅನಿತಾ ಪೂವಯ್ಯ, ಕೆ.ಎಸ್.ರಮೇಶ್, ಎಸ್.ಸಿ. ಸತೀಶ್, ಚಿತ್ರಾವತಿ, ಉಮೇಶ್ ಸುಬ್ರಮಣಿ, ಅಮಿನ್ ಮೊಹಿಸಿನ್, ಮಂಜುಳಾ, ಉಷಾ ಕಾವೇರಪ್ಪ, ಚಂದ್ರಶೇಖರ, ಶಾರದ ನಾಗರಾಜು, ಜಗದೀಶ್, ಜುಲೇಕಾಬಿ, ಮುತ್ತುರಾಜ್, ಚಂದ್ರಶೇಖರ್, ಸದಾ ಮುದ್ದಪ್ಪ, ಟಿ.ಪಿ. ರಮೇಶ್, ಎಚ್.ಎಲ್. ದಿವಾಕರ, ಪ್ರತಿಮೆ ನಿರ್ಮಾಣ ಸಮಿತಿ ಅಧ್ಯಕ್ಷರಾದ ಜಯಪ್ಪ ಹಾನಗಲ್, ಅಂಬೆಕಲ್ಲು ಕುಶಾಲಪ್ಪ, ಅಂಬೆಕಲ್ಲು ‌ನವೀನ್, ಮೋಹನ್ ಮೌರ್ಯ, ಬಿ.ಬಿ. ಭಾರತೀಶ್, ಚುಮ್ಮಿ ದೇವಯ್ಯ, ವಿ.ಕೆ. ಲೋಕೇಶ್, ಹಂಸ, ನಿರ್ವಾಣಪ್ಪ, ಗಾಯತ್ರಿ ನರಸಿಂಹ, ಪ್ರೇಮ, ಪ್ರಕಾಶ್ ಆಚಾರ್ಯ, ಬೇಕಲ್ ರಾಮನಾಥ್, ಪ್ರೇಮಕುಮಾರ್, ವೀರಭದ್ರಯ್ಯ, ಈರಪ್ಪ, ಕೂಡಿಗೆ ಅಣ್ಣಯ್ಯ, ಪೌರಾಯುಕ್ತ ಎಚ್.ಆರ್. ರಮೇಶ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಶೇಖರ್, ಎಂಜಿನಿಯರ್ ಗಳಾದ ಪ್ರಮೋದ್, ಸತೀಶ್ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...