ನಗರಸಭೆ ಅಧಿಕಾರಿಗಳು ಸಿಬ್ಬಂದಿ ವಿರುದ್ಧ ಶಾಸಕ ಕೊತ್ತೂರು ಮಂಜುನಾಥ್ ಸಿಡಿಮಿಡಿ

Date:

ಕೋಲಾರ: ನಗರಸಭೆ ಹಾಗೂ ತಾಲ್ಲೂಕು ಕಚೇರಿಗಳಲ್ಲಿ ಹೆಚ್ಚು ಭ್ರಷ್ಟಾಚಾರ ಆರೋಪ ‌ಕೇಳಿ ಬರುತ್ತಿದೆ. ‌ಖಾತೆ, ಜನನ ಮರಣ‌ ಪ್ರಮಾಣಪತ್ರಕ್ಕೆ ಹಣ ಕೇಳುತ್ತಿರುವ ದೂರು ಜನರಿಂದ ಬರುತ್ತಿದೆ ಏಕೆ ಕೆಲಸ ವಿಳಂಬ ಮಾಡುತ್ತಿದ್ದೀರಿ? ದೂರುಗಳು ಬಂದರೆ ಸುಮ್ಮನಿರುವುದಿಲ್ಲ ಎಂದು ಶಾಸಕ ಕೊತ್ತೂರು ಮಂಜುನಾಥ್ ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ನಗರಸಭೆಯಲ್ಲಿ ಗುರುವಾರ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು ನಗರದ ಹಲವು ಕಾಲುವೆಗಳು ಪ್ಲಾಸ್ಟಿಕ್ ಮಯವಾಗಿವೆ ಅಂಗಡಿಗಳ ಮೇಲೆ ಪ್ಲಾಸ್ಟಿಕ್ ದಾಳಿ ನಡೆಸುವುದರಿಂದ‌ ಪ್ರಯೋಜನ ಇಲ್ಲ ಪ್ಲಾಸ್ಟಿಕ್ ಮೂಲ ಪತ್ತೆ ಮಾಡಿ ಎಲ್ಲಿಂದ ಬರುತ್ತದೆ‌ ಎಂಬುದನ್ನು ಪತ್ತೆ ಹಚ್ಚಿ ದಾಳಿ‌ ಮಾಡಿ ಮೂರು ತಿಂಗಳಲ್ಲಿ ಪ್ಲಾಸ್ಟಿಕ್ ‌ಇಲ್ಲದಂತೆ‌ ಮಾಡಬೇಕು ಇದ್ದರೆ ಕೇಸ್ ಹಾಕುವ ಎಚ್ಚರಿಕೆ ನೀಡಬೇಕು ಎಂದರು.

ಪ್ಲಾಸ್ಟಿಕ್ ಸಂಬಂಧ ಮಾತನಾಡಿದ ಆಯುಕ್ತ ನವೀನ್ ಚಂದ್ರ ಈಗಾಗಲೇ ಎಚ್ಚರಿಕೆ ನೀಡಿದ್ದೇವೆ ಮುಂದಿನ ದಿನಗಳಲ್ಲಿ ಅನಿರೀಕ್ಷಿತ ದಾಳಿ ನಡೆಸುತ್ತೇವೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಾಸಕರು‌ ಮಾತು ಮುಂದುವರಿಸಿ ನಗರಸಭೆ ಚುನಾವಣೆ ಸದ್ಯಕ್ಕೆ ನಡೆಯಲ್ಲ.‌ ಅಧಿಕಾರಿಗಳು ಸಾರ್ವಜನಿಕರಿಗೆ ತೊಂದರೆಯಾದರೆ ಸುಮ್ಮನಿರಲ್ಲ ಎಂದರು.

ಬೇಸಿಗೆ ಬರುತ್ತಿದ್ದು, ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು. ನಗರದಲ್ಲಿ ೩೦೦ ಕೊಳವೆ ಬಾವಿ ಇವೆ. ೨೦ ಕೊಳವೆಬಾವಿ ಕೊರೆಯಿಸಲು ಅಧಿಕಾರಿಗಳು ಪ್ರಸ್ತಾಪ ಕಳಿಸಿದರೆ ಅನುದಾನ ‌ಕೊಡಿಸಲಾಗುವುದು ಶಾಸಕರಿಗೆ ೫೦ ಕೋಟಿ ವಿಶೇಷ ಅನುದಾನ ಸಿಗುತ್ತಿದೆ. ಅದರಲ್ಲಿ ಸ್ವಲ್ಪ ಅನುದಾನ ತೆಗೆದಿರಿಸಲಾಗುವುದು‌ ಎಂದರು.

ತೆರಿಗೆ ಸಂಗ್ರಹ ವೇಗವಾಗಿ ನಡೆಯಬೇಕು ವಾಣಿಜ್ಯ ಚಟುವಟಿಕೆ ನಡೆಸುವ ಮಳಿಗೆಗಳ ತೆರಿಗೆ ಸಂಗ್ರಹಿಸಬೇಕು. ನಗರದಲ್ಲಿ 40 ಸಾವಿರ‌‌ ಆಸ್ತಿಗಳಿವೆ. ವಾಣಿಜ್ಯ ಮಳಿಗೆ ಬಳಿ‌ ಹೋಗಿ ಪರಿಶೀಲಿಸಿ ತೆರಿಗೆ ವಸೂಲಿ ಮಾಡಬೇಕು.‌ ನೀರಿನ ಕರ ವಸೂಲಿಗೂ ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದರು.

ಆಯುಕ್ತ ನವೀನ್ ಚಂದ್ರ ಮಾತನಾಡಿ, ೧೧ ಕೋಟಿ ಆಸ್ತಿ ತೆರಿಗೆ ವಸೂಲಿ ಮಾಡಲಾಗಿದೆ. ೧ ಕೋಟಿ ಬಾಕಿ ಇದೆ. ಈ ಸಂಬಂಧ ಅಧಿಕಾರಿಗಳಿಗೆ ಸೂಚನೆ‌ ನೀಡಲಾಗಿದೆ ನಾಲ್ಕು ಮನೆಗೆ ನಲ್ಲಿ‌ ಹಾಕಿದ್ದರೆ‌ ನಾಲ್ಕು ಮಂದಿ ಠೇವಣಿ ಕಟ್ಟಬೇಕು ಇಲ್ಲದಿದ್ದರೆ ‌ಸಂಪರ್ಕ ಕಡಿತಗೊಳಿಸಲಾಗುವುದು ಎಂದು ತಿಳಿಸಿದರು.

ಜನನ ಮರಣ ಪ್ರಮಾಣಪತ್ರ ‌ವಿತರಣೆ ಸಂಬಂಧ ನಗರದ ಎಲ್ಲ ಆಸ್ಪತ್ರೆ ಸೇರಿಸಿ ಸಭೆ ನಡೆಸಲಾಗುವುದು. ಯಾವುದೇ ವಿಳಂಬ, ನ್ಯೂನತೆಗೆ‌ ಅವಕಾಶ ನೀಡುವುದಿಲ್ಲ ಎಂದರು.

ಇದನ್ನು ಓದಿದ್ದೀರಾ..? ಕಾಂಗ್ರೆಸ್ ನಾಯಕ ಆದಿನಾರಾಯಣ ರಿಂದ 25 ಸಾವಿರಕ್ಕು ಹೆಚ್ಚು ಹೆಲ್ಮೆಟ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ

ನಗರಸಭೆ ಮಾಜಿ ಅಧ್ಯಕ್ಷೆ ಲಕ್ಷ್ಮಿದೇವಮ್ಮ ಹಾಗೂ ಇತರೆ ಅಧಿಕಾರಿಗಳು ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...