ಹನೂರು | ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಶಾಸಕ ಎಂ ಆರ್ ಮಂಜುನಾಥ್ ಚಾಲನೆ

Date:

ಚಾಮರಾಜನಗರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಆಶ್ರಯದಲ್ಲಿ 2025-26 ನೇ ಸಾಲಿನ ಹನೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಕ್ಷೇತ್ರದ ಶಾಸಕ ಎಂ. ಆರ್. ಮಂಜುನಾಥ್ ರವರು ಗುಂಡು ಎಸೆತದ ಮೂಲಕ ಚಾಲನೆ ನೀಡಿದರು.

ಜಿಲ್ಲೆಯಲ್ಲಿ ಅತೀ ದೊಡ್ಡ ಕ್ರೀಡಾಂಗಣವಿದೆ. ಅದು ಬಿಟ್ಟರೆ ಹನೂರು ಪಟ್ಟಣದಲ್ಲಿ 8 ಎಕರೆ ಜಾಗದಲ್ಲಿ ಕ್ರೀಡಾಂಗಣವಿದ್ದು, ಮುಂದಿನ ದಿನಗಳಲ್ಲಿ ಅಭಿವೃದ್ಧಿ ಪಡಿಸಿ ಉತ್ತಮವಾದ ಕ್ರೀಡಾಂಗಣವಾಗಿ ಹೊರ ಹೊಮ್ಮಲಿದೆ ಎಂದು ಭರವಸೆ ನೀಡಿದರು.

2874

ಕ್ರೀಡಾಪಟುಗಳಿಗೆ ಶಿಸ್ತು ಬಹಳ ಮುಖ್ಯ. ಯುವಕ, ಯುವತಿಯರು ಜಿಲ್ಲಾ ಹಾಗೂ ರಾಜ್ಯ ಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸುತ್ತಿದ್ದೀರಿ. ರಾಷ್ಟ್ರ ಮಟ್ಟದಲ್ಲಿ ಚಿನ್ನದ ಪದಕ ತಂದರೆ ಏಳು ಲಕ್ಷ ರೂಪಾಯಿ, ಬೆಳ್ಳಿಗೆ 5 ಲಕ್ಷ, ಕಂಚಿಗೆ 3 ಲಕ್ಷ ಬಹುಮಾನ ರಾಜ್ಯ ಸರ್ಕಾರ ನೀಡುತ್ತದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖ್ಯಮಂತ್ರಿಗಳು ಕೆಲ ದಿನಗಳ ಹಿಂದೆ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ದೈಹಿಕ ಶಿಕ್ಷಕರು ತಮ್ಮ ಶಾಲೆಗಳಲ್ಲಿ ಮಕ್ಕಳಿಗೆ ತಿಳಿಸಿ ಕ್ರೀಡೆಯಲ್ಲಿ ಭಾಗವಹಿಸುವಂತೆ ಯುವ ಜನತೆಗೆ ಮಾಹಿತಿ ನೀಡಬೇಕು. ಸೌಲಭ್ಯಗಳು ದೊರೆಯುತ್ತಿದ್ದು ಇದರ ಸದುಪಯೋಗ ಪಡೆದುಕೊಂಡು, ಉತ್ತಮ ಅರೋಗ್ಯಕ್ಕಾಗಿ ಯುವ ಜನತೆ ಹೆಚ್ಚಾಗಿ ಕ್ರೀಡೆಯಲ್ಲಿ ಪಾಲ್ಗೊಳ್ಳಬೇಕು ಎಂದರು.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಕಿಶೋರಿಯರ ಸಮಗ್ರ ಆರೋಗ್ಯ ಕಾಳಜಿಗೆ ‘ಪ್ರಾಣಸಖಿ’ ಯೋಜನೆ; ಶಿಕ್ಷಣ ಅಧಿಕಾರಿಗಳಿಗೆ ಕಾರ್ಯಾಗಾರ

2887

ಪಟ್ಟಣ ಪಂಚಾಯತಿ ಅಧ್ಯಕ್ಷೆ ಮುಂತಾಜ್ ಬಾನು, ಉಪಾಧ್ಯಕ್ಷ ಆನಂದ್ ಕುಮಾರ್, ಗ್ಯಾರೆಂಟಿ ಯೋಜನೆ ತಾಲೂಕು ಅಧ್ಯಕ್ಷ ರಾಚಪ್ಪ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಸುರೇಶ್, ದೈಹಿಕ ಶಿಕ್ಷಕ ಹಾಗೂ ಪರಿವೀಕ್ಷಕ ಕೆಂಪರಾಜು, ಪಟ್ಟಣ ಪಂಚಾಯತಿ ಸದಸ್ಯೆ ಪವಿತ್ರ ಪ್ರಸನ್ನ ಕುಮಾರ್, ತಾಲೂಕು ವ್ಯಾಪ್ತಿಯ ದೈಹಿಕ ಶಿಕ್ಷಕರುಗಳು, ಕ್ರೀಡಾಪಟುಗಳು ಸೇರಿದಂತೆ ಇನ್ನಿತರರು ಕ್ರೀಡಾಕೂಟ ಚಾಲನಾ ಕಾರ್ಯಕ್ರಮದಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...