ಕಮಲನಗರ | ಖೇರ್ಡಾ-ಚಿಕ್ಲಿ(ಯು) ರಸ್ತೆ ಕಾಮಗಾರಿಗೆ ಶಾಸಕ ಪ್ರಭು ಚವ್ಹಾಣ ಚಾಲನೆ

Date:

ಬೀದರ್‌ ಜಿಲ್ಲೆಯ ಕಮಲನಗರ ತಾಲೂಕಿನ ಖೇರ್ಡಾನಿಂದ ಚಿಕ್ಲಿ(ಯು) ಮಹಾರಾಷ್ಟ್ರ ಬಾರ್ಡರ್‌ವರೆಗೆ ನಿರ್ಮಿಸಲಾಗುತ್ತಿರುವ 8.5 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಮಾಜಿ ಸಚಿವ, ಔರಾದ್ ಶಾಸಕ ಪ್ರಭು.ಬಿ ಚವ್ಹಾಣ ಸೋಮವಾರ ದಾಬಕಾ(ಸಿ) ಗ್ರಾಮದಲ್ಲಿ ಭೂಮಿ ಪೂಜೆ ನೆರವೇರಿಸಿದರು.

ʼಕೆಲಸ ಗುಣಮಟ್ಟದಿಂದ ಆಗಬೇಕು ಮತ್ತು ನಿಗದಿತ ಅವಧಿಯೊಳಗೆ ಮುಗಿಸಬೇಕು. ಅಂದಾಜು ಪಟ್ಟಿಯಲ್ಲಿ ಇರುವಂತೆ ಕೆಲಸ ಅಚ್ಚುಕಟ್ಟಾಗಿ ಆಗಬೇಕು. ಮುಂದಿನ ದಿನಗಳಲ್ಲಿ ರಸ್ತೆ ಬಗ್ಗೆ ಜನರಿಂದ ದೂರುಗಳು ಬಾರದಂತೆ ಕಾಮಗಾರಿ ನಡೆಸಬೇಕುʼ ಎಂದು ಶಾಸಕರು ಗುತ್ತಿಗೆದಾರ ಜಗದೀಶ ಖೂಬಾ ಅವರಿಗೆ ದೂರವಾಣಿ ಮುಖಾಂತರ ಸಂಪರ್ಕಿಸಿ ಕಟ್ಟುನಿಟ್ಟಿನ ಸೂಚಿಸಿದರು.

ನಾನು ಶಾಸಕನಾದ ನಂತರ ಈ ರಸ್ತೆ ಎಂದೂ ಕೆಟ್ಟಿರಲಿಲ್ಲ. ಗುತ್ತಿಗೆದಾರರ ಕಾರಣದಿಂದಾಗಿ ಈ ರಸ್ತೆ ಸಾಕಷ್ಟು ಹದಗೆಟ್ಟು ಹೋದ ಕಾರಣ ಈ ಭಾಗದ ಜನರು ಒಂದುವರೆ ವರ್ಷ ಕಾಲ ಸಂಕಷ್ಟ ಎದುರಿಸಿರುವುದಕ್ಕೆ ನೋವಾಗಿದೆ. ಚುನಾವಣಾ ಪೂರ್ವದಲ್ಲಿಯೇ ಆರಂಭಿಸಿ ರಸ್ತೆಯನ್ನೆಲ್ಲ ಅಗೆದು ಏಕಾಏಕಿ ನಿಲ್ಲಿಸಿದ್ದರಿಂದ ಓಡಾಡಲು ಸಂಕಷ್ಟ ಅನುಭವಿಸಿದ್ದಾರೆ. ಹೆರಿಗೆಗಾಗಿ ಹೋಗಬೇಕಾದರೆ ಸಂಕಷ್ಟವಾಗುತ್ತಿದೆ ಎಂದು ಮಹಿಳೆಯರು ನೋವು ಹಂಚಿಕೊಂಡಿದ್ದನ್ನು ನೆನೆಸಿಕೊಂಡರೆ ಮೈ ನಡುಗುತ್ತದೆ ಎಂದು ಜನತೆ ಅನುಭವಿಸಿದ ಸಂಕಷ್ಟಗಳನ್ನು ಹಂಚಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼರಸ್ತೆ ಅಪೂರ್ಣಗೊಳಿಸಿದ್ದರಿಂದ ಜನತೆ ಪ್ರತಿದಿನ ಹತ್ತಾರು ಕರೆಗಳನ್ನು ಮಾಡುವಂತಾಗಿದೆ. ಮುಂದೆ ಹೀಗಾಗಬಾರದು. ರಸ್ತೆ ಪೂರ್ಣಗೊಳಿಸುವರೆಗೆ ನಿಲ್ಲಿಸಬಾರದು. ಹಿಂದಿನಂತೆ ಮಾಡಿದರೆ ಯಾವುದೇ ಕಾರಣಕ್ಕೂ ಸುಮ್ಮನಿರುವುದಿಲ್ಲ. ಗ್ರಾಮಸ್ಥರು ಕೂಡ ತಮ್ಮ ಊರಿನ ರಸ್ತೆ ಕೆಲಸ ಸರಿಯಾಗಿ ಆಗುವಂತೆ ಮುತುವರ್ಜಿ ವಹಿಸಬೇಕು. ಎಲ್ಲಿಯಾದರೂ ಕೆಲಸ ಕಳಪೆಯಾಗುತ್ತಿರುವುದು ಕಂಡುಬಂದರೆ ತಮ್ಮನ್ನು ಅಥವಾ ಸಂಬಂಧಪಟ್ಟವರಿಗೆ ಮಾಹಿತಿ ನೀಡಿ ಸರಿಪಡಿಸಿಕೊಳ್ಳಬೇಕು. ಗ್ರಾಮಸ್ಥರ ಎಲ್ಲ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸುವೆʼ ಎಂದು ಭರವಸೆ ನೀಡಿದರು.

ಈ ಬಗ್ಗೆ ಈದಿನ.ಕಾಮ್‌ ನಲ್ಲಿ ಜುಲೈ 28ರಂದು ʼಬಲಿಗಾಗಿ ಕಾದಿರುವ ರಸ್ತೆ ಗುಂಡಿಗಳು : ದುರಸ್ತಿ ಯಾವಾಗ?ʼ ಎಂಬ ಶೀರ್ಷಿಕೆಯಲ್ಲಿ ವಿಶೇಷ ವರದಿ ಪ್ರಕಟವಾಗಿತ್ತು. ವರದಿಗೆ ಸ್ಪಂದಿಸಿದ ಕ್ಷೇತ್ರದ ಶಾಸಕರು ಇದೀಗ ನನೆಗುದಿಗೆ ಬಿದ್ದ ಅಪೂರ್ಣ ಕಾಮಗಾರಿಗೆ ಚಾಲನೆ ನೀಡಿದ್ದಾರೆ.

ಇದೇ ವೇಳೆ ಶಾಸಕರು 65 ಲಕ್ಷ ಅನುದಾನದಲ್ಲಿ ನಿರ್ಮಿಸಲಾಗುತ್ತಿರುವ ಸೇತುವೆ (ಸಿಡಿ) ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಕತ್ತಲೆಯಲ್ಲಿ ಜಿಲ್ಲಾ ಉದ್ಯೋಗ ವಿನೀಮಯ ಕಚೇರಿ; ಸಿಬ್ಬಂದಿ ಪರದಾಟ

ಈ ಸಂದರ್ಭದಲ್ಲಿ ಔರಾದ(ಬಿ) ಎಪಿಎಂಸಿ ಅಧ್ಯಕ್ಷ ಧೊಂಡಿಬಾ ನರೋಟೆ, ಮುಖಂಡರಾದ ರಾಮಶೆಟ್ಟಿ ಪನ್ನಾಳೆ, ಪ್ರತೀಕ್ ಚವ್ಹಾಣ, ಸತೀಷ ಪಾಟೀಲ, ಯೋಗೇಶ ಪಾಟೀಲ, ರಾಜು ಶೆಳ್ಕೆ, ಸಂಜು ಮುರ್ಕೆ, ಜಾಕೀರ್ ಶೇಕ್, ಕುಶಾಲ ನಾಯಕ್, ಧನಾಜಿ ಬಿರಾದಾರ, ವಸಂತ ಶಿಂಧೆ, ಹನುಮಂತ ನಾಯಕ್, ಸುಜಿತ ರಾಠೋಡ, ಶುಭಂ ಪಾಟೀಲ್, ಗ್ಯಾನೋಬಾ ಪಾಟೀಲ, ಅಂಕುಶ ವಾಡೇಕರ್, ಭಾನುದಾಸ ಜಾಧವ್ ಸೇರಿದಂತೆ ಗ್ರಾಮ ಪಂಚಾಯಿತಿಗಳ ಅಧ್ತಕ್ಷರು, ಸದಸ್ಯರು ಹಾಗೂ ಗ್ರಾಮಸ್ಥರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...