ಶಾಸಕ ಪ್ರಭು ಚವ್ಹಾಣ ವಾಟ್ಸ್‌ಆ್ಯಪ್‌ಗೆ ಅಶ್ಲೀಲ ಫೋಟೊ, ವಿಡಿಯೊ ಕಳುಹಿಸಿ ಹಣದ ಬೇಡಿಕೆ : ದೂರು ದಾಖಲು

Date:

ಮಾಜಿ ಸಚಿವ, ಔರಾದ್‌ ಕ್ಷೇತ್ರದ ಶಾಸಕ ಪ್ರಭು ಚವ್ಹಾಣ ಅವರನ್ನು ಅಪರಿಚಿತ ವ್ಯಕ್ತಿಯೊಬ್ಬರು ವಾಟ್ಸ್‌ಆ್ಯಪ್ ಸಂಖ್ಯೆಗೆ ಸಂದೇಶ ಕಳುಹಿಸಿ ₹30 ಸಾವಿರ ಹಣದ ಬೇಡಿಕೆ ಇಟ್ಟು, ಹಣ ಹಾಕದಿದ್ದರೆ ವಿಡಿಯೊ ಶೇರ್‌ ಮಾಡುವೆ ಎಂದು ಬೆದರಿಕೆ ಹಾಕಿದ ಘಟನೆ ನಡೆದಿದೆ.

ಈ ಕುರಿತು ಶಾಸಕ ಪ್ರಭು ಚವ್ಹಾಣ ಅವರ ಸಂಬಂಧಿ ಮುರುಳಿಧರ ಪವಾರ್‌ ಎಂಬುವವರು ನೀಡಿದ ದೂರಿನ ಮೇರೆಗೆ ಔರಾದ್ ತಾಲ್ಲೂಕಿನ ಹೊಕ್ರಣಾ ಪೊಲೀಸ್‌ ಠಾಣೆಯಲ್ಲಿ ಸೆ.8 ರಂದು ಅಪರಿಚಿತ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಾಗಿದೆ.

ಶಾಸಕ ಪ್ರಭು ಚವ್ಹಾಣ ಅವರ ವಾಟ್ಸ್‌ಆ್ಯಪ್ ಸಂಖ್ಯೆಗೆ ಅಪರಿಚಿತ ವ್ಯಕ್ತಿ ʼನನಗೆ ₹30 ಸಾವಿರ ಹಣ ಹಾಕಿ ಸಾಹೇಬ್ರೆ, ನನ್ನ ಮೇಲೆ ಭರವಸೆ ಇಟ್ಟು ಸಹಾಯ ಮಾಡಿ, ಹಣ ಹಾಕದಿದ್ದರೆ ಯೂಟ್ಯೂಬ್‌ನಲ್ಲಿ ವಿಡಿಯೊ ಶೇರ್‌ ಮಾಡುವೆʼ ಎಂದು ಸಂದೇಶ ಕಳುಹಿಸಿದ್ದರು. ಶಾಸಕರು ಅದನ್ನು ನೋಡಿ ಸುಮ್ಮನಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಸೆ.7ರಂದು ಸಂಜೆ ಎರಡು ಬಾರಿ ಬೇರೆ ಬೇರೆ ವಾಟ್ಸ್‌ಆ್ಯಪ್ ಸಂಖ್ಯೆಯಿಂದ ಶಾಸಕ ಪ್ರಭು ಚವ್ಹಾಣ ಹಾಗೂ ಪ್ರಿಯಾಂಕಾ ಗಾಂಧಿ ಅವರ ಭಾವಚಿತ್ರ, ಮತ್ತು ಶಾಸಕರ ಭಾವಚಿತ್ರಕ್ಕೆ ಟೆಕ್ನಿಕಲ್‌ ಬಳಸಿ ಹುಡುಗಿಯೊಂದಿಗೆ ಇರುವ ಪಾಡ್‌ಕಾಸ್ಟ್‌ ಫೈಲ್‌ ವಿಡಿಯೊ ಶಾಸಕ ಪ್ರಭು ಚವ್ಹಾಣ ಅವರ ವಾಟ್ಸ್‌ಆ್ಯಪ್‌ ಸಂಖ್ಯೆಗೆ ಕಳುಹಿಸಿದ್ದರುʼ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಶಾಸಕ ಪ್ರಭು ಚವ್ಹಾಣ ಅವರ ಹೆಸರು ಕೆಡಿಸುವ ಉದ್ದೇಶದಿಂದ ಅಪರಿಚಿತ ವ್ಯಕ್ತಿ ಬೇರೆ ಬೇರೆ ಮೂರು ವಾಟ್ಸ್‌ಆ್ಯಪ್‌ ಸಂಖ್ಯೆಗಳಿಂದ ವಿಡಿಯೊ ಹಾಗೂ ಸಂದೇಶ ಕಳುಹಿಸಿ ₹30 ಸಾವಿರ ಹಣದ ಬೇಡಿಕೆ ಇಟ್ಟು, ಕೊಡದಿದ್ದರೆ ವಿಡಿಯೊ ಶೇರ್‌ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ಕೊಪ್ಪಳ | ಪ್ರೌಢ ಶಾಲೆ ವಿದ್ಯಾರ್ಥಿನಿ ಗರ್ಭಿಣಿ : ಪೋಕ್ಸೊ ದಾಖಲು, ಯುವಕನ ಬಂಧನ

ಈ ಸಂಬಂಧ ಅಪರಿಚಿತ ವ್ಯಕ್ತಿ ವಿರುದ್ಧ 308 ಬಿಎನ್‌ಎಸ್ ಹಾಗೂ 66(D) ಐಟಿ ಎಕ್ಟ್ ಅಡಿಯಲ್ಲಿ ದೂರು ದಾಖಲಿಸಿಕೊಂಡ ಹೊಕ್ರಣಾ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...