ಶಾಸಕ ಪ್ರಭು ಚವ್ಹಾಣ ಪುತ್ರನಿಂದ ಮೋಸ ಆರೋಪ : ಯುವತಿ ಕುಟುಂಬಸ್ಥರ ವಿರುದ್ಧ ದೂರು ದಾಖಲು

Date:

ಬೀದರ್‌ ಜಿಲ್ಲೆಯ ಔರಾದ್‌ನ ಬಿಜೆಪಿ ಶಾಸಕ ಪ್ರಭು ಚವ್ಹಾಣ ಅವರ ಪುತ್ರ ಪ್ರತೀಕ್ ಚವ್ಹಾಣ ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾರೆ ಎಂದು ಆರೋಪಿಸಿ ಯುವತಿಯೊಬ್ಬರು ಪ್ರತೀಕ್‌ ವಿರುದ್ಧ ಪ್ರಕರಣ ದಾಖಲಾದ ಬೆನ್ನಲ್ಲೇ, ಇದೀನ ಶಾಸಕ ಪ್ರಭು ಚವ್ಹಾಣ ಅವರ ಸಂಬಂಧಿಕರೊಬ್ಬರು ಯುವತಿಯ ಕುಟುಂಬದ ಎಂಟು ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ʼಪ್ರಭು ಚವಾಣ್‌ ಅವರ ಮಗ ಪ್ರತೀಕ್‌ ಚವಾಣ್‌ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಹಾರಾಷ್ಟ್ರದ ಯುವತಿಯೊಬ್ಬರು ಮಹಿಳಾ ಪೊಲೀಸ್‌ ಠಾಣೆಗೆ ಭಾನುವಾರ ದೂರು ಕೊಟ್ಟಿದ್ದರು. ಈಗ ಆ ಯುವತಿಯ ಪೋಷಕರು, ಸಹೋದರ ಸೇರಿದಂತೆ ಎಂಟು ಜನರ ವಿರುದ್ಧ ಶಾಸಕರ ಸಂಬಂಧಿ ಮುರಳಿಧರ ಪ್ರಕಾಶ್‌ ಪವಾರ್‌ ಎಂಬುವರು ದೂರು ಕೊಟ್ಟಿದ್ದಾರೆ.

ಈ ಎಂಟು ಜನರ ಜತೆಗೆ ಇತರೆ 30ಕ್ಕೂ ಹೆಚ್ಚು ಜನರ ತಂಡ ಇದೇ ಜುಲೈ 5ರಂದು ರಾತ್ರಿ 8.30ರ ಸುಮಾರಿಗೆ ಅಕ್ರಮವಾಗಿ ಮನೆಗೆ ನುಗ್ಗಿ ಕಲ್ಲು, ಕಟ್ಟಿಗೆ ಹಾಗೂ ಇತರೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಈ ವೇಳೆ ಶಾಸಕರು ತಪ್ಪಿಸಿಕೊಂಡಿದ್ದು, ನನಗೆ ಬೆನ್ನು ಹಾಗೂ ಟೊಂಕದ ಮೇಲೆ ಗಾಯಗಳಾಗಿವೆ. ಘಟನೆಯಲ್ಲಿ ಶಾಸಕರ ಪುತ್ರ ಪ್ರತೀಕ್ ಚವಾಣ್ ಹಾಗೂ ಅಮಿತ್‌ ರಾಠೋಡ್ ಅವರಿಗೂ ಗಾಯವಾಗಿದೆ. ಮನೆಯಲ್ಲಿದ್ದ ಮಹಿಳೆಯರನ್ನು ಬಿಡದೆ ಅವಾಚ್ಯ ಪದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾರೆ. ಈ ಎಲ್ಲ ಘಟನೆಗೆ ಮುಖಂಡ ದೀಪಕ್‌ ಪಾಟೀಲ್‌ ಚಾಂದೋರಿ ಅವರ ಕುಮ್ಮಕು ಕಾರಣʼ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...