ಚಿಕ್ಕಬಳ್ಳಾಪುರ | ಪಕ್ಷ ನಿಷ್ಠರಿಗೆ ಮಾತ್ರ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ : ಶಾಸಕ ಪ್ರದೀಪ್‌ ಈಶ್ವರ್

Date:

ಹಿಂದಿನ ಚುನಾವಣೆಯಲ್ಲಿ ಯಾರು ಕಾಂಗ್ರೆಸ್‌ ಪಕ್ಷಕ್ಕೆ ನಿಷ್ಠರಾಗಿದ್ದರೋ, ಅವರೇ ಈ ಬಾರಿ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರಾಗುತ್ತಾರೆ. ಯಾರೆಲ್ಲ ಬಿಜೆಪಿ ಬೆಂಬಲ ಕೊಡುತ್ತಾರೋ, ಅವರಿಗೆಲ್ಲಾ ತಕ್ಕ ಪಾಠ ಕಲಿಸುತ್ತೇವೆ ಎಂದು ನಗರ ಶಾಸಕ ಪ್ರದೀಪ್‌ ಈಶ್ವರ್‌ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ ಬಿಜೆಪಿಯವರು ಅಧ್ಯಕ್ಷರಾಗಿದ್ದರು. ಈ ಬಾರಿ 16 ಮಂದಿ ಕಾಂಗ್ರೆಸ್‌ ಸದಸ್ಯರಿದ್ದಾರೆ. ಎಲ್ಲರಿಗೂ ಪಕ್ಷದಿಂದ ಟಿಕೆಟ್‌ ಕೊಟ್ಟು ಗೆಲ್ಲಿಸಿದ್ದೇವೆ. ನಾವು ಯಾರಿಗೂ ಹಣ ಕೊಡುವುದಿಲ್ಲ. ಪ್ರವಾಸ ಕಳಿಸುವುದಿಲ್ಲ. ಪಾರ್ಟಿ ಕೊಡಿಸುವುದಿಲ್ಲ. ನಿಯತ್ತಿನಿಂದ ಪಕ್ಷ ಕಟ್ಟಿದ್ದೇವೆ. ಯಾರಾದರೂ ಅಡ್ಡ ಮತದಾನ ಮಾಡಿದರೆ ಪಕ್ಷದಿಂದ ಉಚ್ಚಾಟನೆ ಮಾಡಿ, 6 ವರ್ಷ ಅನರ್ಹಗೊಳಿಸಲಾಗುವುದು ಎಂದು ಖಡಕ್‌ ಎಚ್ಚರಿಕೆ ನೀಡಿದರು.

ಸಂಸದರಿಗೆ ಕೋವಿಡ್‌ನಲ್ಲಿ ಮಾಡಿರುವ ದುಡ್ಡಿದೆ. ಹೆಣದ ಮೇಲೆ ಮಾಡಿರುವ ದುಡ್ಡಿದೆ. ಅಕ್ರಮವಾಗಿ ಮಾಡಿರುವ ದುಡ್ಡಿದೆ. ಒಂದು ವೋಟಿಗೆ ೩೦ ಲಕಷ ಕೊಡುತ್ತಿದ್ದಾರಂತೆ. ಆದರೆ, ನಾವು ಯಾರಿಗೂ ಹಣ ಹಂಚುವುದಿಲ್ಲ. ಅಯೋಗ್ಯರಿಗೆ ಹಣ ಹಂಚುವ ಬದಲು ಬಡ ಮಕ್ಕಳಿಗೆ ಕೊಟ್ಟರೆ ಅನುಕೂಲವಾಗುತ್ತದೆ. ಇದೇ ನನ್ನ ರಾಜಕಾರಣ ಶೈಲಿ. ತಲೆ ಹೊಡೆದು ರಾಜಕಾರಣ ಮಾಡುವುದಿಲ್ಲ ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕದಲ್ಲಿ ಅಹಿಂದ ನಾಯಕನನ್ನು ಉಳಿಸಿಕೊಳ್ಳುತ್ತೇವೆ. ಸಿದ್ದರಾಮಯ್ಯ ಅವರೇ ನಮ್ಮ ಮುಖ್ಯಮಂತ್ರಿಗಳು. ಅವರ ಪರ ನಾವೆಲ್ಲಾ ಗಟ್ಟಿಯಾಗಿ ನಿಲ್ಲುತ್ತೇವೆ. ಬಿಜೆಪಿಯವರು ಸಿದ್ದರಾಮಯ್ಯ ಅವರನ್ನು ಏನೂ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.

ಸಿಎಂ ಸಿದ್ದರಾಮಯ್ಯ ಅವರನ್ನು ಕಂಡರೆ ಭಯ. ಅಹಿಂದ ನಾಯಕನನ್ನು ಸಹಿಸಿಕೊಳ್ಳುವ ಶಕ್ತಿ, ಸೌಜನ್ಯ ಕುಮಾರಸ್ವಾಮಿ ಮತ್ತು ವಿಜಯೇಂದ್ರ ಅವರಿಗೆ ಇಲ್ಲ. ಅದಕ್ಕಾಗಿ ನಾಳೆ ಸುಮಾರು 2 ಸಾವಿರ ಜನ ರಾಜಭವನ ಚಲೋ ಹೊರಟಿದ್ದೇವೆ. ನಾನು ಸಹ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದೇನೆ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾನವ ಘನತೆಗಾಗಿ ಹೋರಾಟ – ಕನ್ನಡ ತಮಿಳು ಎಂಬ ಗಡಿಗೆರೆಗಳು ಸಲ್ಲದು

ಆಪರೇಷನ್‌ ಕಮಲದ ವಿಚಾರವಾಗಿ ಪ್ರತಿಕ್ರಿಯಿಸಿದ ಶಾಸಕರು, ಅದು ಸಾಧ್ಯವಿಲ್ಲ. 135 ಜನ ಶಾಸಕರಿದ್ದಾರೆ. ನಮ್ಮ ಈ ಸರಕಾರದಲ್ಲಿ ಡಾ.ಕೆ.ಸುಧಾಕರ್‌ ತರ ಯಾರು ಇಲ್ಲ. ಹಾಗಾಗಿ ಯಾರೂ ಆಪರೇಷನ್‌ಗೆ ಒಳಪಡಲ್ಲ. ಬಿಜೆಪಿಯವರಿಗೆ ನಮ್ಮನ್ನ ಕೊಂಡುಕೊಳ್ಳುವ ಶಕ್ತಿ ಇದೆಯಾ?. ಅವೆಲ್ಲಾ ಮರೆಯಬೇಕು ಅವರು ಎಂದು ಸ್ಪಷ್ಟನೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...