ಕೋಮು ಪ್ರಚೋದಕರ ಪರವಾದ ಶಾಸಕ ವೇದವ್ಯಾಸರ ನಡೆ ಖಂಡನೀಯ: ಅಬ್ದುಲ್ ಜಲೀಲ್

Date:

ಕೋಮು ಪ್ರಚೋದನಾತ್ಮಕ ಭಾಷಣದ ಮೂಲಕ ಸಮಾಜದ ಸಾಮರಸ್ಯ ಕದಡುವವರ ಪರವಾಗಿ ನಿಲ್ಲುವ ಬಿಜೆಪಿ ಶಾಸಕರ ನಡೆ ಖಂಡನೀಯವೆಂದು ಎಸ್‌ಡಿಪಿಐ ಮಂಗಳೂರು ಜಿಲ್ಲಾಧ್ಯಕ್ಷ ಅಬ್ದುಲ್ ಜಲೀಲ್ ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾತ್ಮಕವಾಗಿ ಕಮೆಂಟ್ ಹಾಕಿದ ವಿಎಚ್‌ಪಿ ಮುಖಂಡ ಶರಣ್ ಪಂಪ್‌ವೆಲ್ ವಿರುದ್ಧ ಪೊಲೀಸ್ ಇಲಾಖೆ ಕಾನೂನು ಕ್ರಮ ಕೈಗೊಂಡಿರುವ ಹಿನ್ನೆಲೆಯಲ್ಲಿ ಆತನ ಪರವಾಗಿ ಹೇಳಿಕೆ ನೀಡಿರುವ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅವರ ನಡೆ ಖಂಡನೀಯವೆಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಮಂಗಳೂರು ನಗರ ಜಿಲ್ಲಾಧ್ಯಕ್ಷ ಅಬ್ದುಲ್ ಜಲೀಲ್ ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಲವಾರು ಸಮಾಜಘಾತುಕ ಕುಕೃತ್ಯಗಳಲ್ಲಿ ಭಾಗಿಯಾಗಿ ಕೊಲೆಯಂತಹ ಕೃತ್ಯವನ್ನು ಸಮರ್ಥಸಿ ಹೇಳಿಕೆ ನೀಡುವ ರೌಡಿಶೀಟರ್ ಗಳ ಪೋಷಕನಾಗಿರುವ ಸಮಾಜಘಾತುಕ ಬಜರಂಗದಳದ ಶರಣ್ ಪಂಪ್ವೆಲ್ ಅವನಂತಹ ವ್ಯಕ್ತಿಗಳ ಪರವಾಗಿ ಚುನಾಯಿತ ಜನಪ್ರತಿನಿಧಿಯಾದ ವೇದವ್ಯಾಸ್ ಕಾಮತ್ ಮಾತಾನಾಡಯವುದು ಸಂವಿಧಾನವಿರೋದಿ ನಡೆ, ಗೂಂಡಾನ ಪರವಾಗಿ ನಿಂತು ಪೋಲಿಸರ ವಿರುದ್ದ ಗೂಂಡಾಗಿರಿ ತೋರಿಸಿದ ಕಾಮತ್ ಅವರಿಗೆ ಶಾಸಕ ಸ್ಥಾನದಲ್ಲಿ ಮುಂದುವರೆಯಲು ಯಾವುದೇ ನೈತಿಕತೆ ಇಲ್ಲ. ಸಮಾಜದಲ್ಲಿ ದ್ವೇಷದ ಬೀಜ ಬಿತ್ತುವವರ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನಿನ ಕರ್ತವ್ಯವಾಗಿದ್ದು, ಕೋಮು ಪ್ರಚೋದಕ ಕ್ರಿಮಿಗಳನ್ನು ಬೆಂಬಲಿಸುವ ಜನಪ್ರತಿನಿಧಿಯ ನಡೆ ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ಧಕ್ಕೆ ತರುವಂತಾಗಿದೆ. ಶಾಂತಿ, ಸಾಮರಸ್ಯ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಸ್ಥಾನದಲ್ಲಿರುವ ಶಾಸಕರು ಬದಲಾಗಿ ಕೋಮು ಅಸಹಿಷ್ಣುತೆಗೆ ಆಸರೆ ನೀಡುವುದು ಅತ್ಯಂತ ವಿಷಾದನೀಯವಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಮಂಗಳೂರು | ತುಳು ಮೌಖಿಕ ಸಾಹಿತ್ಯವು ಇತಿಹಾಸದ ಕೊಂಡಿ: ಡಾ ತುಕಾರಾಂ ಪೂಜಾರಿ

ಎಸ್‌ಡಿಪಿಐ ಪಕ್ಷವು ಇಂತಹ ಯಾವುದೇ ಕೋಮು ಪ್ರಚೋದನೆ ಹಾಗೂ ಅದರ ಬೆಂಬಲಿಗರ ವಿರುದ್ಧ ಕಾನೂನುಬದ್ಧವಾಗಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...