ಪ್ರತಿಭಟನಾಕಾರರನ್ನು ಪೇಮೆಂಟ್‌ ಗಿರಾಕಿಗಳು ಎಂದ ಶಾಸಕ ಯತ್ನಾಳ್‌; ಕ್ಷಮೆ ಕೇಳಲು ಗಣಿಹಾರ ಆಗ್ರಹ

Date:


ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ಕಳೆದ 84 ದಿನಗಳಿಂದ ವಿಜಯಪುರದಲ್ಲಿ ಧರಣಿ ಕುಳಿತಿರುವ ಹೋರಾಟಗಾರರು ಪೇಮೆಂಟ್‌ ಗಿರಾಕಿಗಳು ಎಂದು ಹೇಳುವ ಮೂಲಕ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ನಾಲಿಗೆ ಹರಿಬಿಟ್ಟಿದ್ದು, ಕೂಡಲೇ ಅವರು ಹೋರಾಟಗಾರರಲ್ಲಿ ಕ್ಷಮೆ ಯಾಚಿಸಬೇಕು ಎಂದು ಕೆಪಿಸಿಸಿ ವಕ್ತಾರ ಎಸ್‌ ಎಂ ಪಾಟೀಲ ಗಣಿಹಾರ ಆಗ್ರಹಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಹೋರಾಟದಲ್ಲಿ ಭಾಗವಹಿಸಿದ ಪಕ್ಷಾತೀತ ನಾಯಕರು, ಸ್ವಾಮೀಜಿಗಳು, ಬುದ್ಧಿಜೀವಿಗಳಿಗೆಲ್ಲ ಲಪೂಟರು ಎಂದು ಮಾತನಾಡಿ ಅವಮಾನ ಮಾಡಿರುವ ಯತ್ನಾಳರು ತಕ್ಷಣ ಜಿಲ್ಲೆಯ ಜನತೆಯಲ್ಲಿ ಕ್ಷಮೆಯಾಚಿಸಬೇಕು. ಜಿಲ್ಲೆಗೆ ಒಂದು ಸರ್ಕಾರಿ ಮೆಡಿಕಲ್ ಕಾಲೇಜ್ ಮಾಡಬೇಕು ಎಂದು ಹೋರಾಟ ನಡೆಸುತ್ತಿರುವವರು ಸಚಿವ ಶಿವಾನಂದ ಪಾಟೀಲರ ಮನೆಗೆ ಹೋಗಿ ಪೇಮೆಂಟ್ ಪಡೆಯುತ್ತಾರೆ ಎಂದು ಹೇಳುವ ನಿಮ್ಮ ಬಳಿ ದಾಖಲೆ ಇದ್ದರೆ ಬಹಿರಂಗಪಡಿಸಬೇಕು. ಯತ್ನಾಳರು ಬೇಕಾಬಿಟ್ಟಿ ಮಾತನಾಡಿ ಹೋರಾಟಗಾರರ ಆತ್ಮಸ್ಥೈರ್ಯ ಕುಂದಿಸುವ ಕೆಲಸ ಮಾಡುತ್ತಿದ್ದಾರೆ. ಸಿದ್ದರಾಮಯ್ಯನವರನ್ನು ಹಾಗೂ ಮಂತ್ರಿಗಳನ್ನು ಓಲೈಸಿ ಮೆಡಿಕಲ್ ಕಾಲೇಜನ್ನು ತಾನೇ ಪಡೆದುಕೊಳ್ಳಬೇಕು ಎಂದು ಯತ್ನಾಳ್ ಕುತಂತ್ರ ನಡೆಸಿದ್ದಾರೆ” ಎಂದು ಆರೋಪಿಸಿದರು.

“ಕಳೆದ ಸಚಿವ ಸಂಪುಟ ಸಭೆಯಲ್ಲಿ ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪಿಸಲು ಇರುವ ಸಾಧಕ ಬಾಧಕಗಳ ಬಗ್ಗೆ ತಿಳಿಸಿ ಎಂದು ಸಿಎಂ ಅವರು ಆರೋಗ್ಯ ಇಲಾಖೆ ಕಾರ್ಯದರ್ಶಿಗಳಿಗೆ ಪತ್ರ ಕಳಿಸಿದ್ದಾರೆ. ಶಿವಾನಂದ ಪಾಟೀಲರು ಸರ್ಕಾರಿ ಮೆಡಿಕಲ್ ಕಾಲೇಜಿನ ಪರ ಇರುವುದಾಗಿ ಸ್ಪಷ್ಟಪಡಿಸಿದ್ದಾರೆ. ಜಿಲ್ಲೆಗೆ ವೈದ್ಯಕೀಯ ಕಾಲೇಜು ತರುವುದರಲ್ಲಿ ಯಾವುದೇ ಸಂಶಯ ಬೇಡ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖಂಡ ಡಾ. ರವಿಕುಮಾರ ಬಿರಾದಾರ ಮಾತನಾಡಿ, “ಯತ್ನಾಳರು ಹೋರಾಟಗಾರರ ಬಗ್ಗೆ ಕೆಟ್ಟದಾಗಿ ಮಾತನಾಡಿ, ಪೇಮೆಂಟ್ ಗಿರಾಕಿಗಳು ಎಂದಿರುವುದು ಖಂಡನೀಯ. ಹೋರಾಟಗಾರರೆಲ್ಲ ಮೊದಲಿನಿಂದ ಹಲವಾರು ವಿಚಾರಗಳಲ್ಲಿ ಹೋರಾಟ ಮಾಡಿದವರು. ಪ್ರಾಮಾಣಿಕರಾಗಿದ್ದಾರೆ. ಅಂಥವರಿಗೆ ಅವಮಾನಿಸಿದ್ದಕ್ಕಾಗಿ ತಕ್ಷಣ ಕ್ಷಮೆ ಕೇಳಬೇಕು” ಎಂದು ಒತ್ತಾಯಿಸಿದರು.

ಮುಖಂಡ ಎಂಸಿ ಮುಲ್ಲಾ ಮಾತನಾಡಿ, “ಈ ಹೋರಾಟದಲ್ಲಿ ಎಲ್ಲಾ ಸಂಘಟನೆಗಳು, ಮಠಾಧೀಶರು ಭಾಗವಹಿಸಿದ್ದಾರೆ. ಅವರನ್ನು ಲಪೂಟರು ಎನ್ನುವ ನೀವೆಷ್ಟು ಲಪೂಟರು ಎಂದು ಸಿರಿಗೇಟು ನೀಡಿದರು. ಶಿಕ್ಷಣ ಹೋರಾಟಗಾರರಿಗೆ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಅಧಿವೇಶನದಿಂದ ಬಂದ ಕೂಡಲೇ ನೀವು ಹೋದಲ್ಲಿ ಬಂದಲ್ಲಿ ಕಪ್ಪು ಬಟ್ಟೆ ಪ್ರದರ್ಶನ ಮಾಡುತ್ತೇವೆ” ಎಂದು ಎಚ್ಚರಿಸಿದರು.‌

ಇದನ್ನೂ ಓದಿ: ವಿಜಯಪುರ | ಪಂಚ ಗ್ಯಾರಂಟಿಗಳ ಕುರಿತು ಜನಜಾಗೃತಿ; ಎಲ್‌ಇಡಿ ಪ್ರದರ್ಶನ ವಾಹನಕ್ಕೆ ಚಾಲನೆ

ಹಿರಿಯ ಪತ್ರಕರ್ತ ಅನಿಲ ಹೊಸಮನಿ ಮಾತನಾಡಿ, “ಜಾತ್ಯತೀತ, ಧರ್ಮತೀತ ಹಾಗೂ ಪಕ್ಷಾತೀತವಾಗಿ 84 ದಿನಗಳಿಂದ ಹೋರಾಟ ನಡೆಯುತ್ತಿದೆ. ಈ ಹೋರಾಟದಲ್ಲಿ ರಾಜಕೀಯ ಬೆರೆಸುವ ಉದ್ದೇಶದಿಂದ ಯತ್ನಾಳರು ಹೀಗೆ ಮಾತನಾಡಿದ್ದಾರೆ. ಶಿವಾನಂದ ಪಾಟೀಲರ ಮೇಲೆ ನೀವು ರಾಜಕೀಯ ಮಾಡಿಕೊಳ್ಳಿ. ಆದರೆ ಹೋರಾಟಗಾರರ ಹೆಗಲ ಮೇಲೆ ಬಂದೂಕು ಇಟ್ಟು ಗುಂಡು ಹೊಡೆಯುವ ಕೆಲಸ ಮಾಡಬೇಡಿ” ಎಂದರು.

ಸುರೇಶ ಬಿಜಾಪುರ ಮಾತನಾಡಿ, ಸರ್ಕಾರಿ ವೈದ್ಯಕೀಯ ಕಾಲೇಜಿಗಾಗಿ ಹೋರಾಟ ನಡೆದಿದೆ. ಸಚಿವ ಎಂಬಿ ಪಾಟೀಲ್ ಹಾಗೂ ಶಿವಾನಂದ ಪಾಟೀಲರು ಸಿಎಂ ಅವರ ಮನವೊಲಿಸುತ್ತಿದ್ದಾರೆ. ಎರಡು ನೂರಕ್ಕೂ ಅಧಿಕ ಸಂಘಟನೆಗಳಿರುವ ಈ ಹೋರಾಟ ಸಮಿತಿ ಶಾಶ್ವತ ಹೋರಾಟ ಸಮಿತಿಯಾಗಲಿದೆ” ಎಂದರು.

ಸುದ್ದಿಗೋಷ್ಠಿಯಲ್ಲಿ ಅಕ್ರಂ ಮಾಶಾಳಕರ, ಫಯಾಜ್ ಕಲಾದಿಗಿ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...