ಶಾಸಕ ಯತ್ನಾಳ್‌ ವಿವಾದಾತ್ಮಕ ಹೇಳಿಕೆ; ದಲಿತರ ಕ್ಷಮೆ ಕೇಳಲು ಜಿಲ್ಲಾ ಕಾಂಗ್ರೆಸ್‌ ಸಮಿತಿ ಆಗ್ರಹ

Date:

ವಿಜಯಪುರ ನಗರ ಶಾಸಕ ಬಸನಗೌಡ ಆರ್‌ ಪಾಟೀಲ ಯತ್ನಾಳ್‌ ಅವರು ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಅವರ ಆಹ್ವಾನವನ್ನು ವಿರೋಧಿಸುವ ಜೊತೆಗೆ ದಲಿತ ಮಹಿಳೆಯರನ್ನು ಅವಮಾನಿಸಿದ್ದ ಹೇಳಿಕೆಯನ್ನು ಖಂಡಿಸಿ, ಯತ್ನಾಳ್‌ ದಲಿತರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿ ವಿಜಯಪುರ ಜಿಲ್ಲಾ ಕಾಂಗ್ರೆಸ್‌ ಸಮಿತಿಯ ಪ್ರಧಾನ ಕಾರ್ಯದರ್ಶಿ ವಸಂತ ಹೊನಮೊಡೆ ಆಗ್ರಹಿಸಿದ್ದಾರೆ.

ಕಳೆದ ಶುಕ್ರವಾರ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡುವಾಗ ದಲಿತ ಮಹಿಳೆಯರಿಗೆ ತಾಯಿ ಚಾಮುಂಡೇಶ್ವರಿಗೆ ಹೂ ಮುಡಿಸುವ ಅವಕಾಶ ಇಲ್ಲ ಎಂದು ಹೇಳಿದ್ದರು. ಭಾರತದಂತಹ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಎಲ್ಲರೂ ಸಮಾನರು ಎಂಬುದನ್ನು ಸಂವಿಧಾನ ಸ್ಪಷ್ಟಪಡಿಸುತ್ತದೆ. ಯತ್ನಾಳ್‌ ಅವರು ಅಸ್ಪೃಷ್ಯತೆಯನ್ನು ಪುನರುಚ್ಚರಿಸಿ ಅವಮಾನಗೊಳಿಸಿದ್ದನ್ನು ತೀವ್ರವಾಗಿ ಖಂಡಿಸಿರುವ ವಸಂತ, ಈ ಹೇಳಿಕೆಯನ್ನು ವಾಪಸು ಪಡೆದು ದಲಿತರ ಕ್ಷಮೆಯಾಚಿಸಬೇಕು ಎಂದು ಆಗ್ರಹ ಮಾಡಿದ್ದಾರೆ.

ಇದನ್ನೂ ಓದಿ: ವಿಜಯಪುರ | ಜಿಲ್ಲಾಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯ; ಆಸ್ಪತ್ರೆ ಎದುರೇ ಹೆರಿಗೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಲ್ಪಸಂಖ್ಯಾತರ ಬಗ್ಗೆ ನೇರವಾಗಿ ಟೀಕಿಸುತ್ತಿರುವ ಇವರು ದಲಿತರನ್ನೂ ಟಾರ್ಗೆಟ್ ಮಾಡುತ್ತಿದ್ದಾರೆ. ಇಂತಹ ಮನಸ್ಥಿತಿಯುಳ್ಳವರು ಜನಪ್ರತಿನಿಧಿಗಳಾಗಲು ಯೋಗ್ಯರಲ್ಲ. ಬಿಜೆಪಿಯ ಮನುವಾದವನ್ನು ಪ್ರತಿಪಾದಿಸುವವರು ರಾಜಕೀಯದಲ್ಲಿ ಇರಲು ಅರ್ಹರೇ ಎಂದು ಪ್ರಶ್ನಿಸಿರುವ ಅವರು, ಸನಾತನ ಧರ್ಮದ ಅರ್ಥವೇ ಅರಿಯದೆ ಮಾತನಾಡುವುದು ಮತ್ತು ದಲಿತರ ಬಗ್ಗೆ ಸಾರ್ವಜನಿಕವಾಗಿ ಮಾಧ್ಯಮಗಳ ಮುಂದೆ ಮಾತನಾಡುವುದು ಖಂಡನಾರ್ಹ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...