ವಿಪಕ್ಷಗಳ ಸಭೆ | ಬೆಂಗಳೂರಿನಲ್ಲಿ ಬಿಹಾರ ಸಿಎಂ ವಿರುದ್ಧ ಅಪಹಾಸ್ಯದ ಪೋಸ್ಟರ್

Date:

2024ರ ಲೋಕಸಭಾ ಚುನಾವಣೆಗೆ ಪ್ರತಿಪಕ್ಷಗಳ ಒಗ್ಗಟ್ಟಿನ ತಂತ್ರ ರೂಪಿಸುತ್ತಿವೆ. ಮಂಗಳವಾರ ಬೆಂಗಳೂರಿನಲ್ಲಿ ಪ್ರತಿಪಕ್ಷಗಳ ಸಭೆ ನಡೆಯುತ್ತಿದೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಕೂಡ ಸಭೆಯಲ್ಲಿ ಭಾಗಿಯಾಗಿದ್ದಾರೆ. ಈ ನಡುವೆ, ನಿತೀಶ್ ಕುಮಾರ್ ಅವರನ್ನು ‘ಅಸ್ಥಿರ ಪ್ರಧಾನಿ ಅಭ್ಯರ್ಥಿ’ ಎಂದು ಅಪಹಾಸ್ಯ ಮಾಡಿ ಕೆಲವು ಪೋಸ್ಟರ್‌ಗಳನ್ನು ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಅಳವಡಿಸಿರುವುದು ಕಂಡುಬಂದಿದೆ.

ನಿತೀಶ್ ಅವರನ್ನು ಅಪಹಾಸ್ಯ ಮಾಡಿರುವ ಪೋಸ್ಟರ್‌ಗಳು ಬೆಂಗಳೂರಿನ ಚಾಲುಕ್ಯ ವೃತ್ತ, ವಿಂಡ್ಸರ್ ಮ್ಯಾನರ್ ಸೇತುವೆ ಮತ್ತು ಹೆಬ್ಬಾಳ ಸಮೀಪದ ಏರ್‌ಪೋರ್ಟ್ ರಸ್ತೆಯಲ್ಲಿ ಕಂಡುಬಂದಿವೆ. ಆದರೆ, ಪೋಸ್ಟರ್‌ಗಳನ್ನು ಯಾರು ಹಾಕಿದ್ದಾರೆ ಎಂಬುದು ತಿಳಿದುಬಂದಿಲ್ಲ. ಪೋಸ್ಟರ್‌ ಹಾಕಿದವರು ಯಾರು ಎಂಬುದನ್ನು ತಿಳಿಯಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

‘ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್‌ ಅವರಿಗೆ ಬೆಂಗಳೂರಿನ ಕೆಂಪು ಕಾರ್ಪೆಟ್‌ ಹಾಕಿ ಸ್ವಾಗತಿಸುತ್ತಿದೆ. ಅವರು ಅಸ್ಥಿರ ಪ್ರಧಾನಿ ಅಭ್ಯರ್ಥಿ’ ಎಂದು ವ್ಯಂಗ್ಯ ಮಾಡಲಾಗಿದೆ. ಮಾತ್ರವಲ್ಲದೆ, ಬಿಹಾರದ ಸುಲ್ತಾನ್‌ಗಂಜ್ ಸೇತುವೆ ಕುಸಿತದ ಬಗ್ಗೆಯೂ ಪೋಸ್ಟರ್‌ನಲ್ಲಿ ಉಲ್ಲೇಖಿಲಾಗಿದ್ದು, ‘ಸೇತುವೆ ಕುಸಿತದ ಮೊದಲ ದಿನಾಂಕ – ಏಪ್ರಿಲ್ 2022, ಸೇತುವೆ ಕುಸಿತದ ಎರಡನೇ ದಿನಾಂಕ – ಜೂನ್ 2023. ಬಿಹಾರಕ್ಕೆ ಕುಸಿದು ಬೀಳುವ ಕೊಡುಗೆ’ ಎಂದು ಬರೆಯಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಹಾರದ ಸೇತುವೆಗಳಿಗೆ ನಿತೀಶ್ ಅವರ ಆಳ್ವಿಕೆಯನ್ನು ತಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಆದರೂ, ಪ್ರತಿಪಕ್ಷಗಳ ಏಕತೆಯನ್ನು ಮುನ್ನಡೆಸಲು ಅವರಿಗೆ ಜವಬ್ದಾರಿ ನೀಡಲಾಗಿದೆ” ಎಂದೂ ಪೋಸ್ಟರ್‌ಗಳಲ್ಲಿ ಲೇವಡಿ ಮಾಡಲಾಗಿದೆ.

1,700 ಕೋಟಿ ರೂ.ಗಳ ಮಹತ್ವಾಕಾಂಕ್ಷೆಯ ಆಗುವನಿ-ಸುಲ್ತಂಗಂಜ್ ಗಂಗಾ ಸೇತುವೆಯು ನಿರ್ಮಾಣದ ಹಂತದಲ್ಲಿದೆ. ಕಾಮಗಾರಿ ನಡೆಯುತ್ತಿರುವಾಗಲೇ 14 ತಿಂಗಳ ಅವಧಿಯಲ್ಲಿ ಎರಡು ಬಾರಿ ಕುಸಿದು ಬಿದ್ದಿದೆ. 2014ರಲ್ಲಿ ಆಗಲೂ ಮುಖ್ಯಮಂತ್ರಿಯಾಗಿದ್ದ ನಿತೀಶ್ ಕುಮಾರ್ ಅವರು ಚತುಷ್ಪತ ರಸ್ತೆಯುಳ್ಳ ಸೇತುವೆ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿದ್ದರು. ಕಾಮಗಾರಿ ಆರಂಭವಾಗಿತ್ತು. 2022ರ ಏಪ್ರಿಲ್‌ನಲ್ಲಿ ಗುಡುಗು ಸಹಿತ ಮಳೆ ಸುರಿದ ಸಮಯದಲ್ಲಿ ಸೇತುವೆಯ ಕೆಲವು ಪಿಲ್ಲರ್‌ಗಳು ಕುಸಿದು ಬಿದ್ದಿದ್ದವು. ಇದೀಗ 14 ತಿಂಗಳುಗಳ ಬಳಿ ಕಳೆದ ತಿಂಗಳು (ಜೂನ್ )14ರಂದು ಮತ್ತೊಮ್ಮೆ ಸೇತುವೆ ಕುಸಿದು ಬಿದ್ದಿದೆ.

ಈ ಸುದ್ದಿ ಓದಿದ್ದೀರಾ?: ಬೆಂಗಳೂರು ಮಹಾ ಮೈತ್ರಿಕೂಟ ಸಭೆ | ಕಾಂಗ್ರೆಸ್‌ಗೆ ಉತ್ತರ ಹತ್ತಿರ; ದೂರವಾಯಿತೇಕೆ ದಕ್ಷಿಣ?

ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಲೇಬೇಕೆಂದು ಪ್ರತಿ ಪಕ್ಷಗಳು ನಿರ್ಧರಿಸಿವೆ. ಅದಕ್ಕಾಗಿ ಸಭೆಗಳನ್ನು ನಡೆಸುತ್ತಲೇ ಇವೆ. ಜೂನ್ 23ರಂದು ಬಿಹಾರದ ಪಾಟ್ನಾದಲ್ಲಿ ಮೊದಲ ಸುತ್ತಿನ ಸಭೆ ನಡೆದಿತ್ತು. ಇದೀಗ, ಎರಡನೇ ಸುತ್ತಿನ ಸಭೆ ಬೆಂಗಳೂರಿನಲ್ಲಿ ಮಂಗಳವಾರ ನಡೆಯುತ್ತಿದೆ.

ಸಭೆಯಲ್ಲಿ ಕಾಂಗ್ರೆಸ್, ಸಂಯುಕ್ತ ಜನತಾದಳ (ಜೆಡಿಯು), ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ), ಕೊಂಗು ದೇಸ ಮಕ್ಕಳ್ ಕಚ್ಚಿ (ಕೆಡಿಎಂಕೆ), ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ), ಕ್ರಾಂತಿಕಾರಿ ಸಮಾಜವಾದಿ ಪಕ್ಷ (ಆರ್‌ಎಸ್‌ಪಿ), ತೃಣಮೂಲ ಕಾಂಗ್ರೆಸ್ (ಟಿಎಂಸಿ), ಪೀಪಲ್ಸ್‌ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ), ಆಮ್‌ ಆದ್ಮಿ ಪಕ್ಷ (ಎಎಪಿ), ಎಡಪಕ್ಷಗಳು ಸೇರಿದಂತೆ ಹಲವಾರು ಪಕ್ಷಗಳ ನಾಯಕರು ಭಾಗಿಯಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...