ನಮಗೂ ಮೋದಿ ಅಕ್ಕಿ ಕೊಟ್ಟಿರಲಿಲ್ಲ: ಬಿಜೆಪಿ ಮಾಜಿ ಸಚಿವ ಮಾಧುಸ್ವಾಮಿ

Date:

ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಕೊಡಲು ಪ್ರಧಾನಿ ಮೋದಿ ಅಕ್ಕಿ ಕೊಡುತ್ತಿಲ್ಲವೆಂದು ಕಾಂಗ್ರೆಸ್‌ ಸರ್ಕಾರ ದೂಷಿಸುತ್ತಿದೆ. ಆದರೆ, ನಾವು ಅಧಿಕಾರದಲ್ಲಿದ್ದಾಗಲೂ ಮೋದಿ ಸರ್ಕಾರ ಹೆಚ್ಚುವರಿ ಅಕ್ಕಿ ಕೊಡಲು ಒಪ್ಪಿರಲಿಲ್ಲ. ನಾವೂ ತಿಂಗಳಿಗೆ ತಲಾ 7 ಕೆ.ಜಿ ಅಕ್ಕಿ ಕೊಡಲು ಸುಮಾರು 10 ಬಾರಿ ಪ್ರಯತ್ನ ಮಾಡಿದ್ದೆವು ಎಂದು ಮಾಜಿ ಸಚಿವ ಮಾಧುಸ್ವಾಮಿ ಹೇಳಿದ್ದಾರೆ.

ಬಿಜೆಪಿ ಮತ್ತು ತಮ್ಮ ಸೋಲಿನ ನಂತರ ಮೌನವಾಗಿದ್ದ ಮಾಧುಸ್ವಾಮಿ, ಇದೀಗ ಮೌನ ಮುರಿದಿದ್ದಾರೆ. ಚಿಕ್ಕನಾಯಕನಹಳ್ಳಿಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳ ಕುರಿತು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. “ಕಾಂಗ್ರೆಸ್ ಮಾಡಿದ ಪಾಪಕ್ಕೆ ಈಗ ಸುಮ್ಮನೆ ಪ್ರಧಾನಿ ಮೋದಿ ಅವರನ್ನು ದೂಷಿಸುತ್ತಿದ್ದಾರೆ. ಬಿಜೆಪಿ ಆಡಳಿತದ ರಾಜ್ಯಕ್ಕೂ ಕೇಂದ್ರ ಹೆಚ್ಚುವರಿ ಅಕ್ಕಿ ಕೊಟ್ಟಿಲ್ಲ” ಎಂದು ಹೇಳಿದ್ದಾರೆ.

“ಆಹಾರ ಭದ್ರತಾ ಕಾಯಿದೆ ಪ್ರಕಾರ ಒಬ್ಬರಿಗೆ ದಿನಕ್ಕೆ 150-200 ಗ್ರಾಮ್ ಅಕ್ಕಿ ಸಾಕಾಗುತ್ತದೆ ಎಂದು ಅಂದಾಜಿಸಲಾಗಿದೆ. ಅದರಂತೆ,ತಿಂಗಳಿಗೆ 5 ಕೆ.ಜಿ ಅಕ್ಕಿ ಕೊಡಲಾಗುತ್ತಿದೆ. ಹೆಚ್ಚುವರಿ ದಾಸ್ತಾನು ಇರುವ ಅಕ್ಕಿಯನ್ನು ಬರಗಾಲ, ಅತಿವೃಷ್ಟಿಯಂತಹ ಸಂಕಷ್ಟ ಕಾಲದಲ್ಲಿ ಬಳಸಲು ಸಂಗ್ರಹಿಸಲಾಗಿರುತ್ತದೆ. ದಾಸ್ತಾನು ಇದೆ ಎಂಬ ಕಾರಣಕ್ಕೆ ಬೇಕಾಬಿಟ್ಟು ಕೊಡೋಕೆ ಆಗುತ್ತಾ?” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಂಕಷ್ಟದ ಕಾಲ ಬಂದರೆ, ರಾಜ್ಯಕ್ಕೆ ಮೋದಿ ಅಕ್ಕಿ ಕೊಟ್ಟೇ ಕೊಡುತ್ತಾರೆ. ತೆರಿಗೆದಾರರ ದುಡ್ಡನ್ನು ಇಷ್ಟ ಬಂದ ಹಾಗೆ ಮನೆಯಲ್ಲಿ ಕುಂತವರಿಗೆ ಹಂಚುತ್ತೇನೆ ಎಂದರೆ ರಾಜ್ಯದ ಪರಿಸ್ಥಿತಿ ಏನಾಗಬೇಡ” ಎಂದು ಪ್ರಶ್ನಿಸಿದ್ದಾರೆ.

“ಕೆಲಸ ಮಾಡಿದ್ದಕ್ಕೆ ಜನ ಪ್ರತಿಫಲ ಕೊಡುತ್ತಾರೆ ಎಂದುಕೊಂಡಿದ್ದೆವು. ಆದರೆ, ಜನ ನಮ್ಮನ್ನು ಕಡೆಗಣಿಸಿದರು. ಅವರಿಗೆ ಕಾಂಗ್ರೆಸ್‌ನವರು ಕೊಡುವ ಅಕ್ಕಿ, ದುಡ್ಡೇ ಹೆಚ್ಚಾಯಿತು. ರಾಜ್ಯದಲ್ಲಿ ನನ್ನಂತೆ ಕೆಲಸ ಮಾಡಿದ ಹಲವು ನಾಯಕರು ಸೋತಿದ್ದಾರೆ. ಅವರ‌ ಉಚಿತ ಭಾಗ್ಯಗಳ ಮುಂದೆ ನಮ್ಮ ಕೆಲಸ ಕೊಚ್ಚಿಕೊಂಡು ಹೋಯಿತು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...