ಕಾರ್ಪೊರೇಟ್‌ಗಳ ಸಾಲ ಮನ್ನಾ ಮಾಡುವ ಮೋದಿ ರೈತರ ಸಾಲ ಮನ್ನಾ ಮಾಡುತ್ತಿಲ್ಲ: ಸಿದ್ದರಾಮಯ್ಯ ಕಿಡಿ

Date:

  • ಮೋದಿ ತಮ್ಮ ಅವಧಿಯಲ್ಲಿ 118 ಲಕ್ಷ ಕೋಟಿ ರೂ. ಸಾಲ ಮಾಡಿದ್ದಾರೆ
  • ಶ್ರೀಮಂತ ಕಾರ್ಪೊರೇಟ್‌ಗಳ 12 ಲಕ್ಷ ಕೋಟಿ ರೂ. ಸಾಲ ಮನ್ನಾ
  • ಮಿಸ್ಟರ್ ಮೋದಿ, ಬಡವರು-ಮಧ್ಯಮ ವರ್ಗದವರು ಏನು ಮಾಡಬೇಕು?

ಮೋದಿ ಅವರು ಪ್ರಧಾನಿ ಆಗುವವರೆಗೂ ದೇಶದ ಸಾಲ 53 ಲಕ್ಷ ಕೋಟಿ ರೂ. ಮಾತ್ರ ಇತ್ತು. ಆದರೆ ಈಗ ದೇಶದ ಸಾಲ 170 ಲಕ್ಷ ಕೋಟಿ ರೂ. ಆಗಿದೆ. ಪ್ರದಾನಿ ಮೋದಿ ಒಬ್ಬರ ಅವಧಿಯಲ್ಲಿ 118 ಲಕ್ಷ ಕೋಟಿ ರೂ. ಸಾಲ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇಶದ ಸಾಲದ ಪ್ರಮಾಣವನ್ನು ಬಿಚ್ಚಿಟ್ಟರು.

ವಿಧಾನ ಪರಿಷತ್‌ನಲ್ಲಿ 2023-24ನೇ ಆಯವ್ಯಯದ ಮೇಲೆ ನಡೆದ ಚರ್ಚೆಗೆ ಉತ್ತರಿಸಿ, “ಶ್ರಮಿಕರ, ಬಡವರ ಹಣ ಕಿತ್ತು ಶ್ರೀಮಂತ ಕಾರ್ಪೊರೇಟ್‌ಗಳಿಗೆ ಕೊಡುವುದು ಬಿಜೆಪಿಯ ಆರ್ಥಿಕತೆ. ಈ ಕಾರಣಕ್ಕೆ ಹಾಲು, ಮೊಸರು, ಮಂಡಕ್ಕಿ ಮೇಲೂ ತೆರಿಗೆ ಹಾಕಿದ್ದಾರೆ. ಶ್ರೀಮಂತ ಕಾರ್ಪೊರೇಟ್‌ಗಳ 12 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಿದಾರೆ. ಆದರೆ, ರೈತರ ಸಾಲ ಮನ್ನಾ ಮಾಡಿ ಎಂದರೆ ಒಪ್ಪುತ್ತಿಲ್ಲ” ಎಂದರು.

“ಬೆಂಕಿ ಹಚ್ಚುವುದು ಬಿಜೆಪಿ ಕೆಲಸ. ಅವರು ಮಣಿಪುರವನ್ಮೂ ಬಿಡಲ್ಲ, ಕರ್ನಾಟಕವನ್ನೂ ಬಿಡಲ್ಲ. ಬೆಂಕಿ ಹಚ್ಚುತ್ತಾರೆ. ಮಹಾತ್ಮಾ ಗಾಂಧಿ ಅವರ ಜೀವನ ಸಂದೇಶವೇ ಸತ್ಯ-ಅಹಿಂಸೆ ಆಗಿತ್ತು. ಸದಾ ಸುಳ್ಳು ಹೇಳುವ ಬಿಜೆಪಿಯವರು ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ಕುಳಿತಿದ್ದಾರೆ” ಎಂದು ಲೇವಡಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶ್ರೀಮಂತ ಕಾರ್ಪೊರೇಟ್‌ಗಳ 12 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಿದ ಮೋದಿ ಅವರು ನಾವು ಐದು ಗ್ಯಾರಂಟಿಗಳನ್ನು ಜಾರಿ ಮಾಡಿದರೆ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎನ್ನುತ್ತಾರೆ. ಕಚ್ಚಾತೈಲದ ಬೆಲೆ ಕಡಿಮೆ ಇದ್ದಾಗಲೂ ಪೆಟ್ರೋಲ್-ಡೀಸೆಲ್ ಬೆಲೆ ಈ ಮಟ್ಟಕ್ಕೆ ಏರಿಸಿದರೆ, ಹಾಲು-ಮೊಸರು-ಮಜ್ಜಿಗೆ- ಮಂಡಕ್ಕಿ ಮೇಲೂ ಜಿಎಸ್ ಟಿ ಹಾಕಿದರೆ ಬಡವರು, ಮಧ್ಯಮವರ್ಗದವರ ಗತಿ ಏನು” ಎಂದು ಪ್ರಶ್ನಿಸಿದರು.

ಈ ಸುದ್ದಿ ಓದಿದ್ದೀರಾ? ಮಣಿಪುರ ಹಿಂಸಾಚಾರ | ಮೋದಿ ತುಟಿ ಬಿಚ್ಚಲು ಅತ್ಯಂತ ಹೇಯ ಕೃತ್ಯವೇ ನಡೆಯಬೇಕಾಯಿತು

“ಮುಖ್ಯಮಂತ್ರಿಗಳು ಉತ್ತರ ನೀಡುವಾಗ ಎದುರು ಸಾಲಿನಲ್ಲಿ ಜೆಡಿಎಸ್ ನ ಮರಿತಿಬ್ಬೇಗೌಡ ಮತ್ತು ಬಿಜೆಪಿಯ ಎಚ್ ವಿಶ್ವನಾಥ್ ಮಾತ್ರ ಕುಳಿತು ಉಳಿದವರೆಲ್ಲ ಬಹಿಷ್ಕರಿಸಿದ್ದರು. ಇದನ್ನು ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು, ಮರಿತಿಬ್ಬೇಗೌಡರು ಟೆಕ್ನಿಕಲಿ ಜೆಡಿಎಸ್ ನಲ್ಲಿದ್ದಾರೆ ಆದರೆ ವಾಸ್ತವವಾಗಿ ಅವರಿಗೆ ವಿರುದ್ಧವಿದ್ದಾರೆ. ಎಚ್.ವಿಶ್ವನಾಥ್ ಕೂಡ ಟೆಕ್ನಿಕಲಿ ಬಿಜೆಪಿಯಲ್ಲಿದ್ದಾರೆ. ಆದರೆ ವಾಸ್ತವವಾಗಿ ಬಿಜೆಪಿಗೆ ವಿರುದ್ಧವಿದ್ದಾರೆ” ಎಂದರು.

“1949 ನವೆಂಬರ್ 25 ರಂದು ಅಂಬೇಡ್ಕರ್ ಅವರು ತಮ್ಮ ಐತಿಹಾಸಿಕ ಭಾಷಣದಲ್ಲಿ, ‘ನಮ್ಮ ಸಂವಿಧಾನ ಜನವರಿ 26 ರಿಂದ ಜಾರಿಗೆ ಬರುತ್ತದೆ. ಆದರೆ ಸಾಮಾಜಿಕ-ಆರ್ಥಿಕ‌ ಅಸಮಾನತೆ ದೇಶದಲ್ಲಿದೆ. ಈ ಅಸಮಾನತೆಯನ್ನು ಅಳಿಸದೇ ಹೋದರೆ ಜನರೇ ಈ ಸ್ವಾತಂತ್ರ್ಯ ಸೌಧವನ್ನು ಸುಟ್ಟು ಭಸ್ಮ ಮಾಡುತ್ತಾರೆ’ ಎಂದಿದ್ದರು.‌ ಈ ಕಾರಣಕ್ಕೇ ಅಸಮಾನತೆ, ತಾರತಮ್ಯವನ್ನು ಅಳಿಸುವ ದೃಷ್ಟಿಯಿಂದ ಬಜೆಟ್ ನಲ್ಲಿ ಸರ್ವರಿಗೂ ಸಮಾನ ಅವಕಾಶ ಸಿಗುವ ಆಶಯದ ಕಾರ್ಯಕ್ರಮಗಳಿಗೆ ಮಹತ್ವ ನೀಡಿದ್ದೇನೆ. ಬಸವಣ್ಣನವರ ದಾಸೋಹ ಮತ್ತು ಕಾಯಕ ಸಂಸ್ಕೃತಿಯ ಆಶಯ ನಮ್ಮ ಆಯವ್ಯಯದಲ್ಲಿದೆ. ಬಿಜೆಪಿಯವರು ಬಸವ ವಿರೋಧಿಗಳು” ಎಂದು ವಾಗ್ದಾಳಿ ನಡೆಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...