ಮುಂಗಾರು ಚುರುಕು; ರಾಜ್ಯದ ಹಲವೆಡೆ ಮಳೆ ಆರಂಭ

Date:

ಬಿಪೊರ್‌ಜಾಯ್ ಚಂಡಮಾರುತದ ಪರಿಣಾಮದಿಂದ ಕೆಲವು ದಿನಗಳಿಂದ ದುರ್ಬಲಗೊಂಡಿದ್ದ ಮುಂಗಾರು ಇದೀಗ ಚುರುಕಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಮೋಡ ಕವಿದ ವಾತಾವರಣ ಹಾಗೂ ಮಳೆ ಆರಂಭವಾಗಿದೆ.

ರಾಜ್ಯದ ಬಹುತೇಕ ಕಡೆ ಮುಂಗಾರು ಚುರುಕಾಗಿದೆ. ಈ ಹಿನ್ನಲೆ ರಾಜ್ಯದ ಹಲವು ಭಾಗಗಳಲ್ಲಿ ಈ ವಾರ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶಗಳಲ್ಲಿ ಗುಡುಗು ಮಿಂಚಿನ ಸಹಿತ ಉತ್ತಮ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಮಂಗಳವಾರ ಮುಂಜಾನೆಯಿಂದಲೇ ಮಳೆ ಸುರಿಯುತ್ತಿದ್ದು, ಜನ ಹೊರಗಡೆ ವಾಕಿಂಗ್‌ ಇತ್ಯಾದಿಗಳಿಗೆ ಬರಲು ಹಿಂಜರಿದರು. ಬೆಂಗಳೂರಿನಲ್ಲಿ ಮಲೆನಾಡಿನಂತಾಗಿದ್ದು, ತುಂತುರು ಮಳೆಯ ನಡುವೆ ಜನ ಓಡಾಡಿದರು. ಇಷ್ಟು ದಿನ ಸೆಕೆ, ಬಿಸಿಲಿನಿಂದ ಕಂಗೆಟ್ಟಿದ್ದ ನಗರವಾಸಿಗಳು ತುಂತುರು ಮಳೆಯಿಂದ ಮೈ ಕುಲುಕಿಸುವ ಚಳಿಯನ್ನು ಆನಂದಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜೂನ್‌ ಮೂರನೇ ವಾರ ಮುಗಿಯುವ ಹಂತಕ್ಕೆ ಬಂದರೂ ಮಳೆ ಬಾರದ ಕಾರಣ ರೈತರು ಕಂಗಾಲಾಗಿದ್ದರು. ಕೃಷಿ ಭೂಮಿಯನ್ನು ಹದಮಾಡಿಕೊಂಡು ಬಿತ್ತನೆಗೆ ಕಾಯುತ್ತಿದ್ದ ರೈತರು ಕೊನೆಗೂ ಹರ್ಷ ವ್ಯಕ್ತಪಡಿಸುವಂತಾಗಿದೆ.

ಈ ಸುದ್ದಿ ಓದಿದ್ದೀರಾ? ಬರದ ಭೀತಿಯಲ್ಲಿದ್ದ ರೈತರಿಗೆ ಮಳೆ ಸೂಚನೆ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ತುಮಕೂರು, ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳ ಹಲವು ಭಾಗಗಳಲ್ಲಿ ಉತ್ತಮ ಮಳೆಯನ್ನು ನಿರೀಕ್ಷಿಸಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿಯೂ ಇನ್ನೆರಡು ದಿನ ಮಳೆ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...