ಮೂಡಿಗೆರೆ | ‘ಪುನರ್ವಸತಿ ಕಲ್ಪಿಸಲಾಗದಿದ್ದರೆ ದಯಾಮರಣ ಕೊಡಿ’ ಎಂದ ಮಂಡಗುಳಿಯ ನಿವಾಸಿಗಳು

Date:

ಮಲೆನಾಡು ಎಂದರೆ ಹಚ್ಚ ಹಸಿರಿನಿಂದ ಕೂಡಿರುವ ಕಾಡು, ಗುಡ್ಡ ಬೆಟ್ಟಗಳಿಂದ ಕಂಗೊಳಿಸುತ್ತಿವೆ. ಇಲ್ಲಿನ ಪ್ರಕೃತಿ ಸೌಂದರ್ಯ ಎಲ್ಲರನ್ನೂ ಆಕರ್ಷಿಸುತ್ತದೆ. ಆದರೆ ಇಲ್ಲಿನ ವಾಸ ಮಾಡುತ್ತಿರುವ ಕಾಡಂಚಿನ ಜನರ ಪರಿಸ್ಥಿತಿ ಮಾತ್ರ ಹೇಳತೀರದ್ದಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಸಾರಗೋಡು ಕುಂದೂರು ಗ್ರಾಮದ ಮಂಡಗುಳಿ ಹರದ ನಿವಾಸಿಗಳು ವಸತಿ ಹಾಗೂ ಮೂಲಭೂತ ಸೌಕರ್ಯಗಳಿಲ್ಲದೆ ಕಂಗಾಲಾಗಿದ್ದು, “ನಮಗೆ ಪುನರ್ವಸತಿ ಕಲ್ಪಿಸಲಾಗದಿದ್ದರೆ ದಯಾಮರಣ ಕೊಡಿ” ಎಂದು ಅಧಿಕಾರಿಗಳಲ್ಲಿ ಭಿನ್ನವಿಸಿಕೊಂಡಿದ್ದಾರೆ.

ಮಳೆಗಾಲ ಬಂದರೆ ಸಾಕು ಇಲ್ಲಿನ ನಿವಾಸಿಗಳಿಗೆ ಆತಂಕ ಶುರುವಾಗುತ್ತದೆ. ಮಳೆಯಿಂದ ತಾವು ವಾಸಿಸುವ ಮನೆಯ ಗೋಡೆಗಳ ಕುಸಿತದ ಭಯ, ರಸ್ತೆಗಳೆಲ್ಲಲ್ಲವೂ ಹೊಂಡ ಹಾಗೂ ಗುಂಡಿಯ ಜೊತೆಗೆ ಕೆಸರಿನಿಂದ ಕೂಡಿದೆ. ಈ ಪ್ರದೇಶದಲ್ಲಿ ಸುಮಾರು 16 ಕುಟುಂಬಗಳು ವಾಸಿಸುತ್ತಿದ್ದು ಅತಂತ್ರ ಪರಿಸ್ಥಿತಿಯಲ್ಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 

ಯಾವುದೇ ಮೂಲಭೂತ ಸೌಲಭ್ಯವಿಲ್ಲದೆ ಬದುಕುತ್ತಿದ್ದಾರೆ ಹಾಗೂ ಈ ಕುಟುಂಬಗಳಿಗೆ ಇದುವರೆಗೆ ಯಾವುದೇ ನಿರ್ದಿಷ್ಟ ಜಾಗವನ್ನು ಗುರುತಿಸಿ, ಶಾಶ್ವತವಾದ ಪುನರ್ವಸತಿಯನ್ನು ಸರ್ಕಾರ ಕಲ್ಪಿಸಿಕೊಟ್ಟಿಲ್ಲ. ಹಿರಿಯ ಅಧಿಕಾರಿಗಳಲ್ಲಿ ಈ ಬಗ್ಗೆ ನಿವಾಸಿಗಳು ಕೇಳಿದಾಗ, ‘ಈಗ ಆಗುತ್ತೆ…ನಾಳೆ ಆಗುತ್ತೆ’ ಎಂಬ ಉತ್ತರವಷ್ಟೇ ಸಿಗುತ್ತಿದೆ ಎಂದು ಗ್ರಾಮಸ್ಥರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಮಲೆನಾಡು 1

“ಒಂದೋ ನಮಗೆ ಪುನರ್ವಸತಿ ಕಲ್ಪಿಸಿಕೊಡಿ. ಅದು ಮಾಡಲಾಗದಿದ್ದರೆ ದಯಾಮರಣ ಕೊಡಿ” ಎಂದು ಅಧಿಕಾರಿಗಳಲ್ಲಿ ಭಿನ್ನವಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಂತ್ರಸ್ತರ ವಾಸ ಸ್ಥಳಗಳಿಗೆ ಮೂಡಿಗೆರೆ ವೃತ್ತ ನಿರೀಕ್ಷಕರಾದ ಸೋಮೇಗೌಡ, ಅಲ್ದೂರು ವಲಯ ಅರಣ್ಯಾಧಿಕಾರಿ ಹರೀಶ್.ಎಂ. ಆರ್ ಹಾಗೂ ಸಿಬ್ಬಂದಿಗಳು ಖುದ್ದಾಗಿ ಭೇಟಿ ನೀಡಿದ್ದಾರೆ.

ಅಲ್ಲಿನ ನಿವಾಸಿಗಳ ಜೊತೆ ಮಾತನಾಡಿರುವ ಅಧಿಕಾರಿಗಳು, “ತಮ್ಮ ಬೇಡಿಕೆಯು ನ್ಯಾಯ ಪರವಾಗಿದೆ. ಮೂಲಸೌಕರ್ಯ ಇಲ್ಲದಿರುವುದು ನಮ್ಮ ಗಮನಕ್ಕೆ ಬಂದಿದೆ. ಸಂಬಂಧಪಟ್ಟವರ ಗಮನಕ್ಕೆ ತಂದು ಸೂಕ್ತ ವ್ಯವಸ್ಥೆ ಕಲ್ಪಿಸುತ್ತೇವೆ” ಎಂದು  ಭರವಸೆ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಮೈಸೂರು | ಜನರ ಪಾಲಿಗೆ ನರಕವಾದ ಚೆಲುವಾಂಬ ಸರ್ಕಾರಿ ಆಸ್ಪತ್ರೆ; ಕಣ್ಣಾಡಿಸುವರೇ ಆರೋಗ್ಯ ಸಚಿವರು?

ಈ ಬಗ್ಗೆ ಈ ದಿನ.ಕಾಮ್ ಜೊತೆಗೆ ಮಾತನಾಡಿರುವ ಸ್ಥಳೀಯ ನಿವಾಸಿಗಳು, “ನಮಗೆ ಪುನರ್ವಸತಿ ಕಲ್ಪಿಸುವಂತೆ ಈ ಹಿಂದೆ ಕೋರಿದ್ದೆವು. ಸರಿಯಾದ ವ್ಯವಸ್ಥೆ ಕಲ್ಪಿಸದ್ದಕ್ಕೆ ಆಕ್ರೋಶಗೊಂಡು ದಯಾಮರಣ ಕೊಡಿ ಎಂದಿದ್ದೆವು. ಹೀಗಾಗಿ, ನಮ್ಮ ಪರಿಸ್ಥಿತಿಯನ್ನು ನೋಡಲೆಂದು ಕೆಲವು ಅಧಿಕಾರಿಗಳು ಬಂದಿದ್ದಾರೆ. ಶೀಘ್ರದಲ್ಲೇ ಶಾಶ್ವತ ಪರಿಹಾರ ಕಂಡುಕೊಂಡು, ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಕಾದು ನೋಡುತ್ತೇವೆ” ಎಂದು ತಿಳಿಸಿದ್ದಾರೆ.

 

WhatsApp Image 2025 11 17 at 3.46.17 PM
ಗಿರಿಜಾ ಎಸ್‌ ಜಿ
+ posts

ಪತ್ರಕರ್ತೆ, ಸಾಮಾಜಿಕ ಕಾರ್ಯಕರ್ತೆ, ಮಹಿಳಾ ಪರ ಹೋರಾಟಗಾರ್ತಿ.

ಪೋಸ್ಟ್ ಹಂಚಿಕೊಳ್ಳಿ:

ಗಿರಿಜಾ ಎಸ್‌ ಜಿ
ಗಿರಿಜಾ ಎಸ್‌ ಜಿ
ಪತ್ರಕರ್ತೆ, ಸಾಮಾಜಿಕ ಕಾರ್ಯಕರ್ತೆ, ಮಹಿಳಾ ಪರ ಹೋರಾಟಗಾರ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...