ವಿಜಯಪುರ ಜಿಲ್ಲೆಯಲ್ಲಿ ಒಂದೂವರೆ ಕೋಟಿಗೂ ಅಧಿಕ ಸಸಿಗಳನ್ನು ನೆಟ್ಟು ಹಸಿರೀಕರಣ ಮಾಡಲಾಗಿದೆ: ಎಂ ಬಿ ಪಾಟೀಲ

Date:

ಕರ್ನಾಟಕ ಏಕೀಕರಣಕ್ಕೆ ಕೊಡುಗೆ ನೀಡಿದ ಮಹನೀಯರನ್ನು ಸ್ಮರಿಸುವ ಸಮಯವಿದು. ಕನ್ನಡ ನಾಡು-ನುಡಿಯಂತೆ ಜಲ ಹಾಗೂ ವೃಕ್ಷ ಅಭಿಯಾನ ಮಾಡಿದ್ದೇವೆ. ವಿಜಯಪುರ ಜಿಲ್ಲೆಯಲ್ಲಿ ಒಂದೂವರೆ ಕೋಟಿಗೂ ಅಧಿಕ ಸಸಿಗಳನ್ನು ನೆಟ್ಟು ಹಸಿರೀಕರಣ ಮಾಡಲಾಗಿದೆ. ಇದೀಗ ಕ್ಷೀರ ಕ್ರಾಂತಿ ಮಾಡಲಿದ್ದೇವೆ ಎಂದು ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ಹೇಳಿದರು.

ವಿಜಯಪುರ ನಗರದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಿಸಿದ ಬಳಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಪ್ರತಿಯೊಬ್ಬ ರೈತರು ಆಕಳು, ಎಮ್ಮೆ ಸಾಕಾಣಿಕೆ ಮಾಡಿದರೆ ಆರ್ಥಿಕ ಸಹಾಯವಾಗಲಿದೆ. ಕೃಷಿ ಪೈಲೆಟ್ ಯೋಜನೆಯನ್ನು ಜಾರಿಗೊಳಿಸಲಿದ್ದೇವೆ. ಅಕ್ಷಯ ಕಲ್ಪ ಆರ್ಗ್ಯಾನಿಕ್ಸ್, ಜಿಲ್ಲಾಡಳಿತ, ಕೃಷಿ ಇಲಾಖೆ ಸೇರಿದಂತೆ ಇನ್ನೂ ಇತರ ಇಲಾಖೆಗಳ ಜೊತೆಗೂಡಿ ಜಾರಿಗೆ ತರಲಾಗುವುದು” ಎಂದು ತಿಳಿಸಿದರು.

“ಜಿಲ್ಲೆಯಲ್ಲಿ ಈಗಾಗಲೇ ಎರಡು ಕಂಪನಿಗಳು ಸಂದರ್ಶನ ನಡೆಸಿ ಯುವಕರಿಗೆ ಉದ್ಯೋಗ ನೀಡಿವೆ. ಟಯೋಟ ಕಿರ್ಲೋಸ್ಕರ್ ಕಂಪನಿಗೆ 450ಕ್ಕೂ ಅಧಿಕ ಹಾಗೂ ಸ್ನ್ಯಾಕ್ಸ್ ಕಾರ್ನ್ ಕಂಪನಿಯಲ್ಲಿ 65 ಯುವಕರಿಗೆ ಉದ್ಯೋಗ ಸಿಕ್ಕಿದೆ. ಇನ್ನು ಬೇರೆ ಬೇರೆ ಕಂಪೆನಿಗಳಿಗೆ 10,000 ಯುವಕರಿಗೆ ಕೆಲಸ ಕೊಡುವ ಗುರಿ ಹೊಂದಲಾಗಿದೆ. ಇದರೊಟ್ಟಿಗೆ ವಿಜಯಪುರ ಜಿಲ್ಲೆಯಲ್ಲಿ ವಿವಿಧ ಕೈಗಾರಿಕಾ ಹಾಗೂ ಕೃಷಿಗೆ ಸಂಬಂಧಿಸಿದ ಹಲವು ಕಂಪನಿಗಳು ಸಾವಿರಾರು ಕೋಟಿ ವಿನಿಯೋಗಿಸಲಿವೆ. ಅಲ್ಲದೆ, ಸರ್ಕಾರಿ ಮೆಡಿಕಲ್ ಕಾಲೇಜ್ ವಿಚಾರವಾಗಿ ಸಚಿವ ಶರಣಪ್ರಕಾಶ ಪಾಟೀಲರ ಜತೆಗೆ ಮಾತನಾಡಿದ್ದೇನೆ. ಮುಂದೆ ಒಂದಿಷ್ಟು ಹೋರಾಟಗಾರರನ್ನು ಬೆಂಗಳೂರಿಗೆ ಕರೆದೊಯ್ದು ಭೇಟಿ ಮಾಡಿಸುತ್ತೇನೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲೆಯಲ್ಲಿ ಪದೇ ಪದೆ ಉಂಟಾಗುತ್ತಿರುವ ಭೂಕಂಪನ ವಿಚಾರದ ಬಗ್ಗೆ ಮಾತನಾಡಿ, “ಭೂಮಿಯ ಕಂಪನ ಬಹಳ ಕಡಿಮೆ ಪ್ರಮಾಣದಲ್ಲಿ ಉಂಟಾಗುತ್ತಿದೆ. ಇದು ಭೂಮಿಯ ಅಂತರಾಳದಲ್ಲಿ ನಡೆಯುತ್ತಿರುವ ಸ್ಥಳೀಯ ಕಂಪನವಿದೆ. ಭೂಮಿಯಲ್ಲಿ ನೀರು, ಸುಣ್ಣದ ಕಲ್ಲು ಸೇರಿದಂತೆ ಹಲವು ಹೊಂದಾಣಿಕೆಗಳು ಆಗುತ್ತಿರುವುದರಿಂದ ಸಣ್ಣ ಕಂಪನ ಆಗುತ್ತಿರುತ್ತದೆ. ಇದಕ್ಕೆ ಯಾರೂ ಆತಂಕಪಡುವ ಅಗತ್ಯವಿಲ್ಲ” ಎಂದು ಹೇಳಿದರು.

“ನಗರದಲ್ಲಿ ಐವತ್ತಕ್ಕೂ ಅಧಿಕ ದೇವಸ್ಥಾನಗಳನ್ನು ಧಾರ್ಮಿಕ ದತ್ತಿ ಇಲಾಖೆಗೆ ತೆಗೆದುಕೊಳ್ಳುವ ವಿಚಾರ, 50 ದೇವಸ್ಥಾನ ಧಾರ್ಮಿಕ ದತ್ತಿ ಇಲಾಖೆಗೆ ಸರ್ಕಾರ ತೆಗೆದುಕೊಳ್ಳುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳೇ ಸ್ಪಷ್ಟನೆ ನೀಡಿದ್ದು, ಯಾವುದನ್ನೂ ತೆಗೆದುಕೊಳ್ಳುವುದಿಲ್ಲವೆಂದು ಸ್ಪಷ್ಟನೆ ನೀಡಿದ್ದಾರೆ” ಎಂದರು.

“ಕನ್ನಡ ನಾಡಿನಲ್ಲಿ ಎಂಇಎಸ್ ಕರಾಳ ದಿನಾಚರಣೆಗೆ ಅವಕಾಶ ಇಲ್ಲ. ನಮ್ಮ ಸರ್ಕಾರ ಇದಕ್ಕೆಲ್ಲ ಅವಕಾಶ ಮಾಡಿಕೊಡುವುದಿಲ್ಲ. ಮಾಡಿದರೆ ಕಾನೂನು ಪ್ರಕಾರ ನಿರ್ದಾಕ್ಷಿಣ್ಯ ಕ್ರಮವಾಗಲಿದೆ. ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟ, ಕರಾಳ ದಿನಾಚಾರಣೆ ಮಾಡಿದರೆ ಕ್ರಮ ಕೈಗೊಳ್ಳಲಾಗುವುದು. ಡಿಸಿಗೆ ಅಧಿಕಾರ ಇದೆ. ಸರ್ಕಾರವು ಮಧ್ಯಪ್ರವೇಶ ಮಾಡುತ್ತದೆ. ಎಂಇಎಸ್‌ಕೆ ಮಾಡುವುದಕ್ಕೆ ಕೆಲಸವಿಲ್ಲ. ಗಡಿ ವಿಚಾರವಾಗಿ ಮಹಾಜನ ವರದಿಯೇ ಅಂತಿಮ. ಎಂಇಎಸ್‌ನವರದ್ದು ಏನೂ ನಡೆಯುವುದಿಲ್ಲ. ವೋಟಿನ ಆಸೆಗಾಗಿ ಹಾಗೆ ಮಾಡುತ್ತಾರೆ” ಎಂದು ಎಂಇಎಸ್ ವಿರುದ್ಧ ಆಕ್ರೋಶ ಹೊರಹಾಕಿದರು.‌

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಬಿಡಿಸಿಸಿ ಬ್ಯಾಂಕ್‌ನಲ್ಲಿ ಅವ್ಯವಹಾರ ಆರೋಪ; ಪಿಎಸಿ ಸದಸ್ಯರ ಆಕ್ರೋಶ

ಎಂ ಬಿ ಪಾಟೀಲ್ ಟಾರ್ಗೆಟ್ ವಿಚಾರಕ್ಕೆ ಪ್ರತಿಕ್ರಿಯಿಸಿ, “2018ರಲ್ಲಿ ಇದಕ್ಕಿಂತ ದೊಡ್ಡ ಟಾರ್ಗೆಟ್ ಮಾಡಿದ್ರು, ಮೋದಿ, ಯೋಗಿ ಆದಿತ್ಯನಾಥ, ಅಮಿತ್ ಷಾ ಬಂದು ನನ್ನ ವಿರುದ್ಧ ಪ್ರಚಾರ ಮಾಡಿದ್ದರು. ಆಗಲೂ ನಾನು 30,000 ಅಂತರದಲ್ಲಿ ಗೆದ್ದು ಬಂದಿದ್ದೆ. ನನ್ನ ಜನ ನನ್ನ ಜೊತೆಗಿದ್ದಾರೆ. ನನ್ನ ಜನರ ಮೇಲೆ ನನಗೆ ಸಂಪೂರ್ಣ ವಿಶ್ವಾಸವಿದೆ. ಕ್ಷೇತ್ರದ ಜನರಿಗೆ ಎಲ್ಲವನ್ನೂ ಕೊಟ್ಟಿದ್ದೀನಿ. ಅನುಭವ ಮಂಟಪದ ಶಕ್ತಿ ನಮ್ಮ ಜತೆಗಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...