ತುಮಕೂರು | ಸಿಎಂ ಸಿದ್ದರಾಮಯ್ಯ ಪರ ಬೀದಿಗಿಳಿದ ಕುರುಬ ಸಮುದಾಯ: ರಾಜ್ಯಪಾಲರ ನಡೆಗೆ ಆಕ್ರೋಶ

Date:

ಶೋಷಿತ ಸಮುದಾಯಗಳ ನಾಯಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಇಲ್ಲಸಲ್ಲದ ಆರೋಪ ಮಾಡಿ, ತೇಜೋವಧೆ ಮಾಡಲು ಬಿಜೆಪಿ-ಜೆಡಿಎಸ್ ಮೈತ್ರಿಗಳು ರಾಜ್ಯಪಾಲರ ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳುತ್ತಿವೆ ಎಂದು ಆರೋಪಿಸಿ ಕುರುಬ ಸಮುದಾಯದ ವಿವಿಧ ಸಂಘಟನೆಗಳ ಮುಖಂಡರು ಕರ್ನಾಟಕ ಪ್ರದೇಶ ಕುರುಬರ ಸಂಘದ ನೇತೃತ್ವದಲ್ಲಿ ತುಮಕೂರು ನಗರದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಕರ್ನಾಟಕ ಪ್ರದೇಶ ಕುರುಬರ ಸಂಘ, ಬೆಂಗಳೂರು, ಜಿಲ್ಲಾ ಕುರುಬರ ಸಂಘ, ತುಮಕೂರು, ಕಾಳಿದಾಸ ವಿದ್ಯಾವರ್ಧಕ ಸಂಘ, ತುಮಕೂರು, ಕನಕ ಯುವ ಸೇನೆ ತುಮಕೂರು ಹಾಗೂ ತುಮಕೂರು ಜಿಲ್ಲೆಯ ಕುರುಬ ಸಂಘಟನೆಗಳ ಒಕ್ಕೂಟದ ವತಿಯಿಂದ ನಗರದ ಟೌನ್‌ಹಾಲ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ರಾಜ್ಯಪಾಲರು ಮುಖ್ಯಮಂತ್ರಿಗಳಿಗೆ ನೀಡಿರುವ ಶೋಕಾಸ್ ನೋಟಿಸ್ ಹಿಂಪಡೆಯಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

1001202385

ಕನಕ ಯುವಸೇನೆಯ ಅಧ್ಯಕ್ಷ ಕೆಂಪರಾಜು ಮಾತನಾಡಿ, “ಅಧಿಕಾರದಿಂದ ವಂಚಿತರಾಗಿರುವ, ಜನರಿಂದ ತಿರಸ್ಕೃತರಾಗಿರುವ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು, ರಾಜ್ಯದಲ್ಲಿ ಅಧಿಕಾರದಲ್ಲಿರುವ ಜನಪರ ರಾಜ್ಯ ಸರಕಾರವನ್ನು ಅಸ್ಥಿರಗೊಳಿಸಲು ರಾಜ್ಯಪಾಲರ ಅಧಿಕಾರ ದುಬರ್ಳಕೆ ಮಾಡಿಕೊಳ್ಳುತ್ತಿವೆ. ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಸುಸೂತ್ರ ಆಡಳಿತ ನೀಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಏಳಿಗೆಯನ್ನು ಸಹಿಸಲಾರದೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ದೊಡ್ಡ ಮಟ್ಟದ ಷಡ್ಯಂತ್ರ ರೂಪಿಸಿದ್ದಾರೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಒಂದೇ ಒಂದು ಕಪ್ಪು ಚುಕ್ಕೆ ಇಲ್ಲದ ನಾಯಕ ಸಿದ್ದರಾಮಯ್ಯರವರ ವರ್ಚಸ್ಸಿಗೆ ಮಸಿ ಬಳಿದು ಅವರನ್ನು ರಾಜಕೀಯವಾಗಿ ಮುಗಿಸಿಯೇ ಬಿಡುವ ಹುನ್ನಾರ ಮಾಡುತ್ತಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ರಾಜ್ಯ ನಾಯಕರ ಕುತಂತ್ರಕ್ಕೆ ಬಿಜೆಪಿಯ ರಾಷ್ಟ್ರೀಯ ನಾಯಕರೂ ಕುಮ್ಮಕ್ಕು ನೀಡುತ್ತಿದ್ದಾರೆ. ರಾಜ್ಯಪಾಲರ ಮುಖಾಂತರ ರಾಜ್ಯದ ಕಾಂಗ್ರೆಸ್ ಸರಕಾರವನ್ನು ಅಸ್ಥಿರಗೊಳಿಸಲು ಕೇಂದ್ರ ಸರಕಾರ ಪಿತೂರಿ ನಡೆಸುತ್ತಿದೆ. ರಾಜ್ಯಪಾಲರು ಶೋಕಾಸ್ ನೋಟಿಸ್ ಹಿಂಪಡೆಯದಿದ್ದರೆ ಬೆಂಗಳೂರಿನಲ್ಲಿ ರಾಜಭವನಕ್ಕೆ ಮುತ್ತಿಗೆ ಹಾಕುತ್ತೇವೆ” ಎಂದು ಎಚ್ಚರಿಕೆ ನೀಡಿದರು.

1001202375

“ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ರಾಜಕೀಯವಾಗಿ ಮುಗಿಸಲು ಸಂಚು ರೂಪಿಸಿರುವುದರ ಹಿಂದೆ ಹಲವು ಕಾರಣಗಳಿವೆ. ಸಿದ್ದರಾಮಯ್ಯರವರನ್ನು ಅಧಿಕಾರದಿಂದ ಕೆಳಗಿಳಿಸಿ ಹಿಂದುಳಿದ ವರ್ಗಗಳ ನಾಯಕತ್ವವನ್ನು ಕೊನೆಗಾಣಿಸಬಹುದು. ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸಿಬಿಟ್ಟರೆ ಶಾಶ್ವತವಾಗಿ ಹಿಂದುಳಿದ ವರ್ಗದವರನ್ನು ಅಧಿಕಾರದಿಂದ ದೂರ ಇಡಬಹುದು ಎಂಬುದು ಇವರ ಉದ್ದೇಶವಾಗಿದೆ” ಎಂದು ಆರೋಪಿಸಿದರು.

“ಮುಡಾ ಮತ್ತು ವಾಲ್ಮೀಕಿ ನಿಗಮದ ಅವ್ಯವಹಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರನ್ನು ತಳಕು ಹಾಕಲಾಗುತ್ತಿದೆ. ಒಂದು ವೇಳೆ ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ದ ನಿಂತಲ್ಲಿ, ರಾಜ್ಯದ ಎಲ್ಲ ಕುರುಬರು ಸೇರಿ ಗೋಬ್ಯಾಕ್ ಗೆಹ್ಲೋಟ್ ಚಳವಳಿ ಹಮ್ಮಿಕೊಳ್ಳುತ್ತೇವೆ” ಎಂದು ಕೆಂಪರಾಜು ತಿಳಿಸಿದರು.

1001202377

ಕಾಳಿದಾಸ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಮೈಲಪ್ಪ ಮಾತನಾಡಿ, ತಮ್ಮ ಮೇಲಿನ ಆರೋಪಕ್ಕೆ ಸ್ವತಃ ತನಿಖಾ ಆಯೋಗ ರಚಿಸಿರುವ ದೇಶದ ಏಕೈಕ ನಾಯಕ ಮುಖ್ಯಮಂತ್ರಿ ಸಿದ್ದರಾಮಯ್ಯ. ನ್ಯಾಯಾಂಗ ತನಿಖೆಯಿಂದ ಎಲ್ಲಿ ನಮ್ಮ ಹುಳುಕುಗಳು ಹೊರಬಂದು ಜೈಲು ಸೇರಬೇಕಾಗುತ್ತದೆಯೋ ಎಂದು ಹೆದರಿರುವ ವಿರೋಧ ಪಕ್ಷಗಳು ಪಾದಯಾತ್ರೆ ನಡೆಸುತ್ತಿವೆ. ಸಮಾಜವಾದದ ಹಿನ್ನೆಲೆಯಿಂದ ಬಂದಿರುವ ಸಿದ್ದರಾಮಯ್ಯ ಸದಾ ಬಡವರು, ಮಹಿಳೆಯರು, ರೈತರು ಮತ್ತು ಕಾರ್ಮಿಕರ ಪರ ಇದ್ದಾರೆ. ಅವರು ಜಾರಿಗೆ ತಂದ ಅನ್ನಭಾಗ್ಯ, ಕ್ಷೀರಭಾಗ್ಯಗಳಲ್ಲದೆ, ಐದು ಗ್ಯಾರಂಟಿಗಳು ಈ ನಾಡಿನ ಬಡವರ ಪರವಾಗಿವೆ. ಸಿದ್ದರಾಮಯ್ಯ ಪರ ಇಡೀ ಅಹಿಂದ ವರ್ಗ ಬಂಡೆಯಂತೆ ನಿಂತಿದೆ.ಸಿದ್ದರಾಮಯ್ಯರವರನ್ನು ದುರ್ಬಲಗೊಳಿಸುವ ಕುತಂತ್ರವನ್ನು ಕೂಡಲೇ ನಿಲ್ಲಿಸಬೇಕು. ಇಲ್ಲದಿದ್ದಲ್ಲಿ ಉಗ್ರ ಹೋರಾಟ ನಡೆಸುತ್ತೇವೆ” ಎಂದು ತಿಳಿಸಿದರು.

ತುಮಕೂರು ಜಿಲ್ಲಾ ಕುರುಬರ ಸಂಘದ ಜಿಲ್ಲಾಧ್ಯಕ್ಷ ಟಿ.ಆರ್.ಸುರೇಶ್ ಮಾತನಾಡಿ, ಶೋಷಿತ ಸಮುದಾಯಗಳ ಜನನಾಯಕ ಸಿದ್ದರಾಮಯ್ಯ ತೇಜೋವಧೆ ಕೇಂದ್ರ ಸರಕಾರ ನಡೆಸುತ್ತಿರುವ ಪ್ರಯತ್ನ ಖಂಡನೀಯ. ರಾಜ್ಯಪಾಲರು ತಮ್ಮ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಒಂದು ಸ್ಥಿರ ಸರಕಾರವನ್ನು ಅಸ್ಥಿರಗೊಳಿಸಲು ಹೊರಟಿದ್ದಾರೆ. ಇದನ್ನು ಇಡೀ ಅಹಿಂದ ವರ್ಗ ಖಂಡಿಸುತ್ತದೆ. ಜನಪರ ಆಡಳಿತ ನೀಡುವ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗೆ ಇಳಿಸಲು ಮುಂದಾದರೆ ಇಡೀ ರಾಜ್ಯದ ಹಳ್ಳಿ ಹಳ್ಳಿಗಳಲ್ಲಿಯೂ ಅಹಿಂದ ವರ್ಗ ಉಗ್ರ ಹೋರಾಟ ನಡೆಸಿ, ರಾಜ್ಯಪಾಲರಿಗೆ ಘೇರಾವ್ ಹಾಕುತ್ತೇವೆ” ಎಂದರು.

1001202376

ಪ್ರತಿಭಟನೆಯಲ್ಲಿ ಕನಕ ಮಹಿಳಾ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸುನೀತ ನಟರಾಜ್, ಕರ್ನಾಟಕ ಪ್ರದೇಶ ಕುರುಬರ ಸಂಘದ ಅಂತರಿಕ ಲೆಕ್ಕ ಪರಿಶೋಧಕ ಟಿ.ಇ.ರಘುರಾಮ್, ಸೌಭಾಗ್ಯ, ಗುರು ಪ್ರಸಾದ್, ಅನಿಲ್, ಮಹೇಶ್, ಮಹಾಲಿಂಗಯ್ಯ, ಪುಟ್ಟಣ್ಣ, ರಘುರಾಮ್, ಜ್ವಾಲಮಾಲ ರಾಜಣ್ಣ, ಸಂಪತ್ ಕುಮಾರಿ, ಮಂಜುಳಾ, ಶೇಷಗಿರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...