ಮುದ್ದೇಬಿಹಾಳ | ಸ್ಮಶಾನ ಜಾಗದ ಅತಿಕ್ರಮಣ ಕಟ್ಟಡಗಳ ತೆರವಿಗೆ ವಿಳಂಬ: ತಪ್ಪಿತಸ್ಥರ ವಿರುದ್ಧ ಶಿವಾನಂದ ವಾಲಿ ದೂರು

Date:

ಮುದ್ದೇಬಿಹಾಳ ಪಟ್ಟಣದ ಸ್ಮಶಾನ ಜಾಗವನ್ನು ಮರು ಸರ್ವೆ ಮಾಡಿ ಸ್ಮಶಾನ ಜಾಗದಲ್ಲಿನ ಅತಿಕ್ರಮಣ ಕಟ್ಟಡಗಳನ್ನು ತೆರವುಮಾಡುವಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಹಾಗೂ ತಹಶೀಲ್ದಾರ್ ಕಾರು ಚಾಲಕನ ವಿರುದ್ಧ ಯುವಜನ ಸೇನಾ ರಾಜ್ಯಾಧ್ಯಕ್ಷ ಶಿವಾನಂದ ವಾಲಿ ಲೋಕಾಯುಕ್ತರಿಗೆ ದೂರು ಸಲ್ಲಿಸಿದ್ದಾರೆ.

“ಪಟ್ಟಣದ ಸ್ಮಶಾನಘಟ್ಟ ಜಾಗದಲ್ಲಿ ಅತಿಕ್ರಮಣ ಕಟ್ಟಡ ಹಾಗೂ ಸರ್ಕಾರಿ ಜಾಗ 9 ರಿಜಿಸ್ಟರ್‌ನಲ್ಲಿ ದಾಖಲು ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸಿ ತೆರವು ಕಾರ್ಯಾಚರಣೆ ಮಾಡುವಂತೆ ಸಂಘಟನೆಯಿಂದ ನಾಲತವಾಡ ಪಟ್ಟಣ ಪಂಚಾಯಿತಿಗೆ ಅರ್ಜಿ ಸಲ್ಲಿಸಿದ್ದರೂ ಕೂಡ ಯಾವುದೇ ಕ್ರಮ ಜರುಗಿಸಿಲ್ಲ” ಎಂದು ದೂರಿದರು.

“ನಾಲತವಾಡ 615 ಸರ್ವೆ ನಂಬರಿನ ಸ್ಮಶಾನ ಜಾಗದಲ್ಲಿ ಅನೇಕರು ಅಕ್ರಮವಾಗಿ ಕಟ್ಟಡಗಳನ್ನು ಕಟ್ಟಿಸಿರುತ್ತಾರೆ. ಹಾಗೂ ಕೆಲವು ಜಾಗಗಳನ್ನು ಸಂಘ ಸಂಸ್ಥೆಗಳಿಗೆ ನೀಡಿದ್ದರು. ಇನ್ನು ಕೆಲವರಲ್ಲಿ ಸರ್ಕಾರದ ಕಟ್ಟಡಗಳಿವೆ. ಕೆಲವು ಜನ ಸ್ಮಶಾನ ಜಾಗದಲ್ಲಿ ಕಟ್ಟಡ ನಿರ್ಮಾಣ ಮಾಡಿ ಅದನ್ನು ಸರ್ಕಾರಿ ಕಚೇರಿಗೆ ಬಾಡಿಗೆ ನೀಡಿದ್ದಾರೆ. ಸ್ಮಶಾನ ಜಾಗವನ್ನು ಯಾವುದೇ ಕಾರಣಕ್ಕೂ ಮಾರಾಟ ಮಾಡಬಾರದೆಂದು ಕಂದಾಯ ಇಲಾಖೆಯ ನಿಯಮವಿದ್ದರೂ ಸರ್ಕಾರಿ ಜಾಗವನ್ನು ಹಿಂದಿನ ಗ್ರಾಮ ಪಂಚಾಯಿತಿಯಲ್ಲಿ ಹಣದ ಆಸೆಗೆ ಸರ್ವೆ ನಂಬರ್ 9 ರಿಜಿಸ್ಟರ್‌ನಲ್ಲಿ ಕಾನೂನುಬಾಹಿರ ನೋಂದಣಿ ಮಾಡಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿದ್ದೀರಾ? ಸಿಐಟಿಯು 16ನೇ ರಾಜ್ಯ ಸಮ್ಮೇಳನ ಯಶಸ್ವಿ: ಶ್ರಮ ವಿರೋಧಿ ನೀತಿಗಳ ವಿರುದ್ಧ ಸ್ಫೂರ್ತಿದಾಯಕ ಹೋರಾಟ

“ಈ ವಿಷಯದ ಕುರಿತು ಜಿಲ್ಲಾಧಿಕಾರಿಗಳು, ತಹಶೀಲ್ದಾರರು, ಮುಖ್ಯ ಅಧಿಕಾರಿಗಳಿಗೆ ಮನವಿ ಕೊಟ್ಟಿದ್ದರೂ ಕೂಡ ಪ್ರಯೋಜನವಾಗಿಲ್ಲ. ಕೂಡಲೇ 615 ಸರ್ವೇ ನಂಬರ್ ಸ್ಮಶಾನ ಜಾಗವನ್ನು ಕಬಳಿಸಿರುವವರ ಮೇಲೆ ಕಾನೂನು ಕ್ರಮ ಜರುಗಿಸಿ ಆಕ್ರಮಿತ ಕಟ್ಟಡಗಳನ್ನು ತೆರವಿಗೊಳಿಸಬೇಕು. ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು” ಎಂದು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...