ಮೂಡಿಗೆರೆ l ಆಕಸ್ಮಿಕ ಬೆಂಕಿಗೆ ಗುಡಿಸಲು, ಪಠ್ಯ ಪುಸ್ತಕ ಭಸ್ಮ; ಕುಟುಂಬಸ್ಥರ ಬದುಕು ಅತಂತ್ರ

Date:

ಗುಡಿಸಲು ಕಟ್ಟಿಕೊಂಡು ಬಡತನದಲ್ಲಿ ಜೀವನ ಸಾಗಿಸುತ್ತಿದ್ದ ಕುಟುಂಬಕ್ಕೆ ಆಸರೆಯಾಗಿದ್ದ ಗುಡಿಸಲಿಗೇ ಆಕಸ್ಮಿಕ ಬೆಂಕಿ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ. ಘಟನೆಯಲ್ಲಿ ಮಕ್ಕಳ ಪಠ್ಯ ಪುಸ್ತಕಗಳು ಕೂಡ ಸುಟ್ಟು ಭಸ್ಮವಾಗಿದೆ.

ಸುಮಾರು ವರ್ಷದಿಂದ ಮೂಡಿಗೆರೆ ತಾಲೂಕಿನ ಊರುಬಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಳೆಗದ್ದೆ ಹೊಸಪುರ ಗ್ರಾಮದಲ್ಲಿ ಪರಿಶಿಷ್ಟ ಪಂಗಡ ಸಮುದಾಯದಕ್ಕೆ ಸೇರಿದ ಜ್ಯೋತಿ ಮತ್ತು ಚಂದ್ರು ದಂಪತಿ ತಡಿಕೆಯಿಂದಲೇ ಮನೆ ನಿರ್ಮಿಸಿಕೊಂಡಿದ್ದು, ತಮ್ಮ ಇಬ್ಬರು ಮಕ್ಕಳೊಂದಿಗೆ ಆ ಗುಡಿಸಲಿನಲ್ಲಿಯೇ ಜೀವನ ಸಾಗಿಸುತ್ತಿದ್ದರು. ಇದೀಗ ಗುಡಿಸಲಿಗೆ ಬೆಂಕಿ ಬಿದ್ದ ಪರಿಣಾಮ ಕುಟುಂಬಸ್ಥರ ಬದುಕು ಅತಂತ್ರವಾಗಿದೆ.

Screenshot 2024 11 27 00 00 05 44 7352322957d4404136654ef4adb64504

ಪರಿಶಿಷ್ಟ ಪಂಗಡದ ಹಸಲರು ಜನಾಂಗದ ಚಂದ್ರು ದಂಪತಿ ಮನೆಯಿಲ್ಲದೆ ಬೇಲಿಯ ಗುಡಿಸಲು ಕಟ್ಟಿಕೊಂಡು ಬಡತನದಲ್ಲಿ ಜೀವನ ಸಾಗಿಸುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಂದ್ರು ದಂಪತಿ ಕಷ್ಟಪಟ್ಟು ಕೂಲಿ ಕೆಲಸ ಮಾಡಿ ಗುಡಿಸಲು ನಿರ್ಮಿಸಿಕೊಂಡಿದ್ದರು. ಹಾಗೆಯೇ ಇಬ್ಬರ ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸುತ್ತ ನೆಮ್ಮದಿಯಿಂದ ಜೀವನ ಸಾಗಿಸುತ್ತಿದ್ದರು. ಈ ಕುಟುಂಬದ ದಂಪತಿ ಎಂದಿನಂತೆ ತೋಟಕ್ಕೆ ಕೂಲಿ ಕೆಲಸಕ್ಕೆ ಹೋಗಿದ್ದರು. ಇಬ್ಬರು ಮಕ್ಕಳು ಶಾಲೆಗೆ ತೆರಳಿದ್ದರು. ಇದೇ ತಿಂಗಳು 20ರಂದು ಕೆಲಸಕ್ಕೆ ಹೋಗಿರುವ ಸಮಯದಲ್ಲಿ ಗುಡಿಸಲಿಗೆ ಆಕಸ್ಮಿಕ ಬೆಂಕಿ ತಗುಲಿದೆ. 

Screenshot 2024 11 26 23 54 03 54 40deb401b9ffe8e1df2f1cc5ba480b12

ಸಂತ್ರಸ್ತ ದಂಪತಿ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಗ್ರಾಮದ ಸುತ್ತಮುತ್ತಲಿನ ಜನರು ಗಮನಿಸಿ ಕಿರುಚಾಡಿ ಸ್ವಲ್ಪ ಮಂದಿ ಬಂದು ಬೆಂಕಿಯನ್ನು ನಂದಿಸಿದ್ದಾರೆ. ತೋಟಕ್ಕೆ ಹೋಗಿದ್ದ ಕುಟುಂಬಸ್ಥರು ಸ್ಥಳಕ್ಕೆ ಬಂದು ನೋಡಿದಾಗ ಬೆಂಕಿಯಿಂದ ಗುಡಿಸಲು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಮಕ್ಕಳು ಓದುತಿದ್ದ ಶಾಲೆಯ ಪಠ್ಯಪುಸ್ತಕಗಳು ಬೆಂಕಿಗೆ ಆಹುತಿಯಾಗಿವೆ” ಎಂದು ಅವಲತ್ತುಕೊಂಡಿದ್ದಾರೆ.

ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದರಿಂದ ಬೆಂಕಿಯಿಂದ ಮನೆಯ ತಡಿಕೆ, ಪಾತ್ರೆ ಪಗಡೆ, ಬಟ್ಟೆ ಬರೆ, ದಾಖಲೆಗಳೆಲ್ಲಾ ಸುಟ್ಟುಹೋಗಿವೆ. ಇದರಿಂದ ಬಡ ಕುಟುಂಬದ ದಂಪತಿ ಮತ್ತು ಶಾಲೆಗೆ ಹೋಗುತ್ತಿರುವ ಅವರ ಮಕ್ಕಳ ಬದುಕು ಈಗ ಅತಂತ್ರವಾಗಿದೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ದಲಿತರ ಗುಡಿಸಲನ್ನು ನೆಲಸಮ ಮಾಡಿದ ತಾಲೂಕು ಅಧಿಕಾರಿಗಳು

“ಸಂಬಂಧಪಟ್ಟ ಅಧಿಕಾರಿಗಳು ಸಂತ್ರಸ್ತ ದಂಪತಿಯ ಸಮಸ್ಯೆಯನ್ನು ಆಲಿಸಿ, ಆದಷ್ಟು ಬೇಗ ಕುಟುಂಬದವರಿಗೆ ಪರಿಹಾರ ದೊರಕಿಸಬೇಕು” ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...