ಮುಳಬಾಗಿಲು | ವಿದ್ಯಾರ್ಥಿಗೆ ಬೆಲ್ಟ್‌ನಿಂದ ಹಿಗ್ಗಾಮುಗ್ಗಾ ಥಳಿಸಿದ ವಾರ್ಡನ್‌: ಯಾರಿಗೂ ಹೇಳದಂತೆ ಬೆದರಿಕೆ

Date:

ಮುಳಬಾಗಿಲು ತಾಲೂಕಿನ ಬಾಳಸಂದ್ರ ಮೊರಾರ್ಜಿ ದೇಸಾಯಿ ವಸತಿ ನಿಲಯದ ವಿದ್ಯಾರ್ಥಿಗೆ ವಾರ್ಡನ್ ತಮ್ಮ ಸೊಂಟದ ಬೆಲ್ಟ್‌ನಿಂದ ಹಿಗ್ಗಾಮುಗ್ಗಾ ಥಳಿಸಿದ್ದಾರೆಂದು ವಿದ್ಯಾರ್ಥಿ ತಾಯಿ ಆರೋಪ ಮಾಡಿರುವ ಹಿನ್ನೆಲೆಯಲ್ಲಿ ವಾರ್ಡನ್ ತನ್ನ ತಪ್ಪನ್ನು ಒಪ್ಪಿಕೊಂಡಿದ್ದು, ತಮ್ಮ ಕೃತ್ಯವನ್ನು ಸಮರ್ಥಿಸಿಕೊಂಡಿದ್ದಾರೆ.

ಮೂರ್ನಾಲ್ಕು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ಸೋಮವಾರ ಪೋಷಕರ ಸಭೆ ವೇಳೆ ಬೆಳಕಿಗೆ ಬಂದಿದೆ. ವಿಷಯ ತಿಳಿದು ನೂರಾರು ಮಂದಿ ವಸತಿಶಾಲೆ ಬಳಿ ಜಮಾಯಿಸಿದ್ದರು. ಸ್ಥಳಕ್ಕೆ ಬಂದ ನಂಗಲಿ ಪೊಲೀಸರು ಜನರನ್ನು ಚದುರಿಸಿದ್ದು, ಸಮಾಜ ಕಲ್ಯಾಣ ಇಲಾಖೆ ಜಿಲ್ಲಾ ನಿರ್ದೇಶಕ ಶ್ರೀನಿವಾಸ್ ಭೇಟಿ ನೀಡಿ ಮಾಹಿತಿ ಪಡೆದರು.

6ನೇ ತರಗತಿ ವಿದ್ಯಾರ್ಥಿ ಎಸ್ ಅನಂತಪುರ ಗ್ರಾಮದ ಅಂಜನ್ ಕುಮಾರ್ ಮೇಲೆ ವಾರ್ಡನ್ ಮಹೇಶ್ ಹಲ್ಲೆ ನಡೆಸಿದ್ದಾರೆಂದು ವಿದ್ಯಾರ್ಥಿ ತಾಯಿ ಅಶ್ವಿನಿ ಆರೋಪ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೂಲತಃ ಕೋಲಾರ ತಾಲೂಕಿನ ಸೂಲೂರು ಗ್ರಾಮದ ಈ ವಿದ್ಯಾರ್ಥಿಯ ತಂದೆ ಇತ್ತೀಚೆಗೆ ಮೃತಪಟ್ಟಿದ್ದರು. ನಂತರ ಆತ ತಾಯಿಯ ತವರೂರು ಎಸ್ ಅನಂತಪುರಕ್ಕೆ ತೆರಳಿದ್ದ. ನಂತರ ಆತನನ್ನು ಮೊರಾರ್ಜಿ ಶಾಲೆಗೆ ಸೇರಿಸಲಾಗಿತ್ತು.

“ವಸತಿ ನಿಲಯದಲ್ಲಿ ದೆವ್ವ ಇದೆ ಎಂದು ಸಹಪಾಠಿಗಳನ್ನು ಅಂಜನ್ ಹೆದರಿಸುತ್ತಿದ್ದ. ಹಾಸ್ಟೆಲ್ ವಿದ್ಯಾರ್ಥಿಗಳು ಈ ವಿಷಯವನ್ನು ತನ್ನ ಗಮನಕ್ಕೆ ತಂದಿದ್ದರು” ಎಂದು ವಾರ್ಡನ್ ತಮ್ಮ ಕೃತ್ಯವನ್ನು ಸಮರ್ಥಿಸಿಕೊಂಡಿದ್ದಾರೆ.

“ಮಕ್ಕಳು ತುಂಟಾಟ ಮಾಡುವುದು ಸಹಜ. ಬುದ್ದಿವಾದ ಹೇಳಬೇಕಾದ ವಾರ್ಡನ್ ತಮ್ಮ ಸೊಂಟದ ಬೆಲ್ಟ್ ತೆಗೆದು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಮರದ ದೊಣ್ಣೆಯಿಂದ ಹಲ್ಲೆ ನಡೆಸಿದ್ದರು. ಹಲ್ಲೆಯಿಂದ ಜರ್ಜರಿತಗೊಂಡ ಮಗ ಸ್ಥಳದಲ್ಲೇ ಕುಸಿದು ಬಿದ್ದ ನಂತರವೂ ವಾರ್ಡನ್ ಒದ್ದಿದ್ದಾರೆ” ಎಂದು ವಿದ್ಯಾರ್ಥಿ ತಾಯಿ ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಯಾದಗಿರಿ | 1980ರ ರೈತ ಬಂಡಾಯ ಸ್ಮರಣಾರ್ಥ ಸುರಪುರದಲ್ಲಿ ಹುತಾತ್ಮ ದಿನಾಚರಣೆ

“ಅಂಜನ್ ಕುಮಾರ್ ಮೇಲೆ ತಾನು ನಡೆಸಿದ ಹಲ್ಲೆ ವಿಷಯವನ್ನು ಯಾರಿಗೂ ತಿಳಿಸಬಾರದೆಂದು ವಾರ್ಡನ್ ಇತರ ವಿದ್ಯಾರ್ಥಿಗಳಿಳಿಗೂ ಬೆದರಿಕೆ ಹಾಕಿದ್ದರು. ಹೀಗಾಗಿ, ಈ ಘಟನೆ ನಡೆದು ಮೂರ್ನಾಲ್ಕು ದಿನಗಳಾದರೂ ಯಾರಿಗೂ ಗೊತ್ತಿರಲಿಲ್ಲ” ಎಂದರು.

“ಸೋಮವಾರ ಶಾಲೆಯಲ್ಲಿ ಪೋಷಕರ ಸಭೆಗೆ ಬಂದಾಗ ತನ್ನ ಮಗನ ಮೇಲೆ ಹಲ್ಲೆ ನಡೆದಿರುವ ಸಂಗತಿ ಗೊತ್ತಾಯಿತು. ಈ ಬಗ್ಗೆ ವಾರ್ಡನ್ ಮಹೇಶ್ ಅವರನ್ನು ವಿಚಾರಿಸಿದೆವು. ‘ಶಾಲೆಯಲ್ಲಿ ದೆವ್ವ ಇದೆ ಎಂದು ಇತರ ವಿದ್ಯಾರ್ಥಿಗಳನ್ನು ಹೆದರಿಸುತ್ತಿದ್ದ. ಹೀಗಾಗಿ ಹೊಡೆದೆ’ ಎಂದು ಅವರು ತಮ್ಮ ಕೃತ್ಯ ಸಮರ್ಥಿಸಿಕೊಂಡರು. ಅವರಿಗೆ ಹಲ್ಲೆ ನಡೆಸಿದ ಬಗ್ಗೆ ಯಾವುದೇ ಪಶ್ಚಾತ್ತಾಪ ಇಲ್ಲ” ಎಂದು ವಿದ್ಯಾರ್ಥಿ ತಾಯಿ ಅಶ್ವಿನಿ ಅವಲತ್ತುಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...