ಬೀದರ್ | ಕರ್ನಾಟಕ ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಬಹುಕೋಟಿ ಅಕ್ರಮ‌; ತನಿಖೆಗೆ ಆಗ್ರಹ

Date:

  • ಕರ್ನಾಟಕ ಪಶುವೈದ್ಯಕೀಯ ಹಾಗೂ ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಅಕ್ರಮ ಆರೋಪ
  • ಎನ್ ಪಿಎಸ್ ಅಡಿಯಲ್ಲಿ ನೇಮಕಗೊಂಡ ಸಿಬ್ಬಂದಿ ಹಳೆ ಪಿಂಚಣಿ ಮಂಜೂರಾತಿಯಲ್ಲಿ ನಡೆದಿರುವ ಬಹುಕೋಟಿ ಅಕ್ರಮ

ಬೀದರನ ಕರ್ನಾಟಕ ಪಶುವೈದ್ಯಕೀಯ ಹಾಗೂ ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಎನ್ ಪಿಎಸ್ ಅಡಿಯಲ್ಲಿ ನೇಮಕಗೊಂಡ ಸಿಬ್ಬಂದಿಯ ಹಳೆ ಪಿಂಚಣಿ ಮಂಜೂರಾತಿಯಲ್ಲಿ ಅವ್ಯವಹಾರ ನಡೆದಿದೆ ಎನ್ನುವ ಆರೋಪ ಕೆಳಿಬಂದಿದೆ. ಈ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಕುಲಪತಿಗಳಾದ ಕೆ.ಸಿ.ವೀರಣ್ಣ ಮತ್ತು ಕುಲಸಚಿವ ಎಸ್. ಶಿವಶಂಕರ್ ಹಾಗೂ ಇತರರ ವಿರುದ್ಧ ಲೋಕಾಯುಕ್ತ ಸಂಸ್ಥೆಯಿಂದ ವಿಚಾರಣೆ ನಡೆಸಿ ಕ್ರಮ ಕೈಗೊಳ್ಳಬೇಕೆಂದು ಸಾಮಾಜಿಕ ಕಾರ್ಯಕರ್ತ ಕಮಲಾಕರ್ ಹೆಗಡೆ ಸೇರಿದಂತೆ ವಿವಿಧ ಸಂಘಟನೆಗಳು ಒತ್ತಾಯಿಸಿದವು.

ಈ ಕುರಿತು ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯಪಾಲರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ್ ಶೀಲವಂತ ಅವರಿಗೆ ಸಲ್ಲಿಸಿದರು.

“ಬೀದರ್ ನಗರದ ಹೊರವಲಯದ ಕರ್ನಾಟಕ ಪಶುವೈದ್ಯಕೀಯ ಹಾಗೂ ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ 2006 ರ ಎಪ್ರಿಲ್ 1ರ ನಂತರ ಎನ್ ಪಿಎಸ್ ಅಡಿಯಲ್ಲಿ ನೇರ ನೇಮಕಾತಿಗೊಂಡ ಸಿಬ್ಬಂದಿಯ ಹಳೆ ಪಿಂಚಣಿ ಮಂಜೂರಾತಿಯಲ್ಲಿ ವಿಶ್ವವಿದ್ಯಾಲಯದ ಕುಲಪತಿ ಹಾಗೂ ಇತರರು ಬಹುಕೋಟಿ ಹಗರಣ ನಡೆಸಿದ್ದಾರೆ” ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಮತ್ತು ಸಾರ್ವಜನಿಕರ ಹಣದ ಹಿತದೃಷ್ಟಿಯಿಂದ ಬಹುಕೋಟಿ ಅಕ್ರಮ ಎಸಗಿದ ವಿಶ್ವವಿದ್ಯಾಲಯದ ಕುಲಪತಿ ಡಾ.ಕೆ.ಸಿ. ವೀರಣ್ಣ ಮತ್ತು ಕುಲಸಚಿವ ಎಸ್. ಶಿವಶಂಕರ್ ಮತ್ತು ಇತರರಿಗೆ ಲೋಕಾಯುಕ್ತ ಸಂಸ್ಥೆಯಿಂದ ವಿಚಾರಣೆ ನಡೆಸುವಂತೆ 2023 ಸೆಪ್ಟೆಂಬರ್ 22 ರಂದು ಮನವಿ ಸಲ್ಲಿಸಲಾಗಿತ್ತು. ಆದರೂ  ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ದೂರಿದರು.

ವಿಶ್ವವಿದ್ಯಾಲಯದಲ್ಲಿ 1.4.2006 ರಿಂದ ಹಳೆ ಪಿಂಚಣಿ ಮಂಜೂರಾತಿಯಲ್ಲಿ ನಡೆದಿರುವ ಬಹುಕೋಟಿ ಅಕ್ರಮದ ಬಗ್ಗೆ ಸದರಿ ಅಧಿಕಾರಿಗಳು ಮತ್ತು ಇತರ ನೌಕರರ ವಿರುದ್ಧ ವಿಚಾರಣೆಗೆ ಲೋಕಾಯುಕ್ತ ಸಂಸ್ಥೆ ಮತ್ತು ನಿವೃತ್ತ ನ್ಯಾಯಾಧೀಶರನ್ನು ನೇಮಿಸಿ ಅಕ್ಟೋಬರ್ ವಾರದೊಳಗೆ ತನಿಖೆ ನಡೆಸಬೇಕು” ಎಂದು ಆಗ್ರಹಿಸಿದ್ದರು.

“ಈ ಬಹುಕೋಟಿ ಹಗರಣ ತನಿಖೆಗೆ ಲೋಕಾಯುಕ್ತ ಸಂಸ್ಥೆ ಮತ್ತು ನಿವೃತ್ತ ನ್ಯಾಯಾಧೀಶರನ್ನು ನೇಮಿಸದಿದ್ದರೆ, ಹಿಂದುಳಿದ ಕಲ್ಯಾಣ ಕರ್ನಾಟಕ ಪ್ರದೇಶ, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಮತ್ತು ಸಾರ್ವಜನಿಕರ ಹಣದ ಹಿತದೃಷ್ಟಿಯಿಂದ ಅಕ್ಟೊಬರ್ 10 ರಂದು ನಡೆಯುವ ವಿಶ್ವವಿದ್ಯಾಲಯದ ಘಟಿಕೋತ್ಸವ ದಿನದಂದು ವಿಶ್ವವಿದ್ಯಾಲಯದ ಮುಂಭಾಗ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಧರಣಿ ನಡೆಸಲಾಗುವುದು” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ವಿವಿಧ ಬೇಡಿಕೆ ಈಡೇರಿಕೆಗೆ ಸಿಪಿಐ ಒತ್ತಾಯ

ಈ ಸಂದರ್ಭದಲ್ಲಿ ಕ.ರ.ವೇ. ಜಿಲ್ಲಾಧ್ಯಕ್ಷ ರಾಜಕುಮಾರ ಟಿಳ್ಳೆಕ‌ರ್, ಸಾಮಾಜಿಕ ಕಾರ್ಯಕರ್ತರಾದ ಶ್ರೀಕಾಂತ್ ಭವಾನಿ, ರಾಜಕುಮಾರ ಶಾಹಪೂರಕ‌ರ್, ಉದಯ ಭಾವಿದೊಡ್ಡಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...