ಮುಂಡಗೋಡ | ಅಡಿಕೆ ಮತ್ತು ಮಾವು ಬೆಳೆ ರೋಗ ನಿರ್ವಹಣೆ: ಪಾಳಾದಲ್ಲಿ ರೈತರಿಗೆ ತಾಂತ್ರಿಕ ತರಬೇತಿ ಕಾರ್ಯಾಗಾರ

Date:

ಮುಂಡಗೋಡ ತಾಲೂಕಿನ ಪಾಳಾದ ಅಂಬೇಡ್ಕರ್ ಸಭಾಭವನದಲ್ಲಿ 2025-26 ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಅಡಿಕೆ ಮತ್ತು ಮಾವು ಬೆಳೆಗಾರರಿಗಾಗಿ ವಿಶೇಷ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.

ಅಡಿಕೆಯಲ್ಲಿ ಕಂಡುಬರುತ್ತಿರುವ ಎಲೆ ಚುಕ್ಕೆ ರೋಗ ಹಾಗೂ ಮಾವು ಬೆಳೆಗೆ ಬಾಧಿಸುವ ವಿವಿಧ ಕೀಟ ಮತ್ತು ರೋಗಗಳ ನಿರ್ವಹಣೆಯ ಕುರಿತು ಈ ವಿಚಾರ ಸಂಕಿರಣದಲ್ಲಿ ರೈತರಿಗೆ ಸಮಗ್ರ ಮಾಹಿತಿ ನೀಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮುಂಡಗೋಡ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರಾದ ಶ್ರೀ ಕೃಷ್ಣ ಟಿ. ಕುಳ್ಳೂರ ಅವರು, ಮುಂಡಗೋಡ ತಾಲೂಕಿನಾದ್ಯಂತ ಸುಮಾರು 3,900 ಹೆಕ್ಟೇರ್ ಪ್ರದೇಶದಲ್ಲಿ ಅಡಿಕೆ ಬೆಳೆಯಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇತ್ತೀಚಿನ ದಿನಗಳಲ್ಲಿ ಅಡಿಕೆಗೆ ಕೊಳೆ ರೋಗ ಮತ್ತು ಎಲೆ ಚುಕ್ಕೆ ರೋಗ ಕಾಣಿಸಿಕೊಂಡಿರುವುದು ರೈತರಲ್ಲಿ ಆತಂಕ ಮೂಡಿಸಿದೆ. ಈ ನಿಟ್ಟಿನಲ್ಲಿ ರೈತರಿಗೆ ಆಧುನಿಕ ತಂತ್ರಜ್ಞಾನ ಹಾಗೂ ಸುಧಾರಿತ ಬೇಸಾಯ ಪದ್ಧತಿಗಳ ಬಗ್ಗೆ ಅರಿವು ಮೂಡಿಸಲು ಕ್ಷೇತ್ರ ಮಟ್ಟದಲ್ಲಿ ತಜ್ಞರ ಮೂಲಕ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ ? ಉತ್ತರ ಕನ್ನಡ | ಅಡುಗೆ ಅನಿಲ (ಗ್ಯಾಸ್) ಕೊರತೆ ಇಲ್ಲ: ಆತಂಕ ಬೇಡ ಎಂದ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ

ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡಿದ್ದ ಕೃಷಿ ವಿಜ್ಞಾನಿ ಡಾ. ಮೃತ್ಯುಂಜಯ ಕಿತ್ತೂರಮಠ ಅವರು ಮಾತನಾಡಿ ಮಾವು ಬೆಳೆಗೆ ಬರುವ ರೋಗಗಳು ಮತ್ತು ಕೀಟಬಾಧೆಗಳನ್ನು ನಿಯಂತ್ರಿಸುವ ಕ್ರಮಗಳ ಬಗ್ಗೆ ರೈತರಿಗೆ ಸವಿಸ್ತಾರವಾಗಿ ವಿವರಿಸಿದರು. ಸಿದ್ಧಾಪುರದ ವಿಷಯ ತಜ್ಞರಾದ ಶ್ರೀ ಮಯೂರ ಪಾಟೀಲ ಅವರು ಅಡಿಕೆ ಬೆಳೆಯನ್ನು ಬಾಧಿಸುವ ರೋಗಗಳ ಹತೋಟಿ ಮತ್ತು ಕೀಟಬಾಧೆ ತಡೆಗಟ್ಟುವ ಕುರಿತು ತಾಂತ್ರಿಕ ಮಾಹಿತಿ ನೀಡಿದರು.

ಈ ಕಾರ್ಯಕ್ರಮದಲ್ಲಿ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಚಂದ್ರಗೌಡ ಶಿವನಗೌಡ್ರ, ಪಾಳಾ ಎಫ್‌ಪಿಒ (FPO) ಅಧ್ಯಕ್ಷರಾದ ಶ್ರೀ ರಮೇಶ ಜಿಗಳೇರ, ಸೋಮಣ್ಣ ಮಟ್ಟಿಮನಿ, ಸಹಾಯಕ ತೋಟಗಾರಿಕೆ ಅಧಿಕಾರಿ ಶ್ರೀ ರಾಮಪ್ಪ ನಡುವಿನಮನಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಸುಮಾರು 50ಕ್ಕೂ ಹೆಚ್ಚು ಪ್ರಗತಿಪರ ಅಡಿಕೆ ಮತ್ತು ಮಾವು ಬೆಳೆಗಾರರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...