ಮುಂಡಗೋಡ | ಹುಲಿಹೊಂಡ ಗ್ರಾಮದಲ್ಲಿ ಶಿಕ್ಷಣ, ಸಂಘಟನೆ, ಹೋರಾಟದ ಮಹತ್ವದ ಕುರಿತು ಜಾಗೃತಿ ಕಾರ್ಯಕ್ರಮ 

Date:

ಮುಂಡಗೋಡ ತಾಲೂಕಿನ ನಂದಿಗಟ್ಟಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಹುಲಿಹೊಂಡ ಗ್ರಾಮದಲ್ಲಿ ಯುವರತ್ನ ಯುವ ಒಕ್ಕೂಟ ಮತ್ತು ಸಂತ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿಗಳಿಂದ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು. ಗ್ರಾಮದ ಜನರಲ್ಲಿ ಸಂವಿಧಾನದ ಮೌಲ್ಯಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಮಾತನಾಡಿದ ಅರ್ಜುನ ಹರಿಜನ ಮತ್ತು ಮಾರುತಿ ದುಮಾಲ ಅವರು, ಸಂವಿಧಾನದ ಮಹತ್ವವನ್ನು ವಿವರಿಸಿದರು. ಸಂವಿಧಾನದಲ್ಲಿನ ಪ್ರತಿಯೊಂದು ಅಂಶವನ್ನೂ ನಮ್ಮ ದಿನನಿತ್ಯದ ಜೀವನದಲ್ಲಿ ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದು ಹೇಳಿದರು. ಅಲ್ಲದೆ, ಡಾ. ಬಿ.ಆರ್. ಅಂಬೇಡ್ಕರ್ ಅವರ ಮೂರು ಮೂಲಭೂತ ತತ್ವಗಳಾದ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ದಾರಿಯಲ್ಲಿ ನಾವು ನಡೆಯಬೇಕು ಎಂದು ತಿಳಿಸಿದರು.

ಸಂತ ಅಲೋಸಿಯಸ್ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಒಬ್ಬರಾದ ಸುಬ್ರಮಣ್ಯ ಅವರು ಸಂವಿಧಾನ ದಿನದ ಕುರಿತು ಜನರಿಗೆ ಅರಿವು ಮೂಡಿಸಿದರೆ, ಮತ್ತೊಬ್ಬ ವಿದ್ಯಾರ್ಥಿನಿ ಅಂಬಿಕಾ ಅವರು ಆರೋಗ್ಯದ ಕುರಿತು ಜಾಗೃತಿ ಮೂಡಿಸಿದರು. ಲೊಯೋಲ ವಿಕಾಸ ಕೇಂದ್ರದ ಕಾರ್ಯಕರ್ತರಾದ ಡಿಮ್ನ ಅವರು ಸಂವಿಧಾನದ ಪ್ರಸ್ತಾವನೆಯನ್ನು ಮಂಡಿಸಿ, ಸಂವಿಧಾನದ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಅವರ ಆಶಯಗಳನ್ನು ಸಮುದಾಯದವರಿಗೆ ಮನದಟ್ಟು ಮಾಡಿಕೊಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕಾರವಾರ | ಮಾದಕ ವಸ್ತು ನಿಷೇಧಿಸಿದ್ದಕ್ಕೆ ಪ್ರತೀಕಾರ: ಜೈಲರ್ ಸೇರಿ 3 ಸಿಬ್ಬಂದಿ ಮೇಲೆ ರೌಡಿಗಳ ಮಾರಣಾಂತಿಕ ಹಲ್ಲೆ!

ಕಾರ್ಯಕ್ರಮದಲ್ಲಿ ಅಲೋಸಿಯಸ್ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಗ್ರಾಮದ ಮಕ್ಕಳು ಆಕರ್ಷಕ ಸಾಂಸ್ಕೃತಿಕ ನೃತ್ಯ ಪ್ರದರ್ಶಿಸಿದರು. ಯುವಕರು ಸಾಂಪ್ರದಾಯಿಕ ಕೋಲಾಟ ಪ್ರದರ್ಶಿಸುವ ಮೂಲಕ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ನೀಡಿದರು. 

ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಮೈಲಾರಿ ಹಡಪದ, ಸದಸ್ಯರಾದ ಬಸವರಾಜ ಅಂಬಿಗೇರ, ನಾಗೇಂದ್ರ ಹರಿಕಾರ, ಹಾಗೂ ಗ್ರಾಮದ ಹಿರಿಯರಾದ ಉಳ್ಳೆಪ್ಪಾ ಅಲ್ಲಾಪುರ ಭಾಗವಹಿಸಿದ್ದರು. ಇದರ ಜೊತೆಗೆ, ಸಂತ ಅಲೋಸಿಯಸ್ ಕಾಲೇಜಿನ ಎಂ.ಎಸ್ಸಿ. ಫುಡ್ ಅಂಡ್ ಸೈನ್ಸ್ ವಿದ್ಯಾರ್ಥಿಗಳು ಹಾಗೂ ಊರಿನ ಹಿರಿಯರು ಮತ್ತು ಸಮುದಾಯದ ಜನರು ಪಾಲ್ಗೊಂಡಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...