ಮುಂಡಗೋಡ | ತಾಲೂಕಿನಾದ್ಯಂತ ಸಕ್ರಿಯಗೊಂಡ ಇಟ್ಟಿಗೆ ಭಟ್ಟಿಗಳು: ಅರಣ್ಯ–ಪರಿಸರದ ಮೇಲೆ ಹೆಚ್ಚಿದ ಒತ್ತಡ

Date:

ಮುಂಡಗೋಡ: ಮಳೆಗಾಲ ಮುಗಿದು ಚಳಿಗಾಲ ಆರಂಭವಾಗುತ್ತಿದ್ದಂತೆ ಮುಂಡಗೋಡ ತಾಲ್ಲೂಕಿನಾದ್ಯಂತ ಭೂಮಿಯ ಒಡಲನ್ನು ಬೇಯಿಸುವ ಇಟ್ಟಿಗೆ ಭಟ್ಟಿಗಳ ಜಾಲ ಮತ್ತೆ ಸಕ್ರಿಯಗೊಳ್ಳುತ್ತಿದೆ. ತಾಲ್ಲೂಕಿನ ಸನವಳ್ಳಿ, ರಾಮಾಪುರ, ಹನುಮಾಪುರ, ಕೆಂದಲಗೇರಿ, ಅಟ್ಟಣಗಿ, ಚವಡಳ್ಳಿ-ಮಳವಳ್ಳಿ, ಓಣಿಕೇರಿ, ಒರಲಗಿ, ಲಕ್ಕೊಳ್ಳಿ, ಸೇರಿದಂತೆ ಇನ್ನೂ ಕೆಲವು ಗ್ರಾಮಗಳಲ್ಲಿ ಇಟ್ಟಿಗೆ ಸುಡಲು ಭಟ್ಟಿಗಳು ತಯಾರಾಗುತ್ತಿವೆ.

ಆದರೆ, ವಿಷಾದದ ಸಂಗತಿಯೆಂದರೆ ಇವುಗಳಲ್ಲಿ ಬಹುಪಾಲು ಭಟ್ಟಿಗಳು ಯಾವುದೇ ಅಧಿಕೃತ ಪರವಾನಗಿ ಇಲ್ಲದೆ, ಪರಿಸರ ಸಂರಕ್ಷಣಾ ನಿಯಮಗಳನ್ನು ಹಾಗೂ ಸರ್ಕಾರದ ಕಾನೂನುಗಳನ್ನು ಗಾಳಿಗೆ ತೂರಿ ಕಾರ್ಯನಿರ್ವಹಿಸುತ್ತಿವೆ. ತಾಲೂಕಿನಲ್ಲಿ ಅಂದಾಜಿನ ಪ್ರಕಾರ 100ರ ಮೇಲೆ ಇಟ್ಟಿಗೆ ಭಟ್ಟಿಗಳು ಇದ್ದರು ಕಾನೂನುಬದ್ಧವಾಗಿ ಪರವಾನಗಿ ಪಡೆದು ನಡೆಸುತ್ತಿರುವ ಇಟ್ಟಿಗೆ ಭಟ್ಟಿಗಳು ಬೆರಳೆಣಿಕೆಯಷ್ಟು ಇಲ್ಲ, ಸುಮಾರು ಭಟ್ಟಿಗಳಿಗೆ ಕಮರ್ಷಿಯಲ್ ಜಾಗದ ಸಮಸ್ಯೆ, ಆರ್ಥಿಕ ಅಡಚಣೆ ಮತ್ತು ಸರಿಯಾದ ಮಾಹಿತಿಯ ಕೊರತೆಯಿಂದ, ಪರವಾನಿಗೆ ಮಾಡಿಸಿದೆ ನಿಯಮಗಳನ್ನು ಪಾಲಿಸದೆ ಇಟ್ಟಿಗೆ ಭಟ್ಟಿಗಳನ್ನು ನಡೆಸುತ್ತಿದ್ದಾರೆ.

ಈ ಅನಧಿಕೃತ ಚಟುವಟಿಕೆಯು ಪರಿಸರ ಮತ್ತು ಆಡಳಿತ ವ್ಯವಸ್ಥೆ ಎರಡಕ್ಕೂ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಇಟ್ಟಿಗೆ ಭಟ್ಟಿ ನಿರ್ವಹಣೆಗೆ ವಾಣಿಜ್ಯ ಭೂಮಿಯ ಬಳಕೆಯ ಜೊತೆಗೆ ಮಾಲಿನ್ಯ ನಿಯಂತ್ರಣ ಮಂಡಳಿ, ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆಗಳಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ ಈ ಸಂಕೀರ್ಣ ಪ್ರಕ್ರಿಯೆಗಳ ಬಗ್ಗೆ ಮಾಹಿತಿ ಇಲ್ಲದಿರುವುದು ಅಥವಾ ಪರವಾನಗಿ ಪಡೆಯಲು ತೋರುತ್ತಿರುವ ಆಲಸ್ಯದಿಂದಾಗಿ ಮಾಲೀಕರು ಅಕ್ರಮ ದಾರಿ ಹಿಡಿದಿದ್ದಾರೆ. ಇಟ್ಟಿಗೆ ತಯಾರಿಕೆಗೆ ಬೇಕಾದ ಮಣ್ಣಿಗಾಗಿ ಮೊದಲು ಕೃಷಿ ಭೂಮಿಯನ್ನು ಅವಲಂಬಿಸುವ ಇವರು, ನಂತರ ಅಕ್ರಮವಾಗಿ ಅರಣ್ಯ ಪ್ರದೇಶದ ಮಣ್ಣನ್ನು ಬಳಸುತ್ತಿದ್ದಾರೆ ಎಂಬ ಗಂಭೀರ ಆರೋಪಗಳಿವೆ. ಕೃಷಿ ಜಮೀನಿನಿಂದ ಯಂತ್ರಗಳ ಮೂಲಕ ಮಣ್ಣು ತೆಗೆಯುವುದರಿಂದ ಭೂಮಿಯ ಮೇಲ್ಪದರ ನಾಶವಾಗಿ, ಕೃಷಿ ಯೋಗ್ಯ ಮಣ್ಣಿನ ರಚನೆಗೆ ದೊಡ್ಡ ಪೆಟ್ಟು ಬೀಳುತ್ತಿದೆ.

ಇಟ್ಟಿಗೆ ಸುಡಲು ಬಳಸುವ ಇಂಧನದ ವಿಚಾರವಂತೂ ಮತ್ತಷ್ಟು ಕಳವಳಕಾರಿಯಾಗಿದೆ. 50 ರಿಂದ 75 ಸಾವಿರ ಇಟ್ಟಿಗೆಗಳನ್ನು ಬೇಯಿಸಲು ಸುಮಾರು 2 ರಿಂದ 3 ಟ್ರ್ಯಾಕ್ಟರ್ ಅಷ್ಟು ಕಟ್ಟಿಗೆ ಬೇಕು. ಕಟ್ಟಿಗೆಯನ್ನು ಅಧಿಕೃತ ಅಡ್ಡೆಗಳಿಂದ ಅಲ್ಪ ಪ್ರಮಾಣದಲ್ಲಿ ಪಡೆದು, ಉಳಿದ ಬಹುಪಾಲು ಕಟ್ಟಿಗೆಯನ್ನು ಅರಣ್ಯದಿಂದಲೇ ಅಕ್ರಮವಾಗಿ ಕಡಿದು ತರಲಾಗುತ್ತಿದೆ. ಇದು ಮುಂಡಗೋಡಿನ ದಟ್ಟ ಅರಣ್ಯ ಸಂಪತ್ತಿನ ಮೇಲೆ ಗಂಭೀರ ಪರಿಣಾಮ ಬೀರುತ್ತಿದ್ದು, ಪರಿಸರದ ಸಮತೋಲನವನ್ನು ಏರುಪೇರು ಮಾಡುತ್ತಿದೆ.

ಕೇವಲ ಪರಿಸರ ಅಷ್ಟೇ ಅಲ್ಲದೆ, ಈ ಭಟ್ಟಿಗಳು ಸರ್ಕಾರದ ಬೊಕ್ಕಸಕ್ಕೂ ಕೋಟ್ಯಂತರ ರೂಪಾಯಿ ನಷ್ಟ ಉಂಟುಮಾಡುತ್ತಿವೆ. ಗಣಿ ಇಲಾಖೆಗೆ ಸಲ್ಲಬೇಕಾದ ರಾಯಧನ, ಜಿಎಸ್‌ಟಿ ಮತ್ತು ಇತರೆ ತೆರಿಗೆಗಳನ್ನು ಪಾವತಿಸದೆ ವಂಚಿಸಲಾಗುತ್ತಿದೆ. ಇದಲ್ಲದೆ, ಹೆಸ್ಕಾಂನಿಂದ ಯಾವುದೇ ಅಧಿಕೃತ ಅನುಮತಿ ಪಡೆಯದೆ ನೇರವಾಗಿ ವಿದ್ಯುತ್ ಕಂಬಗಳಿಂದ ಅಕ್ರಮ ಸಂಪರ್ಕ ಪಡೆದುಕೊಳ್ಳುತ್ತಿರುವುದು ಇಲಾಖೆಯ ಆದಾಯಕ್ಕೆ ಕತ್ತರಿ ಹಾಕುತ್ತಿದೆ.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಅಂಗನವಾಡಿಗಳಿಗೆ ಹೈಟೆಕ್ ಸ್ಪರ್ಶ: ಖಾಸಗಿ ಶಾಲೆಗಳ ಮಾದರಿಯಲ್ಲಿ ಎಲ್‌ಕೆಜಿ, ಯುಕೆಜಿ ಆರಂಭ

ಈ ವ್ಯವಸ್ಥಿತ ಅಕ್ರಮವನ್ನು ತಡೆಯಲು ಕೆಎಸ್‌ಪಿಸಿಬಿ, ಗಣಿ ಇಲಾಖೆ, ಅರಣ್ಯ ಇಲಾಖೆ ಹಾಗೂ ಹೆಸ್ಕಾಂ ಜಂಟಿಯಾಗಿ ಕಾರ್ಯಪ್ರವೃತ್ತರಾಗಬೇಕಿದೆ. ಭಟ್ಟಿ ಮಾಲೀಕರಿಗೆ ದಾಳಿಯ ಭಯ ಹುಟ್ಟಿಸುವ ಜೊತೆಗೆ, ಪರವಾನಗಿ ಪಡೆಯುವ ಪ್ರಕ್ರಿಯೆಯನ್ನು ಸರಳಗೊಳಿಸುವ ಸೌಹಾರ್ದಯುತ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದು ಸ್ಥಳೀಯರ ಅಭಿಪ್ರಾಯವಾಗಿದೆ.

ಅಕ್ರಮವಾಗಿ ಭಟ್ಟಿ ನಡೆಸುವವರು ಭವಿಷ್ಯದಲ್ಲಿ ಎದುರಿಸಬಹುದಾದ ದಂಡ ಹಾಗೂ ಜೈಲು ಶಿಕ್ಷೆಯ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳು ನಡೆಯಬೇಕಿದೆ. ಸಾರ್ವಜನಿಕರು ಕೂಡ ವಾಯು ಮಾಲಿನ್ಯದ ಬಗ್ಗೆ ಜಾಗೃತರಾಗಿ ಮುಂಡಗೋಡಿನ ಪರಿಸರ ರಕ್ಷಣೆಗಾಗಿ ಅಧಿಕಾರಿಗಳಿಗೆ ಸಹಕಾರ ನೀಡುವುದು ಅತ್ಯಗತ್ಯವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...