ಮುಂಡಗೋಡ | ಅತ್ತಿವೇರಿ ಗ್ರಾಮಕ್ಕೆ ಬಸ್ ಸೇವೆ ಆರಂಭ– ಸಿಹಿ ಹಂಚಿ ಸಂಭ್ರಮಿಸಿದ ಗ್ರಾಮಸ್ಥರು

Date:

ಮುಂಡಗೋಡ ತಾಲೂಕಿನ ಅತ್ತಿವೇರಿ ಗ್ರಾಮಕ್ಕೆ ಸರ್ಕಾರಿ ಬಸ್ಸ ಒಂದನ್ನು ಬಿಡಬೇಕು ಎಂದು ಊರಿನ ಗ್ರಾಮಸ್ಥರು ಮತ್ತು ಸಾಮಾಜಿಕ ಕಾರ್ಯಕರ್ತರು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಹಲವಾರು ಬಾರಿ ಮನವಿ ನೀಡಿ ಗ್ರಾಮಕ್ಕೆ ಬಸ್ ಸೌಲಭ್ಯ ಒದಗಿಸಿ ಕೊಡುವಂತೆ ಬೇಡಿಕೆ ಇಟ್ಟಿದ್ದರು. ಗ್ರಾಮದಿಂದ ಪ್ರತಿನಿತ್ಯ ಮಕ್ಕಳು ಶಾಲಾ ಕಾಲೇಜುಗೆ ಪಟ್ಟಣ್ಣಕ್ಕೆ ಹೋಗಬೇಕು ಮತ್ತು ಅನಾರೋಗ್ಯದ ಸಮಯದಲ್ಲಿ ಆಸ್ಪತ್ರೆಗೆ, ಇತರೆ ದಿನಗಳಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಪ್ರತಿಯೊಂದಕ್ಕೂ ಮುಂಡಗೋಡ ಪಟ್ಟಣಕ್ಕೆ ಗ್ರಾಮಸ್ಥರು ಬರಬೇಕು.

ಗ್ರಾಮದಿಂದ ತಾಲ್ಲೂಕು ಕೇಂದ್ರಕ್ಕೆ ಇದುವರೆಗೂ ಒಂದೇ ಒಂದು ಬಸ್ಸಿನ ವ್ಯವಸ್ಥೆ ಇರಲಿಲ್ಲ ಮುಖ್ಯ ರಸ್ತೆಯ ವರೆಗೆ ಅಷ್ಟೇ ಬಸ್ಸಿನ ವ್ಯವಸ್ಥೆ ಇತ್ತು ಅಲ್ಲಿಂದ ಸುಮಾರು 4 ರಿಂದ 5 ಕೀ.ಮಿ ವರೆಗೂ ಕಾಲ್ನಡಿಗೆಯಲ್ಲಿ ಗ್ರಾಮಕ್ಕೆ ತೆರಳಬೇಕಿತ್ತು. ಇದರಿಂದ ಗ್ರಾಮಸ್ಥರು ತಮ್ಮ ಊರಿಗೆ ಒಂದು ಬಸ್ಸನ್ನು ಬಿಡುವಂತೆ ದೀರ್ಘಕಾಲದಿಂದ ಹೋರಾಟ ಮಾಡಿಕೊಂಡು ಬರುತ್ತಿದ್ದರು. ಅದರ ಫಲವಾಗಿ ಅತ್ತಿವಿರಿ ಗ್ರಾಮಕ್ಕೆ ಕೊನೆಗೆ ಸರ್ಕಾರಿ ಬಸ್ ಸಂಚಾರ ಆರಂಭಗೊಂಡಿದೆ.

ಬಹು ವರ್ಷಗಳಿಂದ ಸಾರಿಗೆ ಸೌಲಭ್ಯಕ್ಕಾಗಿ ಹೋರಾಟ ನಡೆಸಿದ ಗ್ರಾಮಸ್ಥರು ಇಂದು ಆ ಕನಸನ್ನು ಸಾಕಾರಗೊಳಿಸಿಕೊಂಡಿದ್ದಾರೆ. ಗ್ರಾಮಕ್ಕೆ ಬಸ್ ಮೊದಲ ಬಾರಿಗೆ ಪ್ರವೇಶಿಸಿದ ಕ್ಷಣವನ್ನು ಸ್ಥಳೀಯರು ಸಂಭ್ರಮದಿಂದ ಆಚರಿಸಿದರು. ಈ ಸಂದರ್ಭ ಗ್ರಾಮಸ್ಥರು ತಮ್ಮ ಪರವಾಗಿ ನಿಂತು ಸಹಾಯ ಸಹಕಾರ ಕೊಟ್ಟ ದ.ಸಂ.ಸಮಿತಿ ಕಾದ್ರೊಳ್ಳಿ ಬಣದ ಜಿಲ್ಲಾಧ್ಯಕ್ಷರಾದ ಬಸವರಾಜ ಸಂಗಮೇಶ್ವರ ಅವರನ್ನು ಮತ್ತು ಕಾರ್ಯಕರ್ತರನ್ನು ಸನ್ಮಾನಿಸಿ, ಬಸ್‌ಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಸಿಹಿ ಹಂಚಿಕೊಳ್ಳುವ ಮೂಲಕ ಸಂತೋಷ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕಾರವಾರ | ಮಾಜಾಳಿ ಚೆಕ್‌ಪೋಸ್ಟ್‌ನಲ್ಲಿ ದಾಖಲೆ ರಹಿತ ₹1 ಕೋಟಿ ಹಣ ಪತ್ತೆ; ಇಬ್ಬರು ಪೊಲೀಸರ ವಶಕ್ಕೆ

ಕಾರ್ಯಕ್ರಮದಲ್ಲಿ ದ.ಸಂ.ಸಮಿತಿ ಕಾದ್ರೊಳ್ಳಿ ಬಣದ ಜಿಲ್ಲಾಧ್ಯಕ್ಷರಾದ ಬಸವರಾಜ್ ಸಂಗಮೇಶ್ವರ್, ಮೆಹಬೂಬ್ ಸಾಬ್ ಬೀರುವಳ್ಳಿ, ಶ್ರೀ ಶಿವಾಜಿ ಅಮ್ಮಜಿ ಪೀರ್ ಸಾಬ್ ಮತ್ತಿ, ಕಟ್ಟಿ ಚೆನ್ನಯ್ಯ, ದುರ್ಗದ ಮಠ ಬಸವರಾಜ್ ನೀರಲಗಿ, ಮಂಜುನಾಥ ನೀರಲಗಿ, ಶಂಭಾಜಿ ಬ್ಯಾಹಟ್ಟಿ, ಸಂಗನಗೌಡ ತೀರ್ಥ, ಮಂಜುನಾಥ್ ಸಕಾಯಿ, ಚಂದ್ರು ಗೌಡ ಪಾಟೀಲ್ ಮತ್ತು ಅನೇಕ ಗ್ರಾಮಸ್ಥರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...