ಮುಂಡಗೋಡ | ನರೇಗಾ ರದ್ದತಿ ಕೇವಲ ವದಂತಿ; ಆತಂಕ ಬಿಟ್ಟು ಕೆಲಸ ಮಾಡಿ ಇಒ ಟಿ.ವಾಯ್. ದಾಸನಕೊಪ್ಪ ಭರವಸೆ

Date:

ಮುಂಡಗೋಡ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ರದ್ದತಿಯ ವಿಚಾರವಾಗಿ ಸಾರ್ವಜನಿಕರಲ್ಲಿ ಹರಿದಾಡುತ್ತಿರುವ ವದಂತಿಗಳ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳಬಾರದು. ಕೂಲಿಕಾರರು ನಿರಾತಂಕವಾಗಿ ಕೆಲಸ ಮಾಡಿ ಯೋಜನೆಯ ಲಾಭ ಪಡೆದುಕೊಳ್ಳಬೇಕು ಎಂದು ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಟಿ.ವಾಯ್. ದಾಸನಕೊಪ್ಪ ಅವರು ಕರೆ ನೀಡಿದರು.

ಬುಧವಾರ ಮುಂಡಗೋಡ ತಾಲೂಕಿನ ಕಾತೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ನರೇಗಾ ಯೋಜನೆಯಡಿ ನಡೆಯುತ್ತಿರುವ ಟ್ರೆಂಚ್ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಅವರು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಕೆಲಸ ಮಾಡುತ್ತಿದ್ದ ಕೂಲಿಕಾರರು ಯೋಜನೆ ರದ್ದುಗೊಳ್ಳುವ ಬಗ್ಗೆ ಕೇಳಿದ ಆತಂಕದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಯೋಜನೆಯ ಸ್ಥಗಿತದ ಕುರಿತು ಇಲಾಖಾ ಮಟ್ಟದಲ್ಲಿ ಯಾವುದೇ ಮಾಹಿತಿ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು.

ಗ್ರಾಮೀಣ ಭಾಗದ ಅಕುಶಲ ಕೂಲಿಕಾರರಿಗೆ ವರ್ಷಕ್ಕೆ ಕನಿಷ್ಠ 100 ದಿನಗಳ ಉದ್ಯೋಗಾವಕಾಶ ಕಲ್ಪಿಸುವುದು, ದೀರ್ಘ ಬಾಳಿಕೆಯ ಸ್ವತ್ತುಗಳ ನಿರ್ಮಾಣ, ಮಹಿಳಾ ಸಬಲೀಕರಣ ಹಾಗೂ ರೈತರು ಮತ್ತು ಬಡವರ್ಗದ ಜನರ ಜೀವನೋಪಾಯಕ್ಕೆ ದಾರಿ ಮಾಡಿಕೊಡುವ ಉದಾತ್ತ ಆಶಯದೊಂದಿಗೆ ಮನರೇಗಾ ಯೋಜನೆ ಕಾರ್ಯನಿರ್ವಹಿಸುತ್ತಿದೆ. ಇದು ಗ್ರಾಮೀಣ ಜನರ ಪಾಲಿನ ಜೀವನಾಡಿಯಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ ? ಉತ್ತರ ಕನ್ನಡ | ಅರಣ್ಯ ಭೂಮಿ-ಸಿಆರ್‌ಝಡ್ ಸಂಘರ್ಷ; ಜಿಲ್ಲೆಯ ಶೇ 86ರಷ್ಟು ಆಸ್ತಿಗಳಿಗೆ ಸಿಗದ ‘ಇ-ಸ್ವತ್ತು’ ಮಾನ್ಯತೆ

ಗ್ರಾಮೀಣ ಭಾಗದ ಜನರು ಉದ್ಯೋಗ ಅರಸಿ ಬೇರೆ ರಾಜ್ಯ ಅಥವಾ ನಗರಗಳಿಗೆ ವಲಸೆ ಹೋಗಬಾರದು. ನಿಮ್ಮ ಸ್ವಂತ ಊರಿನಲ್ಲಿಯೇ ಇದ್ದು ಯೋಜನೆಯಡಿ ಕೆಲಸ ಮಾಡಿ ಕೂಲಿ ಪಡೆಯಬಹುದು. ಇದರೊಂದಿಗೆ ಮುಂದಿನ ಆರ್ಥಿಕ ವರ್ಷಕ್ಕೆ ಆಯವ್ಯಯ ಪಟ್ಟಿ ತಯಾರಿಸುತ್ತಿದ್ದು, ಸಾರ್ವಜನಿಕರು ತಮ್ಮ ವೈಯಕ್ತಿಕ ಮತ್ತು ಸಮುದಾಯ ಕಾಮಗಾರಿಗಳ ಬೇಡಿಕೆಗಳನ್ನು ಪಂಚಾಯತಿಗೆ ಸಲ್ಲಿಸಬಹುದು ಎಂದು ಅವರು ಈ ಸಂದರ್ಭದಲ್ಲಿ ಸಲಹೆ ನೀಡಿದರು.

ಈ ಭೇಟಿಯ ಸಂದರ್ಭದಲ್ಲಿ ಕಾತೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಬಸವರಾಜ್ ಕಡಪಟ್ಟಿ, ಐಇಸಿ ಸಂಯೋಜಕ ಕಿರಣ ಜೋತೆಪ್ಪನವರ, ಬಿಎಫ್‌ಟಿ ಗಣಪತಿ ಪವಾರ, ಕಾಯಕ ಬಂಧುಗಳು ಹಾಗೂ ಕೂಲಿಕಾರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...