​ಮುಂಡಗೋಡ | ಜನಸಾಗರದ ಮಧ್ಯೆ ವೈಭವದಿಂದ ಜರುಗಿದ ಶ್ರೀ ಮಾರಿಕಾಂಬಾ ದೇವಿಯ ರಥೋತ್ಸವ

Date:

ಮುಂಡಗೋಡ: ಪಟ್ಟಣದ ಗ್ರಾಮದೇವತೆ ಹಾಗೂ ಶ್ರದ್ಧಾಭಕ್ತಿಯ ಕೇಂದ್ರಬಿಂದುವಾದ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವದ ಅಂಗವಾಗಿ ಬುಧವಾರ ನಡೆದ ರಥೋತ್ಸವ ಅತ್ಯಂತ ವಿಜೃಂಭಣೆಯಿಂದ ಹಾಗೂ ಸಡಗರ ಸಂಭ್ರಮದಿಂದ ನೆರವೇರಿತು.

ಜಾತ್ರೆಯ ಹಿನ್ನೆಲೆಯಲ್ಲಿ ಮುಂಜಾನೆಯಿಂದಲೇ ಶ್ರೀ ಮಾರಿಕಾಂಬಾ ದೇವಾಲಯದ ಆವರಣ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಹಬ್ಬದ ವಾತಾವರಣ ಮನೆಮಾಡಿತ್ತು.

ಪಟ್ಟಣದ ಪ್ರಮುಖ ಬೀದಿಗಳಲ್ಲಿ ಭಕ್ತರ ದಂಡು ಹರಿದು ಬಂದಿದ್ದು, ಮಂಗಳವಾದ್ಯಗಳ ನಿನಾದ ಹಾಗೂ ಸಾಂಪ್ರದಾಯಿಕ ಆಚರಣೆಗಳು ಜಾತ್ರೆಯ ಕಳೆಯನ್ನು ಇನ್ನಷ್ಟು ಹೆಚ್ಚಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೂವಿನ ಸುಂದರ ಅಲಂಕಾರಗಳಿಂದ ಕಂಗೊಳಿಸುತ್ತಿದ್ದ ಭವ್ಯ ರಥದಲ್ಲಿ ಶ್ರೀ ಮಾರಿಕಾಂಬಾ ದೇವಿಯನ್ನು ಪ್ರತಿಷ್ಠಾಪಿಸಲಾಯಿತು. ದೇವಿ ರಥದಲ್ಲಿ ವಿರಾಜಮಾನವಾಗುತ್ತಿದ್ದಂತೆ ನೆರೆದಿದ್ದ ಸಾವಿರಾರು ಭಕ್ತರು “ಜೈ ಮಾರಿಕಾಂಬಾ ದೇವಿ” ಎಂದು ಜಯಘೋಷ ಮೊಳಗಿಸಿದರು.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಜಾತ್ರಾ ಮಹೋತ್ಸವಗಳಲ್ಲೂ ಜೂಜಿನ ಕರಿನೆರಳು; ಬೀಳಬೇಕಿದೆ ಬ್ರೇಕ್

ಸಂಪ್ರದಾಯಬದ್ಧ ವಾದ್ಯಗಳ ನಾದ, ಪೂಜಾ ವಿಧಿವಿಧಾನಗಳ ಪಾವಿತ್ರ್ಯ ಇಡೀ ವಾತಾವರಣಕ್ಕೆ ದೈವಿಕ ಭಾವವನ್ನು ತುಂಬಿತು. ರಥವನ್ನು ಎಳೆಯಲು ಭಕ್ತರು ಉತ್ಸಾಹದಿಂದ ಮುಗಿಬಿದ್ದು, ಜಾತ್ರೆಯ ಸಂಭ್ರಮವು ಭಕ್ತಿಭಾವದ ಮಹಾಸಾಗರವನ್ನೇ ಸೃಷ್ಟಿಸಿತು. ಉತ್ತರ ಕನ್ನಡ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಭಕ್ತರು ದೇವಿಯ ಕೃಪೆಗೆ ಪಾತ್ರರಾದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...