ಮುಂಡಗೋಡ | ರೈತರಿಗೆ ಇ-ಕೆವೈಸಿ, ಸೆಂಟ್ರಲ್ ಐಡಿ ಕಡ್ಡಾಯ: ಫೆ.25ರೊಳಗೆ ಪೂರ್ಣಗೊಳಿಸಲು ತೋಟಗಾರಿಕಾ ಇಲಾಖೆ ಸೂಚನೆ

Date:

ಮುಂಡಗೋಡ: ಕೇಂದ್ರ ಸರ್ಕಾರದ ಎಲ್ಲಾ ಯೋಜನೆಗಳ ಪ್ರಯೋಜನಗಳನ್ನು ಸುಗಮವಾಗಿ ಪಡೆಯಲು ರೈತರು ಇ-ಕೆವೈಸಿ (E-KYC) ಮಾಡಿಸಿ, ಸೆಂಟ್ರಲ್ ಐಡಿ (Central ID) ಪಡೆಯುವುದು ಕಡ್ಡಾಯವಾಗಿದೆ ಎಂದು ಮುಂಡಗೋಡಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಶ್ರೀ ಕೃಷ್ಣಾ ಟಿ. ಕುಳೂರ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಿಎಂ-ಕಿಸಾನ್ (PM-KISAN) ಸೇರಿದಂತೆ ಸರ್ಕಾರದ ವಿವಿಧ ಸೌಲಭ್ಯಗಳನ್ನು ಪಡೆಯಲು ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದು ಅತ್ಯಗತ್ಯವಾಗಿದ್ದು, ಈ ಪ್ರಕ್ರಿಯೆ ಪೂರ್ಣಗೊಳಿಸದ ರೈತರು ಮುಂದಿನ ದಿನಗಳಲ್ಲಿ ಯೋಜನೆಗಳ ಲಾಭದಿಂದ ವಂಚಿತರಾಗುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.

1000548473

ಆದ್ದರಿಂದ, ಇದುವರೆಗೂ ಸೆಂಟ್ರಲ್ ಐಡಿ ಪಡೆಯದ ಮುಂಡಗೋಡ ತಾಲ್ಲೂಕಿನ ರೈತರು ತಕ್ಷಣವೇ ಈ ಕಾರ್ಯವನ್ನು ಪೂರ್ಣಗೊಳಿಸಬೇಕು ಎಂದು ಮನವಿ ಮಾಡಲಾಗಿದೆ. ರೈತರು ತಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರ, ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರ ಅಥವಾ ಮುಂಡಗೋಡಿನ ತೋಟಗಾರಿಕೆ ಇಲಾಖೆಗೆ ಭೇಟಿ ನೀಡಿ ಸೆಂಟ್ರಲ್ ಐಡಿ ಪಡೆದುಕೊಳ್ಳಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಪ್ರಕ್ರಿಯೆಗಾಗಿ ರೈತರು ತಮ್ಮ ಹೆಸರಿನಲ್ಲಿರುವ ಇತ್ತೀಚಿನ ಪಹಣಿ ಪತ್ರ, ಆಧಾರ್ ಕಾರ್ಡ್ ಹಾಗೂ ಮೊಬೈಲ್ ಸಂಖ್ಯೆಯನ್ನು ಒದಗಿಸಬೇಕು.ಇ-ಕೆವೈಸಿ ಪೂರ್ಣಗೊಳಿಸುವುದು, ಮೊಬೈಲ್ ಸಂಖ್ಯೆ ನವೀಕರಿಸುವುದು ಹಾಗೂ ಎಲ್ಲಾ ಜಮೀನಿನ ಸರ್ವೇ ನಂಬರ್‌ಗಳನ್ನು ಲಿಂಕ್ ಮಾಡುವ ಭೂ ಘೋಷಣೆ (Land Declaration) ಕಾರ್ಯಗಳನ್ನು ಫೆಬ್ರವರಿ 25, 2026ರ ಸಂಜೆ ಒಳಗೆ ಪೂರ್ಣಗೊಳಿಸಲು ಸಹಕರಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಶಿರಸಿ | ಪ್ರಯಾಣಿಕರ ಗಮನಕ್ಕೆ: ಮಾರಿಕಾಂಬಾ ಜಾತ್ರೆ ಹಿನ್ನೆಲೆ ಬಸ್ ಸಂಚಾರ ಮಾರ್ಗ ಬದಲಾವಣೆ

ಹೆಚ್ಚಿನ ಮಾಹಿತಿಗಾಗಿ ರೈತರು ಮುಂಡಗೋಡ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿ ಶ್ರೀ ರಮೇಶ್ ಜಮಖಂಡಿ (ಮೊ. 9632841838) ಅಥವಾ ಪಾಳ ರೈತ ಸಂಪರ್ಕ ಕೇಂದ್ರದ ಅಧಿಕಾರಿ ಶ್ರೀ ರಾಮಪ್ಪ ನಡುವಿನಮನಿ (ಮೊ. 9844654413) ಅವರನ್ನು ಸಂಪರ್ಕಿಸಬಹುದಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...