ಮುಂಡಗೋಡ | ದಕ್ಷ ಪೊಲೀಸ್ ಅಧಿಕಾರಿ ಯಲ್ಲಾಲಿಂಗ ಕುನ್ನೂರ ಇನ್ನಿಲ್ಲ: ಅನಾರೋಗ್ಯದಿಂದ ನಿಧನ

Date:

ಮುಂಡಗೋಡ: ಇಲ್ಲಿನ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ (ಪಿ.ಎಸ್.ಐ) ಆಗಿ ಸೇವೆ ಸಲ್ಲಿಸುತ್ತಿದ್ದ ಯಲ್ಲಾಲಿಂಗ ಕುನ್ನೂರ(33) ಅವರು ಇಂದು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಕಳೆದ ಕೆಲವು ದಿನಗಳಿಂದ ಕಾಮಾಲೆ (Jaundice) ಮತ್ತು ಯಕೃತ್ತಿನ (Liver) ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದ ಅವರು ಇಂದು ಇಹಲೋಕ ತ್ಯಜಿಸಿದ್ದಾರೆ.

ಮೂಲತಃ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನವರಾದ ಯಲ್ಲಾಲಿಂಗ ಅವರು ಅತ್ಯಂತ ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿ ಎಂದು ಹೆಸರುವಾಸಿಯಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಂಡಗೋಡ ಪೊಲೀಸ್ ಠಾಣೆಗೆ ಎರಡನೇ ಬಾರಿಗೆ ಪಿ.ಎಸ್.ಐ ಆಗಿ ಅಧಿಕಾರ ಸ್ವೀಕರಿಸಿದ್ದ ಇವರು, ಈ ಹಿಂದೆ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿಯೂ ಯಶಸ್ವಿಯಾಗಿ ಸೇವೆ ಸಲ್ಲಿಸಿದ್ದರು.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಜಾತ್ರಾ ಮಹೋತ್ಸವಗಳಲ್ಲೂ ಜೂಜಿನ ಕರಿನೆರಳು; ಬೀಳಬೇಕಿದೆ ಬ್ರೇಕ್

ಕೇವಲ 33ನೇ ವಯಸ್ಸಿನಲ್ಲಿಯೇ ಜನಸ್ನೇಹಿ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದ ಅವರು, ಅಕಾಲಿಕ ಮರಣಕ್ಕೆ ತುತ್ತಾಗಿರುವುದು ಸಾರ್ವಜನಿಕರಲ್ಲಿ ಮತ್ತು ಪೊಲೀಸ್ ಇಲಾಖೆಯಲ್ಲಿ ತೀವ್ರ ಆಘಾತ ಮೂಡಿಸಿದೆ. ಮೃತರು ಒಬ್ಬ ಪುತ್ರಿಯನ್ನು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

ಯುವ ಅಧಿಕಾರಿಯ ಅಗಲಿಕೆಗೆ ಮುಂಡಗೋಡಿನ ಜನತೆ ಹಾಗೂ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳು ಮತ್ತು ಸಿಬ್ಬಂದಿ ಕಂಬನಿ ಮಿಡಿದಿದ್ದಾರೆ. ಒಬ್ಬ ದಕ್ಷ ಅಧಿಕಾರಿಯನ್ನು ಕಳೆದುಕೊಂಡ ಜಿಲ್ಲೆಯ ಪೊಲೀಸ್ ಪಡೆ ಶೋಕಸಾಗರದಲ್ಲಿ ಮುಳುಗಿದೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...