ಮುಂಡಗೋಡ | ಟಿಬೆಟಿಯನ್ ಕ್ಯಾಂಪ್‌ಗಳಲ್ಲಿ ಹೊಸ ವರ್ಷ ‘ಲೋಸಾರ್’ ಆಚರಣೆ ಆರಂಭ

Date:

ಟಿಬೆಟಿಯನ್ ಸಮುದಾಯದವರ ಪಾಲಿಗೆ ಅತ್ಯಂತ ಪವಿತ್ರ ಹಾಗೂ ಹೊಸ ವರ್ಷದ ಆರಂಭವನ್ನು ಸೂಚಿಸುವ ‘ಲೋಸಾರ್’ ಹಬ್ಬದ ಸಂಭ್ರಮ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನ ಟಿಬೆಟಿಯನ್ ವಸಾಹತುಗಳಲ್ಲಿ ಮನೆಮಾಡಿದೆ.

ಬುಧವಾರದಿಂದ (ಫೆಬ್ರವರಿ 18) ಟಿಬೆಟಿಯನ್ ಪಂಚಾಂಗದ 2153ನೇ ವರ್ಷದ ಆಚರಣೆಗಳು ವಿಧ್ಯುಕ್ತವಾಗಿ ಆರಂಭಗೊಂಡಿದ್ದು, ಕ್ಯಾಂಪ್‌ಗಳಲ್ಲಿ ಧಾರ್ಮಿಕ ಶ್ರದ್ಧೆ ಹಾಗೂ ಸಾಂಸ್ಕೃತಿಕ ಸಡಗರ ಮೇಳೈಸಿದೆ.

ಈ ಬಾರಿಯ ಹೊಸ ವರ್ಷವನ್ನು ಟಿಬೆಟಿಯನ್ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ‘ಫೈರ್ ಹಾರ್ಸ್’ (Fire Horse) ವರ್ಷವೆಂದು ಕರೆಯಲಾಗುತ್ತದೆ. ಟಿಬೆಟಿಯನ್ ಸಂಪ್ರದಾಯದಲ್ಲಿ ಪ್ರಕೃತಿಯ ಐದು ಮೂಲತತ್ವಗಳಾದ ಮರ, ಬೆಂಕಿ, ಭೂಮಿ, ಲೋಹ ಮತ್ತು ನೀರಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದರಲ್ಲಿ ‘ಬೆಂಕಿ’ಯ ತತ್ವವು ಚೈತನ್ಯ, ವೇಗ ಮತ್ತು ಪರಿವರ್ತನೆಯ ಸಂಕೇತವಾಗಿದ್ದು, ಈ ವರ್ಷ ಎಲ್ಲರಿಗೂ ಹೊಸ ಆಶಾದಾಯಕ ಬದಲಾವಣೆ ತರಲಿದೆ ಎಂಬುದು ಟಿಬೆಟಿಯನ್ ಜನರ ನಂಬಿಕೆಯಾಗಿದೆ. ಲೋಸಾರ್ ಹಬ್ಬಕ್ಕಾಗಿ ಕಳೆದ ಕೆಲ ದಿನಗಳಿಂದಲೇ ಸಿದ್ಧತೆಗಳು ಬಿರುಸಿನಿಂದ ಸಾಗಿದ್ದವು.

ಇಲ್ಲಿನ ಬೌದ್ಧ ಕ್ಯಾಂಪ್ ನಲ್ಲಿರುವ ಟಿಬೆಟಿಯನ್ನರು ತಮ್ಮ ಮನೆಗಳನ್ನು ಸ್ವಚ್ಛಗೊಳಿಸಿ, ಬಣ್ಣಬಣ್ಣದ ತೋರಣಗಳಿಂದ ಅಲಂಕರಿಸಿ ಹೊಸ ವರ್ಷದ ದಿನವನ್ನು ಸಂಭ್ರಮದಿಂದ ಆಚರಿಸುತ್ತಾರೆ. ಹಬ್ಬದ ದಿನದಂದು ಟಿಬೆಟಿಯನ್ ಬೌದ್ಧ ಮಂದಿರಗಳಲ್ಲಿ ವಿಶೇಷ ಪ್ರಾರ್ಥನೆಗಳು ಜರುಗುತ್ತವೆ.

ಬೌದ್ಧ ಭಿಕ್ಕುಗಳು ಮತ್ತು ಸಾರ್ವಜನಿಕರು ಬೌದ್ಧ ಮಂದಿರಗಳಿಗೆ ಭೇಟಿ ನೀಡಿ ಬೆಣ್ಣೆಯ ದೀಪಗಳನ್ನು ಬೆಳಗಿ. ಸಮುದಾಯದ ಹಿರಿಯರು ಮತ್ತು ಕಿರಿಯರು ಪರಸ್ಪರ ‘ತಾಶಿ ದೆಲೆಕ್’ (ಶುಭವಾಗಲಿ) ಎಂದು ಶುಭಾಶಯ ವಿನಿಮಯ ಮಾಡಿಕೊಳ್ಳುತ್ತಾರೆ.

1000534275

ಹಬ್ಬದ ಮೊದಲ ದಿನ ಧಾರ್ಮಿಕ ವಿಧಿವಿಧಾನಗಳಿಗೆ ಆದ್ಯತೆ ನೀಡಲಾಗುತ್ತದೆ, ಎರಡನೇ ದಿನ ಧರ್ಮಗುರುಗಳಾದ ದಲೈ ಲಾಮಾ ಅವರ ದೀರ್ಘಾಯುಷ್ಯಕ್ಕಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಗುವುದು ಎಂದು ಬೌದ್ಧ ಸನ್ಯಾಸಿಗಳು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ ? ಕಾರವಾರ | ಗಡಿಭಾಗದ ಕನ್ನಡ ಶಾಲೆಯಲ್ಲಿ ಪುಂಡರ ಅಟ್ಟಹಾಸ: ನೀರಿನ ತೊಟ್ಟಿಗೆ ಮೂತ್ರ ವಿಸರ್ಜಿಸಿ ವಿಕೃತಿ!

ದೂರದ ಊರುಗಳಲ್ಲಿ ಉದ್ಯೋಗ ಮತ್ತು ಶಿಕ್ಷಣಕ್ಕಾಗಿ ತೆರಳಿದ್ದ ಯುವಕರು ಈ ಹಬ್ಬಕ್ಕಾಗಿ ತವರಿಗೆ ಮರಳಿ ಬಂದು ಕುಟುಂಬದವರೊಂದಿಗೆ ಸಾಂಪ್ರದಾಯಿಕ ಉಡುಪುಗಳನ್ನು ಧರಿಸಿಕೊಂಡು ಸಂತೋಷದಿಂದ ಹೊಸ ವರ್ಷವನ್ನು ಬರಮಾಡಿಕೊಳ್ಳಲಿದ್ದಾರೆ. 

ರಾಜ್ಯದ ಮುಂಡಗೋಡ, ಬೈಲಕುಪ್ಪೆ, ಹುಣಸೂರು ಮಾತ್ರವಲ್ಲದೆ ಲಡಾಖ್ ಮತ್ತು ಧರ್ಮಶಾಲಾಗಳಲ್ಲಿಯೂ ಲೋಸಾರ್ ಹಬ್ಬದ ಸಡಗರ ಮುಗಿಲು ಮುಟ್ಟಿದೆ. ಶಾಂತಿ, ನೆಮ್ಮದಿ ಮತ್ತು ಸಮೃದ್ಧಿಯ ಬದುಕಿಗಾಗಿ ಪ್ರಾರ್ಥಿಸುವ ಮೂಲಕ ಟಿಬೆಟಿಯನ್ ಬಾಂಧವರು ತಮ್ಮ ಹೊಸ ವರ್ಷವನ್ನು ಶ್ರದ್ಧೆ ಮತ್ತು ಭಕ್ತಿಯಿಂದ ಬರಮಾಡಿಕೊಳ್ಳುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...