ಮುಂಡಗೋಡ | ಆನ್‌ಲೈನ್ ಪಾರ್ಟ್ ಟೈಮ್ ಜಾಬ್ ಆಮಿಷ: ವ್ಯಕ್ತಿಗೆ 1,57,800 ರೂಪಾಯಿ ವಂಚನೆ

Date:

ಉತ್ತರ ಕನ್ನಡ: ಟೆಲಿಗ್ರಾಮ್ ಮೂಲಕ ಆನ್‌ಲೈನ್ ಪಾರ್ಟ್ ಟೈಮ್ ಕೆಲಸ ನೀಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ಕಾರವಾರದ ಸೈಬರ್ ಕ್ರೈಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಮುಂಡಗೋಡ ತಾಲೂಕಿನ ಮಳಗಿ ನಿವಾಸಿಯಾದ ಅಕ್ಷಯ ಸುರೇಶ ರೇವಣಕರ (33) ಎಂಬುವವರು ವಂಚನೆಗೊಳಗಾದ ವ್ಯಕ್ತಿ ಎಂದು ತಿಳಿದುಬಂದಿದೆ.

​ದಿನಾಂಕ 30-12-2025 ರಂದು ಪಿರ್ಯಾದಿದಾರರು ಟೆಲಿಗ್ರಾಮ್ ಬಳಸುತ್ತಿದ್ದಾಗ, ‘Nisha Mehta’ ಎಂಬ ಐಡಿಯಿಂದ ಪಾರ್ಟ್ ಟೈಮ್ ಕೆಲಸದ ಜಾಹೀರಾತು ಬಂದಿತ್ತು. ಅದನ್ನು ಕ್ಲಿಕ್ ಮಾಡಿದಾಗ ಅವರು ‘Task 3 Bajaj VIP’ ಎಂಬ ಗ್ರೂಪ್‌ಗೆ ಸೇರ್ಪಡೆಯಾಗಿದ್ದರು.

ಈ ಗ್ರೂಪ್‌ನ ಅಡ್ಮಿನ್ ಆಗಿದ್ದ ‘Suresh Malhotra’ ಎಂಬ ವ್ಯಕ್ತಿಯು ಕೆಲಸದ ಬಗ್ಗೆ ಮಾಹಿತಿ ನೀಡಿ, ಒಂದು ವೆಬ್‌ಸೈಟ್ ಲಿಂಕ್ ಕಳುಹಿಸಿದ್ದನು. ಅದರಲ್ಲಿ ವಿವಿಧ ಕಂಪನಿಗಳ ಉತ್ಪನ್ನಗಳಿಗೆ ರೇಟಿಂಗ್ ಮತ್ತು ರಿವ್ಯೂ ನೀಡುವ ಕೆಲಸವನ್ನು ಅಕ್ಷಯ ಅವರಿಗೆ ನೀಡಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

​ನಂತರ ದಿನಾಂಕ 31-12-2025 ರಂದು ‘Sizzle’ ಎಂಬ ಹೆಸರಿನ ಮತ್ತೊಂದು ವೆಬ್‌ಸೈಟ್ ಮೂಲಕ ರಿವ್ಯೂ ನೀಡುವ ಕೆಲಸ ಮುಂದುವರೆಸಿದಾಗ, ಅಕ್ಷಯ ಅವರ ಖಾತೆಗೆ ಲಾಭಾಂಶದ ರೂಪದಲ್ಲಿ 500 ರೂಪಾಯಿ ಜಮಾ ಆಗಿತ್ತು. ಇದರಿಂದ ನಂಬಿಕೆ ಬಂದ ಅಕ್ಷಯ ಅವರಿಗೆ, ಹೆಚ್ಚಿನ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಗಳಿಸಬಹುದು ಎಂದು ಆರೋಪಿಗಳು ನಂಬಿಸಿದ್ದರು. ಇದನ್ನು ನಂಬಿದ ಪಿರ್ಯಾದಿದಾರರು ಮೊದಲು 700 ರೂಪಾಯಿ ಹೂಡಿಕೆ ಮಾಡಿದಾಗ ಅವರಿಗೆ 920 ರೂಪಾಯಿ ವಾಪಸ್ ಬಂದಿದೆ ಇದನ್ನು ನಂಬಿ

ಈ ಸುದ್ದಿ ಓದಿದ್ದೀರಾ? ಮುಂಡಗೋಡ | ಸಬ್ ರಿಜಿಸ್ಟ್ರಾರ್ ಆಫೀಸ್ ನಲ್ಲಿ ಡಿಜಿಟಲ್ ಇ-ಸ್ಟ್ಯಾಂಪ್ ಕುರಿತು ತರಬೇತಿ ಕಾರ್ಯಾಗಾರ ಆಯೋಜನೆ

​ಹೆಚ್ಚಿನ ಲಾಭದ ಆಸೆಗೆ ಬಿದ್ದ ಅಕ್ಷಯ ಅವರು ದಿನಾಂಕ 01-01-2026 ರಿಂದ 02-01-2026 ರ ಅವಧಿಯಲ್ಲಿ ಹಂತ ಹಂತವಾಗಿ ವಿವಿಧ ಬ್ಯಾಂಕ್ ಖಾತೆಗಳಿಗೆ ಒಟ್ಟು 1,57,800 ರೂಪಾಯಿಗಳನ್ನು ಜಮಾ ಮಾಡಿದ್ದಾರೆ.

ಆದರೆ ಹಣ ಪಾವತಿಸಿದ ನಂತರ ಆರೋಪಿಗಳು ಅಕ್ಷಯ ಅವರಿಗೆ ಯಾವುದೇ ಲಾಭಾಂಶವನ್ನಾಗಲಿ ಅಥವಾ ಅವರು ಹೂಡಿಕೆ ಮಾಡಿದ ಅಸಲು ಹಣವನ್ನಾಗಲಿ ಮರಳಿ ನೀಡದೆ ವಂಚಿಸಿದ್ದಾರೆ. ತಾನು ಮೋಸ ಹೋಗಿರುವುದು ತಿಳಿದುಬಂದ ಕೂಡಲೇ ಅವರು ಕಾರವಾರದ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...