ಮುಂಡಗೋಡ | ಪೊಲೀಸ್ ಕಾರ್ಯಾಚರಣೆ: ₹8 ಲಕ್ಷ ಮೌಲ್ಯದ ಚರಸ್‌ ವಶ, ಆರೋಪಿ ಸಚಿನ್ ಬಂಧನ

Date:

ಮುಂಡಗೋಡ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ, ಸುಮಾರು ₹8 ಲಕ್ಷ ಮೌಲ್ಯದ ನಿಷೇಧಿತ ಮಾದಕ ವಸ್ತುವಾದ ಚರಸ್‌ನ್ನು (ಗಾಂಜಾ ಗೋಂದು) ವಶಪಡಿಸಿಕೊಂಡು, ಆರೋಪಿಯನ್ನು ಬಂಧಿಸಿರುವ ಘಟನೆ ನಡೆದಿದೆ. ಮುಂಡಗೋಡ ಪೊಲೀಸ್‌ ಠಾಣೆಯಲ್ಲಿ NDPS ಕಾಯ್ದೆ 1985ರ ಕಲಂ 8(c) r/w 20(b)(ii)(B) ಅಡಿ ಪ್ರಕರಣ ದಾಖಲಾಗಿದೆ.

ಮುಂಡಗೋಡ ಪೊಲೀಸ್ ಠಾಣೆಯ CPI ರಂಗನಾಥ ನೀಲಮ್ಮನವರ ಅವರ ನೇತೃತ್ವದಲ್ಲಿ ಈ ದಾಳಿ ನಡೆದಿದೆ, ಆಪಾದಿತನಾದ ಸಚಿನ್, ತಂದೆ ಟೆಕ್‌ಬಹದ್ದೂರ ಗೋರ್ಖಾ, ಇಂಜಿನೀಯರ್ ವೃತ್ತಿ ಸಾ|| ಸುಭಾಷ್ ನಗರ ಮುಂಡಗೋಡ, ‌ನಿವಾಸಿ, ಈತನು ನಿಷೇಧಿತ ಮಾದಕ ವಸ್ತುವಾದ ಚರಸ್ ಅನ್ನು ಯಾವುದೇ ಪಾಸ್ ಅಥವಾ ಪರವಾನಗಿ ಇಲ್ಲದೆ ಅಕ್ರಮವಾಗಿ ಲಾಭ ಗಳಿಸುವ ಉದ್ದೇಶದಿಂದ ಸಾಗಿಸುತ್ತಿದ್ದ ಎನ್ನಲಾದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಅಬಕಾರಿ ಇಲಾಖೆಯ ಕಾರ್ಯಾಚರಣೆ; ಅಕ್ರಮ ಮದ್ಯ ಸೇರಿ ₹7 ಲಕ್ಷ ಮೌಲ್ಯದ ವಸ್ತುಗಳು ಜಪ್ತಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುಮಾರು ₹8,00,000 ಮೌಲ್ಯದ 781 ಗ್ರಾಂ ತೂಕದ ಚರಸ್‌ನನ್ನು ಮಾರಾಟ ಮಾಡಲು, ಆರೋಪಿತನು ಹೀರೋ ಕಂಪನಿಯ ಕಪ್ಪು ಬಣ್ಣದ ಸ್ಪ್ಲೆಂಡರ್ ಮೋಟಾರ್‌ಸೈಕಲ್ (ನಂಬರ: KA-31/ED-9939) ಮೇಲೆ ಮುಂಡಗೋಡ ಕಡೆಗೆ ಬರುತ್ತಿದ್ದಾಗ, ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ.

ಈ ಘಟನೆ ಮುಂಡಗೋಡ ಪಟ್ಟಣದ ಶಿರಸಿ–ಹುಬ್ಬಳ್ಳಿ ಮಾರ್ಗ (ರಾಜ್ಯ ಹೆದ್ದಾರಿ–69) ಮೇಲಿನ ಕೆಎಸ್‌ಆರ್‌ಟಿಸಿ ಬಸ್ ಡಿಪೋ ಹತ್ತಿರ ನಡೆದಿದೆ. ಮುಂಡಗೋಡ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ದೀಪನ್ ಎಮ್,ಎನ್ ಐ,ಪಿ,ಎಸ್ ಮಾನ್ಯ ಪೊಲೀಸ್ ಅಧೀಕ್ಷಕರು, ಉತ್ತರ ಕನ್ನಡ ಜಿಲ್ಲೆ, ಕೃಷ್ಣಮೂರ್ತಿ ಜಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಕಾರವಾರ, ಜಗದೀಶ ನಾಯ್ಕ ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಕಾರವಾರ, ಶ್ರೀಮತಿ ಗೀತಾ ಪಾಟೀಲ ಡಿ.ಎಸ್.ಪಿ ಶಿರಸಿ ರವರ ಮಾರ್ಗದರ್ಶನದಲ್ಲಿ ಮುಂಡಗೋಡ ಪೋಲಿಸ್ ಠಾಣೆಯ CPI ರಂಗನಾಥ ನಿಲಮ್ಮನವರ ಅವರು, PSI ಯಲ್ಲಾಲಿಂಗ ಕುನ್ನುರ ಅವರು, ಸಿಬ್ಬಂದಿಗಳಾದ ಕೋಟೇಶ ನಾಗರೊಳ್ಳಿ, ಮಹಾಂತೇಶ ಕುಂದೋಳ, ಅಣ್ಣಪ್ಪ ಬಡಿಗೇರ, ಶಿವಾನಂದ ದಾನಣ್ಣನವರ, ಅನ್ವರ್ ಬಮ್ಮಿಗಟ್ಟಿ, ಗುರು ಬಿಶಟ್ಟಪ್ಪನವರ ಅವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...