ಮುಂಡಗೋಡ | ಯುವರತ್ನ ಯುವ ಒಕ್ಕೂಟ–ಎಲ್‌ವಿಕೆ ವಿಡಿಸಿ ಅವರಿಂದ ರಂಗೋಲಿ ಸ್ಪರ್ಧೆ ಆಯೋಜನೆ

Date:

ಮುಂಡಗೋಡ ತಾಲ್ಲೂಕಿನ ಇಂದಿರಾನಗರ ಮಳಗಿ ಗ್ರಾಮದಲ್ಲಿ ರವಿವಾರದಂದು ಸಂವಿಧಾನ ದಿನಾಚರಣೆ ಅಂಗವಾಗಿ ಯುವರತ್ನ ಯುವ ಒಕ್ಕೂಟ, ಮತ್ತು ಲೊಯೋಲಾ ವಿಕಾಸ ಕೇಂದ್ರ ವಿಡಿಸಿ, ಇವರ ಸಂಯುಕ್ತ ಆಶ್ರಯದಲ್ಲಿ ಯುವತಿಯರಿಗಾಗಿ ರಂಗೋಲಿ ಸ್ಪರ್ಧೆ ಹಾಗೂ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸ್ಥಳೀಯ ಮಹಿಳೆಯರು, ಊರಿನ ಹಿರಿಯರು ಮತ್ತು ಮಕ್ಕಳು ಸೇರಿದಂತೆ ಒಟ್ಟು 36 ಜನ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ರಂಗೋಲಿ ಸ್ಪರ್ಧೆಯಲ್ಲಿ ಭಾಗವಹಿಸಿದ ಯುವತಿಯರು ಸಂವಿಧಾನದ ಅಂಶಗಳನ್ನು ಪ್ರತಿಬಿಂಬಿಸುವ ಚಿತ್ರಗಳನ್ನು, ಸಂವಿಧಾನ ಪೀಠಿಕೆಯನ್ನು ಮತ್ತು ಬಾಬಾಸಾಹೇಬ ಅಂಬೇಡ್ಕರ್ ಅವರ ಭಾವಚಿತ್ರವನ್ನು ಸ್ಪರ್ಧಿಗಳು ಬಿಡಿಸಿದರು. ಈ ಸ್ಪರ್ಧೆಯ ಉದ್ದೇಶ ಮಹಿಳೆಯರಲ್ಲಿ ಸೃಜನಶೀಲತೆಯ ಜೊತೆಗೆ ಪ್ರಸ್ತುತ ದಿನಗಳಲ್ಲಿ ಸಂವಿಧಾನ ಎಷ್ಟು ಮಹತ್ವದ್ದಾಗಿದೆ ಎಂಬುದನ್ನು ತಿಳಿಸುವದಾಗಿತ್ತು ಎಂದು ಆಯೋಜಕರು ಹೇಳಿದರು.

ಕಾರ್ಯಕ್ರಮದಲ್ಲಿ ಶ್ರೀದೇವಿಯವರು ಸಂವಿಧಾನದ ಪೀಠಿಕೆಯನ್ನು ಓದಿ, ಸಂವಿಧಾನ ಮೌಲ್ಯಗಳ ಮಹತ್ವವನ್ನು ಹಂಚಿಕೊಂಡರು. ಸಂಯೋಜಕರಾದ ಮಂಗಳಾ ಮೋರೆ ಅವರು ಸಂವಿಧಾನದ ಉಗಮ, ಅದರ ತತ್ವಗಳು ಮತ್ತು ನಾಗರಿಕರ ಮೂಲಭೂತ ಕರ್ತವ್ಯಗಳ ಕುರಿತು ಮಾಹಿತಿ ನೀಡಿದರು. ದೀಪಾ ಕೊಳುರ ಅವರು ಬಾಬಾಸಾಹೇಬ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಾಗೃತಿ ಗೀತೆಯನ್ನು ಹೇಳಿಕೊಟ್ಟರು. ಹಾಗೂ ಮಹಿಳೆಯರಿಗಾಗಿ ಇತರೆ ಮನರಂಜನಾ ಚಟುವಟಿಕೆಗಳನ್ನು ಸಹ ಆಯೋಜನೆ ಮಾಡಲಾಗಿತ್ತು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಯಲ್ಲಾಪುರ | ರಾತ್ರಿ ಪೂರ್ತಿ ಅಕ್ರಮವಾಗಿ ಮರಳು ಸಾಗಾಟ; ಅರಣ್ಯ ಇಲಾಖೆಯ ಮೌನಕ್ಕೆ ಸಾರ್ವಜನಿಕರ ಆಕ್ರೋಶ

ಕಾರ್ಯಕ್ರಮದಲ್ಲಿ ಚವಡಳ್ಳಿ BFT ಸದಸ್ಯ ಯುವರಾಜ ಆರ್‌.ಕೆ, ಲೀಲಾವತಿ ರಾಯ್ಕರ್, ಸ್ನೇಹ ಸ್ವಸಹಾಯ ಸಂಘದ ರೂಪ ಮಾಳೆನವರ್, ಹಿರಿಯರಾದ ಮೈಲಾರಪ್ಪ ಕಂಬಳಿ, ಹನುಮಂತಪ್ಪ ಗಂಜಿಗಟ್ಟಿ, ಚಿಗುರು ವಸತಿ ನಿಲಯದ ವಾರ್ಡನ್ ಜ್ಯೋತಿ ಹಾನಗಲ್, ಸಿಬ್ಬಂದಿಗಳಾದ ಮಂಗಳಾ ಮೋರೆ, ದೀಪಾ ಕೊಳುರ, ಶ್ರೀದೇವಿ ಭದ್ರಾಪುರ, ಸಮುದಾಯದ ವಿಡಿಸಿ ಸದಸ್ಯರು ಸೇರಿದಂತೆ ಮಹಿಳೆಯರು ಮತ್ತು ಮಕ್ಕಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...