ಮುಂಡಗೋಡ | ‘ಡಿಜಿಟಲ್ ಅರೆಸ್ಟ್’ ಜಾಲಕ್ಕೆ ಬಿದ್ದ ಟಿಬೆಟಿಯನ್ ನಿವೃತ್ತ ಶಿಕ್ಷಕ; 1.61 ಕೋಟಿ ರೂ. ದೋಚಿದ ಸೈಬರ್ ವಂಚಕರು!

Date:

ಮುಂಡಗೋಡ: ಮುಂಬೈ ಪೊಲೀಸರ ಹೆಸರಿನಲ್ಲಿ ಬಂದ ವಾಟ್ಸಪ್ ಕರೆಗೆ ಬೆದರಿ, ಇಲ್ಲಿನ ಟಿಬೆಟಿಯನ್ ಕಾಲೋನಿಯ ನಿವೃತ್ತ ಶಿಕ್ಷಕರೊಬ್ಬರು ಬರೋಬ್ಬರಿ 1.61 ಕೋಟಿ ರೂಪಾಯಿಯನ್ನು ಕಳೆದುಕೊಂಡು ಸೈಬರ್ ವಂಚಕರ ಜಾಲಕ್ಕೆ ಸಿಲುಕಿದ ಘಟನೆ ಬೆಳಕಿಗೆ ಬಂದಿದೆ.

ಮುಂಡಗೋಡಿನ ಕ್ಯಾಂಪ್ ನಂಬರ್ 8ರಲ್ಲಿ ವಾಸವಿರುವ ಪಾಲ್ಡೆನ್ ಲೋಸಾಂಗ್ ಚೋಧಾಕ್ ( Palden S/o Losang Chodhak (72 ವರ್ಷ) ಎಂಬುವವರೇ ಈ ವಂಚನೆಗೆ ಒಳಗಾದವರು. ಇವರು ಕೇಂದ್ರ (Central School) ಶಾಲೆಯಲ್ಲಿ ಶಿಕ್ಷಕರಾಗಿ ನಿವೃತ್ತರಾಗಿದ್ದು, ವಂಚಕರು ಇವರನ್ನು ‘ಡಿಜಿಟಲ್ ಅರೆಸ್ಟ್’ ಮಾಡುವ ಮೂಲಕ ಹಂತ ಹಂತವಾಗಿ ಹಣವನ್ನು ದೋಚಿದ್ದಾರೆ.

ಘಟನೆಯ ವಿವರ: ಕಳೆದ ನವೆಂಬರ್ 29, 2025 ರಂದು ಸಂತ್ರಸ್ತ ಪಲ್ಡೆನ್ ಅವರಿಗೆ ವಾಟ್ಸಪ್ ಕರೆ ಮಾಡಿದ ವ್ಯಕ್ತಿಯೊಬ್ಬ, ತಾನು ಮಹಾರಾಷ್ಟ್ರ ರಾಜ್ಯದ ಕೋಲಬಾ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಎಂದು ಪರಿಚಯಿಸಿಕೊಂಡಿದ್ದಾನೆ. ಮುಂಬೈನಲ್ಲಿ ಓ.ಎಮ್ ಅಬ್ದುಲಸಲಾಂ ಎಂಬ ಉಗ್ರವಾದಿ ನಾಯಕನನ್ನು ಬಂಧಿಸಲಾಗಿದ್ದು, ಆತನ ಬಳಿ ಸಿಕ್ಕ ನೂರಾರು ಎ.ಟಿ.ಎಂ ಕಾರ್ಡ್‌ಗಳಲ್ಲಿ ಪಲ್ಡೆನ್ ಅವರ ಹೆಸರಿನ ಕೆನರಾ ಬ್ಯಾಂಕ್ ಕಾರ್ಡ್ ಕೂಡ ಇದೆ ಎಂದು ನಂಬಿಸಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಷ್ಟೇ ಅಲ್ಲದೆ, ನಿಮ್ಮ ಬ್ಯಾಂಕ್ ಖಾತೆಯ ಮೂಲಕ ಕೋಟ್ಯಂತರ ರೂಪಾಯಿ ಮನಿ ಲಾಂಡ್ರಿಂಗ್ ನಡೆದಿದ್ದು, ನಿಮ್ಮ ಮೇಲೆ ಗಂಭೀರ ಪ್ರಕರಣ ದಾಖಲಾಗಿದೆ ಎಂದು ಹೆದರಿಸಿದ್ದಾನೆ. ವಂಚಕನು ಪೊಲೀಸ್ ಸಮವಸ್ತ್ರ ಧರಿಸಿ ವಿಡಿಯೋ ಕರೆ ಮಾಡಿದ್ದಲ್ಲದೆ, ಪೊಲೀಸ್ ಠಾಣೆಯಂತಹ ವಾತಾವರಣವನ್ನು ತೋರಿಸಿ ಸಂತ್ರಸ್ತರನ್ನು ಪೂರ್ತಿಯಾಗಿ ನಂಬಿಸಿದ್ದಾನೆ.

ಪಲ್ಡೆನ್ ಅವರ ಹೆಸರಿನಲ್ಲಿ ಕೋಟಿಗಟ್ಟಲೆ ಹಣ ವರ್ಗಾವಣೆಯಾಗಿರುವ ನಕಲಿ ಬ್ಯಾಂಕ್ ಸ್ಟೇಟ್‌ಮೆಂಟ್ ಕೂಡ ಕಳುಹಿಸಿ, ಅರೆಸ್ಟ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ತಾನು ಯಾವುದೇ ತಪ್ಪು ಮಾಡಿಲ್ಲ ಎಂದು ಪಲ್ಡೆನ್ ಅವರು ಹೇಳಿದಾಗ, ತನಿಖೆಯ ನೆಪದಲ್ಲಿ ನಿಮ್ಮ ಖಾತೆಯಲ್ಲಿರುವ ಹಣವನ್ನು ‘ನ್ಯಾಷನಲ್ ಫಂಡ್’ಗೆ ಜಮಾ ಮಾಡಬೇಕು, ತನಿಖೆ ಮುಗಿದ ನಂತರ ಹಣ ವಾಪಸ್ ನೀಡಲಾಗುವುದು ಎಂದು ವಂಚಕರು ನಂಬಿಸಿದ್ದಾರೆ.

ಇ ಸುದ್ದಿ ಓದಿದ್ದೀರಾ? ಮುಂಡಗೋಡ | ಅಕ್ರಮ ಇಟ್ಟಿಗೆ ಭಟ್ಟಿಗಳ ವಿರುದ್ಧ ವರದಿಯಾದರೂ ಅಲುಗಾಡದ ಆಡಳಿತ: ಅಧಿಕಾರಿಗಳ ‘ಮೌನ’ಕ್ಕೆ ಕಾರಣವೇನು?

ವಿಷಯವನ್ನು ಯಾರೊಂದಿಗೂ ಹಂಚಿಕೊಳ್ಳದಂತೆ ಮತ್ತು ಪ್ರತಿ ಎರಡು ಗಂಟೆಗೊಮ್ಮೆ ವಾಟ್ಸಪ್ ಮೂಲಕ ವರದಿ ನೀಡುವಂತೆ (Good Morning, Good Night ಸಂದೇಶಗಳು) ಆದೇಶಿಸಿ ಅವರನ್ನು ಮಾನಸಿಕವಾಗಿ ತಮ್ಮ ಹಿಡಿತಕ್ಕೆ ತೆಗೆದುಕೊಂಡಿದ್ದಾರೆ.

ಈ ಸುಳ್ಳು ಬೆದರಿಕೆಗೆ ಹೆದರಿದ ಪಲ್ಡೆನ್ ಅವರು ತಮ್ಮ ಕೆನರಾ ಬ್ಯಾಂಕ್, ಎಸ್‌ಬಿಐ ಮತ್ತು ಕೆಡಿಸಿಸಿ ಬ್ಯಾಂಕ್‌ನಲ್ಲಿದ್ದ ಸ್ಥಿರ ಠೇವಣಿ (FD) ಹಣವನ್ನು ಬಿಡಿಸಿಕೊಂಡು ಹಾಗೂ ಪರಿಚಿತರಿಂದ ಸಾಲ ಪಡೆದು, ಡಿಸೆಂಬರ್ 3 ರಿಂದ ಡಿಸೆಂಬರ್ 11ರ ಅವಧಿಯಲ್ಲಿ ವಿವಿಧ ಬ್ಯಾಂಕ್ ಖಾತೆಗಳಿಗೆ ಒಟ್ಟು 1,61,00,047 ರೂಪಾಯಿಗಳನ್ನು ವರ್ಗಾಯಿಸಿದ್ದಾರೆ. ತದನಂತರ ತಾನು ವಂಚನೆಗೆ ಒಳಗಾಗಿರುವುದು ತಿಳಿದು ಬಂದಿದ್ದು, ಇದೀಗ ಕಾರವಾರ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...