ಮುಂಡಗೋಡ | 108 ಅಂಬ್ಯುಲೆನ್ಸ್‌ನಲ್ಲಿ ಸುರಕ್ಷಿತ ಹೆರಿಗೆ: ಗಂಡು ಮಗುವಿಗೆ ಜನ್ಮ ನೀಡಿದ ತಾಯಿ

Date:

ಮುಂಡಗೋಡ: ತುರ್ತು ಸಂದರ್ಭದಲ್ಲಿ 108 ಅಂಬ್ಯುಲೆನ್ಸ್ ಸಿಬ್ಬಂದಿಯ ಸಮಯಪ್ರಜ್ಞೆಯಿಂದಾಗಿ ಗರ್ಭಿಣಿಯೊಬ್ಬರು ಚಲಿಸುವ ವಾಹನದಲ್ಲೇ ಸುರಕ್ಷಿತವಾಗಿ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಮುಂಡಗೋಡ ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ಅತ್ತಿವೇರಿ ಗ್ರಾಮದ ನಿವಾಸಿ ಶ್ರೀಮತಿ ಬಿಬಿ ಆಯಿಷಾ ಅವರಿಗೆ ಇಂದು ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ಕೂಡಲೇ 108 ತುರ್ತು ಸೇವೆಗೆ ಕರೆ ಮಾಡಿ ಮಾಹಿತಿ ನೀಡಿದ್ದರು.

ಕರೆ ಬಂದ ತಕ್ಷಣವೇ ಕಾರ್ಯಪ್ರವೃತ್ತರಾದ ತುರ್ತು ವೈದ್ಯಕೀಯ ತಂತ್ರಜ್ಞರಾದ ಧನರಾಜ್ ಸಿ. ಮತ್ತು ಚಾಲಕ ಕೆಂಚೇಶ್ ಅವರು ಅಂಬ್ಯುಲೆನ್ಸ್‌ನೊಂದಿಗೆ ಸ್ಥಳಕ್ಕೆ ಧಾವಿಸಿ, ಗರ್ಭಿಣಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರು. ಆದರೆ ಆಸ್ಪತ್ರೆಗೆ ತಲುಪುವ ಮೊದಲೇ ಹುನಗುಂದ ಕ್ರಾಸ್ ಬಳಿ ಗರ್ಭಿಣಿಗೆ ಹೆರಿಗೆ ನೋವು ಉಲ್ಬಣಗೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪರಿಸ್ಥಿತಿಯ ಗಂಭೀರತೆಯನ್ನು ಅರಿತ ವೈದ್ಯಕೀಯ ತಂತ್ರಜ್ಞ ಧನರಾಜ್ ಅವರು ಚಾಲಕನ ನೆರವಿನೊಂದಿಗೆ ಅಂಬ್ಯುಲೆನ್ಸ್‌ನಲ್ಲೇ ಸುರಕ್ಷಿತವಾಗಿ ಹೆರಿಗೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಾರವಾರ | ಶಿರವಾಡ ಡಂಪಿಂಗ್ ಯಾರ್ಡ್‌ನಲ್ಲಿ ಭಾರಿ ಬೆಂಕಿ – ಆತಂಕದಲ್ಲಿ ಸ್ಥಳೀಯ ನಿವಾಸಿಗಳು

ಬಿಬಿ ಆಯಿಷಾ ಅವರು ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿದ್ದು, ನಂತರ ತಾಯಿ ಮತ್ತು ಮಗುವನ್ನು ಮುಂಡಗೋಡ ತಾಲೂಕಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಸ್ತುತ ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಸಮಯಕ್ಕೆ ಸರಿಯಾಗಿ ಸ್ಪಂದಿಸಿ ಮಾನವೀಯತೆ ಮೆರೆದ 108 ಸಿಬ್ಬಂದಿಯ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...