ಮುಂಡಗೋಡ | ಪರವಾನಗಿ ಇಲ್ಲದೆ ಮರಳು ಸಂಗ್ರಹ; ಅಧಿಕಾರಿಗಳ ವಿರುದ್ಧ ಜನಾಕ್ರೋಶ

Date:

ಮುಂಡಗೋಡ ತಾಲೂಕಿನಲ್ಲಿ ಮರಳು ಸಂಗ್ರಹಣೆ ಅಡ್ಡೆಗಳನ್ನು ಸ್ಥಾಪಿಸಿ ಉಸುಕು ಮತ್ತು ಎಂ ಸ್ಯಾಂಡ್ ಮಾರಾಟ ಮಾಡುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅಂದಾಜಿನ ಪ್ರಕಾರ, ಹುಬ್ಬಳ್ಳಿ–ಶಿರಸಿ ಮಾರ್ಗದ ಪಕ್ಕದಲ್ಲೇ ಸದ್ಯಕ್ಕೆ ಸುಮಾರು 17 ಮರಳು ಮತ್ತು ಎಂ-ಸ್ಯಾಂಡ್ ಅಡ್ಡೆಗಳು ಕಾರ್ಯನಿರ್ವಹಿಸುತ್ತಿವೆ. ಅದರಲ್ಲಿ ಕಾನೂನುಬದ್ಧವಾಗಿ ಅನುಮತಿ ಪಡೆದದ್ದು ಕೇವಲ ಒಂದು ಅಡ್ಡೆ ಮಾತ್ರ ಎನ್ನುವುದು ಮೂಲಗಳಿಂದ ತಿಳಿದುಬಂದಿದೆ. ಉಳಿದ ಇತರ ಅಡ್ಡೆಗಳು ಯಾವುದೇ ಅಧಿಕೃತ ಅನುಮತಿ ಪಡೆಯದೇ ದಂಧೆ ನಡೆಸುತ್ತಿರುವುದಾಗಿ ಆರೋಪ ಕೇಳಿಬಂದಿದೆ. ಇಷ್ಟು ರಾಜಾರೋಷವಾಗಿ ಮರಳುದಂಧೆ ನಡೆಯುತ್ತಿದ್ದರೂ ಅಧಿಕಾರಿಗಳು ಮಾತ್ರ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳ ಈ ನಡೆ ಜನರಲ್ಲಿ ಅನುಮಾನ ಮೂಡುವಂತೆ ಮಾಡಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಮರಳು ಗಣಿಗಾರಿಕೆಗೆ ಹಲವಾರು ಗೊಂದಲಗಳಿವೆ. ಬೇರೆ ಜಿಲ್ಲೆಗಳಲ್ಲಿ ಸಿಆರ್‌ಝಡ್ ರಹಿತ ವಲಯದಲ್ಲಿ ಮರಳು ಗಣಿಗಾರಿಕೆಗೆ ಅವಕಾಶ ಸಿಕ್ಕಿದೆ. ಆದರೆ ಉತ್ತರ ಕನ್ನಡದಲ್ಲಿ ಸಿಆರ್‌ಝಡ್ ವಲಯದಲ್ಲಿ ಮಾತ್ರ ಮರಳು ದಿಬ್ಬಗಳು ಹೆಚ್ಚಿದ್ದು ಇಲ್ಲಿ ಅನುಮತಿ ಸಿಕ್ಕಿಲ್ಲ. ಒಂದು ಸಲ ಅನುಮತಿ ಸಿಕ್ಕರೆ ಮತ್ತೊಂದು ಸಲ ಅನುಮತಿ ಸಿಗುವುದಿಲ್ಲ ಈ ಗೊಂದಲದಿಂದ ಮರಳು ವ್ಯಾಪಾರಸ್ಥರು ಜಿಲ್ಲೆಯ ಮರಳನ್ನು ನೆಚ್ಚದೆ ತಾಲ್ಲೂಕಿಗೆ ಸಮೀಪವಿರುವ ಪಕ್ಕದ ಸ್ಥಳಗಳಿಂದ ಅದರಲ್ಲೂ ಮುಖ್ಯವಾಗಿ ಶಿರಹಟ್ಟಿ, ಮಾಗಡಿ, ಯರಗಟ್ಟಿ ಹಾಗೂ ಲಕ್ಷ್ಮೇಶ್ವರ ಭಾಗಗಳಿಂದ ಟ್ರ್ಯಾಕ್ಟರ್ ಹಾಗೂ ಲಾರಿಗಳ ಮೂಲಕ ಪ್ರತಿದಿನ ಮರಳು ಮತ್ತು ಎಂ-ಸ್ಯಾಂಡ್ ತಂದು ತಾಲ್ಲೂಕಿನ ವ್ಯಾಪ್ತಿಯಲ್ಲಿ ಮುಕ್ತವಾಗಿ ಮಾರಾಟ ಮಾಡುತ್ತಿದ್ದಾರೆ.

ಇದರ ಪರಿಣಾಮವಾಗಿ ಸರ್ಕಾರಕ್ಕೆ ತೆರಿಗೆ ನಷ್ಟವಾಗುವುದರ ಜೊತೆಗೆ ಸ್ಥಳೀಯ ರಸ್ತೆಗಳು ಹಾನಿಗೊಳಗಾಗುತ್ತಿವೆ. ಮುಂಜಾನೆ ಮತ್ತು ಹಗಲು ಹೊತ್ತಿನಲ್ಲಿ ಮರಳು ಸಾಗಣೆ ವಾಹನಗಳು ತಾಲ್ಲೂಕಿನ ಮುಖ್ಯರಸ್ತೆಗಳಲ್ಲಿ ಸಂಚರಿಸುವುದರಿಂದ ಧೂಳಿನಲ್ಲೆ ದ್ವಿಚಕ್ರ ವಾಹನ ಸವಾರರು ಸಂಚಿರಸಬೇಕಾದ ಪರಿಸ್ಥಿತಿ ಇದೆ. ಮತ್ತು ಪಟ್ಟಣದ ಪ್ರಮುಖ ರಸ್ತೆಗಳು ಹಾಗೂ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳು ಕೂಡ ಇದರಿಂದ ಹಾಳಾಗುತ್ತಿವೆ. ಮತ್ತು ನೇರವಾಗಿ ಇದು ಪರಿಸರದ ಮೇಲೂ ದುಷ್ಪರಿಣಾಮ ಬೀರುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ: ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿಗಳ ಸೂಚನೆ.

ಕಾನೂನು ಸ್ಪಷ್ಟ — ಅನುಮತಿ ಮತ್ತು ತೆರಿಗೆ ಕಡ್ಡಾಯ ಕರ್ನಾಟಕ ಗಣಿಗಾರಿಕೆ ಮತ್ತು ಭೂವಿಜ್ಞಾನ ಇಲಾಖೆಯ ನಿಯಮಾವಳಿ ಪ್ರಕಾರ, ಮರಳು ಅಥವಾ ಎಂ-ಸ್ಯಾಂಡ್ ಸಂಗ್ರಹಣೆ, ಸಾಗಾಟ ಹಾಗೂ ಮಾರಾಟ ಮಾಡಲು ಡೀಲರ್ ಲೈಸೆನ್ಸ್ ಮತ್ತು ಟ್ರಾನ್ಸಿಟ್ ಪಾಸ್ ಕಡ್ಡಾಯ. ಬೇರೆ ಜಿಲ್ಲೆಯಿಂದ ಮರಳು ತರಬೇಕಾದರೆ ಮೂಲ ಜಿಲ್ಲೆಯಿಂದ ರಾಯಲ್ಟಿ ಪಾವತಿಸಿದ ರಶೀದಿ ಮತ್ತು ಡಿಸ್ಪ್ಯಾಚ್ ಪಾಸ್ ಇರಲೇಬೇಕು. ಪ್ರತಿ ವಾಹನದಲ್ಲೂ GPS ಟ್ರ್ಯಾಕಿಂಗ್ ವ್ಯವಸ್ಥೆ ಇರಬೇಕು ಮತ್ತು ಮಾರಾಟದ ದರವನ್ನು ಜಿಲ್ಲಾ ಗಣಿಗಾರಿಕೆ ಅಧಿಕಾರಿಗಳು ನಿಗದಿ ಮಾಡುತ್ತಾರೆ. ಸಾಮಾನ್ಯವಾಗಿ ಪ್ರತಿ ಟ್ರ್ಯಾಕ್ಟರ್ ಮರಳಿಗೆ ₹800 ರಿಂದ ₹1,200 ಹಾಗೂ ಪ್ರತಿ ಲಾರಿ ಲೋಡ್‌ಗೆ ₹3,000 ರಿಂದ ₹5,000 ವರೆಗೆ ದರ ನಿಗದಿಯಾಗಿರುತ್ತದೆ (ಆಯಾ ಪ್ರದೇಶಕ್ಕೆ ತಕ್ಕಂತೆ ದರ ಬದಲಾಗುತ್ತದೆ). ಈ ಮಿತಿಗಿಂತ ಹೆಚ್ಚಾಗಿ ಮಾರಾಟ ಮಾಡಿದರೆ ಅಥವಾ ಅನುಮತಿಯಿಲ್ಲದೆ ಸಾಗಣೆ ಮಾಡಿದರೆ ಅದು ಅಕ್ರಮ ವ್ಯಾಪಾರವೆಂದು ಪರಿಗಣಿಸಲಾಗುತ್ತದೆ. ನಿಯಮ ಉಲ್ಲಂಘನೆಗೆ ದಂಡ ವಿಧನೆ Karnataka Minor Mineral Concession (Amendment) Rules, 2024 ಪ್ರಕಾರ —GPS ಇಲ್ಲದೆ ಮರಳು ಸಾಗಿಸಿದರೆ ₹25,000 ದಂಡ. ನಿಗದಿತ ಸ್ಥಳಕ್ಕಿಂತ ಬೇರೆಡೆ ಖಾಲಿ ಮಾಡಿದರೆ ₹10,000 ದಂಡ. GPS ತಿದ್ದಾಟ ಮಾಡಿದರೆ ₹5,000 ದಂಡ. ಡಿಸ್ಪ್ಯಾಚ್ ಪಾಸ್ ಇಲ್ಲದೆ ಸಾಗಿಸಿದಲ್ಲಿ ರಾಯಲ್ಟಿಯ ಐದು ಪಟ್ಟು ದಂಡ. ಇದಲ್ಲದೆ, ಅನುಮತಿ ಇಲ್ಲದೆ ಮರಳು ಸಾಗಣೆ ಮಾಡಿದ ವಾಹನಗಳನ್ನು ವಶಪಡಿಸಿಕೊಳ್ಳುವ ಅಧಿಕಾರ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ನೀಡಲಾಗಿದೆ.

ಕ್ರಮಕೈಗೊಳ್ಳದ ಇಲಾಖೆ ಮೇಲೆ ಅನುಮಾನ, ಎಲ್ಲಾ ಕಾನೂನುಗಳು ಸ್ಪಷ್ಟವಾಗಿದ್ದರೂ, ಅಧಿಕಾರಿಗಳು ಇನ್ನೂ ಕ್ರಮ ಕೈಗೊಳ್ಳಲದೆ ಇರುವುದು ಏಕೆ ಎಂಬುದು ಪ್ರಶ್ನೆ ಮೂಡುವಂತೆ ಮಾಡಿದೆ. ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಏನು ಕ್ರಮ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...